ಬೆಂಗಳೂರು: ಇಸ್ರೋ ಪ್ರಧಾನ ಕಚೇರಿಗೆ 4 ದಿನಗಳಲ್ಲಿ 3ನೇ ಬಾರಿ ಬಾಂಬ್ ಬೆದರಿಕೆ – Kannada News | ISRO Headquarters in Bengaluru Receives Third Bomb Threat Email in Four Days; Kalaburagi Court Targeted Too
ಇಸ್ರೋ (ಸಾಂದರ್ಭಿಕ ಚಿತ್ರ)Image Credit source: TV9 Network ಬೆಂಗಳೂರು, ಜುಲೈ 7: ರಾಜಧಾನಿ ಬೆಂಗಳೂರಿನ (Bengaluru) ನ್ಯೂ ಬಿಇಎಲ್ ರಸ್ತೆಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಪ್ರಧಾನ ಕಚೇರಿಗೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮತ್ತೊಂದು ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಇಸ್ರೋ ಸಂಸ್ಥೆಗೆ ಬಂದಿರುವ ಮೂರನೇ ಬಾಂಬ್ ಬೆದರಿಕೆ ಇಮೇಲ್ ಇದಾಗಿದೆ. ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಇಸ್ರೋ ಸಿಬ್ಬಂದಿ ಇಂಗ್ಲಿಷ್‌ನಲ್ಲಿ ಬಂದಿದ್ದ ಈ ಇಮೇಲ್ ಗಮನಿಸಿದ್ದು,…