ವಿಶ್ವಗುರು ಬಸವಣ್ಣ-ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಮಾತು: ಸಿಡಿದೆದ್ದ ಅನುಯಾಯಿಗಳು
ವಿಜಯಪುರ, ಮಾರ್ಚ್ 12: ಜಗತ್ತಿಗೆ ಸಮಾನತೆಯನ್ನು ಸಾರಿದ ವಿಶ್ವಗುರು ಬಸವಣ್ಣ (Basavanna) ಹಾಗೂ ವೈರಾಗ್ಯಮೂರ್ತಿ, ವಚನಗಾರ್ತಿ ಅಕ್ಕಮಹಾದೇವಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕವಾದ ಹಾಗೂ ಅಶ್ಲೀಲ ಪದಗಳ ಸಹಿತ ಬರವಣಿಗೆ ಪೋಸ್ಟ್ ಮಾಡಿ ಹರಿಬಿಡಲಾಗಿದೆ. ಫೇಸ್ಬುಕ್ನಲ್ಲಿ ಹರಿ ಬಿಟ್ಟವರ ವಿರುದ್ದ ಬಸವ ಅನುಯಾಯಿಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ನಿಂದನೆ ಪೋಸ್ಟ್ ಬಸವ ಜನ್ಮಭೂಮಿ ವಿಜಯಪುರ ಜಿಲ್ಲೆಯಲ್ಲಿ ಬಸವಾದಿ ಶರಣರ ಅನುಯಾಯಿಗಳ ಆಕ್ರೋಶಗೊಂಡಿದ್ಧಾರೆ. ನ್ಯಾಯಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು…