RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!
IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…