ಅಕೌಂಟ್ ನಲ್ಲಿ 1 ಕೋಟಿ ಬ್ಯಾಲೆನ್ಸ್: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿ 7 ದಿನಗಳಾದ್ರೂ ಸಿಗದ ಟೆಕ್ಕಿ ಅದ್ವೈತ್ ಸುಳಿವು – Kannada News | Techie advaith Still missing from 6 days In shivagange hills, Now Police Starts technical evidence

ಬೆಂಗಳೂರು, (ಆಗಸ್ಟ್ 14): ಬೆಂಗಳೂರು ಹೊರವಲಯ ನೆಲಮಂಗಲ (Nelamangala) ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ  (Shivanange Betta Trekking) ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಅದ್ವೈತ್ ಉಪಾಧ್ಯಾಯನಿಗಾಗಿ (Techie Advaith) ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಇಂದು ಬ್ರೇಕ್ ಬಿದ್ದಿದೆ. ಕಳೆದ 6 ದಿನಗಳಿಂದ ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ), ನೆಲಮಂಗಲ ಟೌನ್‌ ಮತ್ತು ಡಾಬಸ್‌ಪೇಟೆ ಪೊಲೀಸರು, ಅರಣ್ಯ ಸಿಬ್ಬಂದಿ, ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್‌ ಹಾಗೂ ಸ್ಥಳೀಯರು ಜಂಟಿಯಾಗಿ ಬೆಟ್ಟ, ಕಂದಕ ಮತ್ತು ಕಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದರು. ಇಷ್ಟೆಲ್ಲಾ ಶೋಧ ನಡೆಸಿದರೂ ಅದ್ವೈತ್‌ ಬಗ್ಗೆ ಒಂದೇ ಒಂದು ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಮೋರೆ ಹೋಗಿದ್ದಾರೆ.

ಟೆಕ್ನಿಕಲ್  ಎವಿಡೆನ್ಸ್​  ಮೊರೆ ಹೋದ ಪೊಲೀಸ್ರು

ಶಿವಗಂಗೆಯಲ್ಲಿ ಅದ್ವೈತ್ ನಾಪತ್ತೆಯಾಗಿ ಇಂದಿಗೆ 7 ದಿನ ಕಳೆದಿದೆ ನಿನ್ನೆವರೆಗೂ ತಲಾಶ್ ನಡೆಸಿದ್ದ ಸಿಬ್ಬಂದಿ, 6 ದಿನಗಳು 60 ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಶಿವಗಂಗೆಯ ಇಂಚಿಂಚೂ ಸ್ಥಳವನ್ನ ತಲಾಶ್ ನಡೆಸಿದ್ದಾರೆ. ಆದರೂ ಸಣ್ಣ ಸುಳವು ಸಹ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸಿದ್ದ ಸಿಬ್ಬಂದಿ ಅದ್ವೈತ್ ಇಲ್ಲಿ ಬಿದ್ದೆ ಇಲ್ಲ ಅಂತ ಹೇಳಿದ್ದಾರೆ. ಇದರಿಂದ ಕಾಡುಗೋಡಿ ಪೊಲೀಸ್ರು ಟೆಕ್ನಿಕಲ್ ಎವಿಡೆನ್ಸ್ ಕಲೆಹಾಕುತ್​ತಿದ್ದಾರೆ.

ಅದ್ವೈತ್ ಅಕೌಂಟ್ ನಲ್ಲಿ 1 ಕೋಟಿ ಹಣ

ಎವಿಡೆನ್ಸ್ ತನಿಖೆಯಲ್ಲಿ ಅದ್ವೈತ್ ಅಕೌಂಟ್ ನಲ್ಲಿ 1 ಕೋಟಿ ರೂಪಾಯಿ ಇರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಅಕೌಂಟ್ ನಿಂದ ವಹಿವಾಟಿನ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಇನ್ನೂ ಅದ್ವೈತ್ ಸುತ್ತಮುತ್ತಲಿನ ಜನ ಫೋನ್ ಮೇಲೆ ನಿಗಾ ವಹಿಸಿದ್ದಾರೆ. ಅದ್ವೈತ್‌ನ ಕೊನೆಯ ಚಟುವಟಿಕೆಗಳು ಹಾಗೂ ನಾಪತ್ತೆಯಾಗಿರುವ ಸಂದರ್ಭದ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಮುಂದಿನ ತನಿಖೆಯಲ್ಲಿ ಪ್ರಕರಣಕ್ಕೆ ಯಾವ ತಿರುವು ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs SL: ಆಗಸ್ಟ್ 15 ರಂದು ಐತಿಹಾಸಿಕ ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | India vs Sri Lanka 1st Test: India’s 600th! Date, Venue, Time and Live Stream

ಒಂದು ತಿಂಗಳ ದೀರ್ಘ ವಿರಾಮದ ನಂತರ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿಯುತ್ತಿದೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆಯಿಂದ ಅಂದರೆ ಆಗಸ್ಟ್ 15 ರಿಂದ ಆರಂಭವಾಗುತ್ತಿದೆ. ಈ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯವಾಗಿದೆ. ಏಕೆಂದರೆ ಟೀಂ ಇಂಡಿಯಾಕ್ಕೆ ಇದು 600ನೇ ಟೆಸ್ಟ್ ಪಂದ್ಯವಾಗಿದೆ. ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ಕೂಡ ಸ್ಥಾನ ಪಡೆದಿದೆ. ಅಲ್ಲದೆ 600 ಟೆಸ್ಟ್ ಪಂದ್ಯಗಳನ್ನಾಡಿದ ಮೂರನೇ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ. ಹೀಗಾಗಿ ಈ ಐತಿಹಾಸಿಕ ಪಂದ್ಯವನ್ನು ಗೆದ್ದು ಸ್ಮರಣೀಯವಾಗಿಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಆದರೆ ಅದಕ್ಕೂ ಮುನ್ನ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭವಾಗಲಿದೆ ಮತ್ತು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು ಎಂಬುದರ ಪೂರ್ಣ ವಿವರವನ್ನು ನೋಡೋಣ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರ ಶನಿವಾರ ಆರಂಭವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವು ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 9:30 ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಮೊಬೈಲ್‌ನಲ್ಲಿ ನೋಡುವುದು ಹೇಗೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು ಸೋನಿ ಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್​ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸರನ್ಶ್ ಜೈನ್, ಔಕಿಬ್ ನಬಿ, ಸರ್ಫರಾಜ್ ಖಾನ್.

ಗಾಲೆ ಟೆಸ್ಟ್ ಪಂದ್ಯಕ್ಕೆ ತಂಡ: ಧನಂಜಯ ಡಿ ಸಿಲ್ವ(ನಾಯಕ), ಲಹಿರು ಉದಾನ, ನಿಶಾನ್ ಮದುಷ್ಕ, ಕಮಿಂದು ಮೆಂಡಿಸ್, ದಿನೇಶ್ ಚಾಂಡಿಮಲ್, ಪಸಿಂದು ಸೂರಿಯಬಂಡಾರ, ಸೋನಾಲ್ ದಿನುಶಾ, ನಿರೋಶನ್ ಡಿಕ್ವೆಲ್ಲಾ, ರಮೇಶ್ ಮೆಂಡಿಸ್, ಪ್ರಭಾತ್ ಜಯಸೂರ್ಯ, ಕೇಶರ ನುವಂತ, ಮಿಲನ್ ರತ್ನಾಯಕೆ, ಅಸಿತ ಫೆರ್ನಾಂಡೋ, ಲಹಿರು ಕುಮಾರ, ವಿಶ್ವ ಫೆರ್ನಾಂಡೋ, ದಿಲ್ಶನ್ ಮಧುಶಂಕ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗಳ ವಯಸ್ಸಿನ ನಟಿ ಜೊತೆ ಗೋವಿಂದ ಸುತ್ತಾಟ; ಕೆಂಡಾಮಂಡಲ ಆದ ಪತ್ನಿ ಸುನೀತಾ – Kannada News | Govinda wife Sunita Ahuja slams him over alleged relationship with Komal Rani

ಒಂದು ಕಾಲದಲ್ಲಿ ಸ್ಟಾರ್ ಹೀರೋ ಆಗಿದ್ದ ನಟ ಗೋವಿಂದ (Govinda) ಹಾಗೂ ಅವರ ಪತ್ನಿ ಸುನೀತಾ ಅಹುಜಾ (Sunita Ahuja) ನಡುವಿನ ವೈಯಕ್ತಿಕ ಸಂಘರ್ಷ ಮತ್ತೊಮ್ಮೆ ಸಾರ್ವಜನಿಕವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ನಟಿ ಕೋಮಲ್ ರಾಣಿ (Komal Rani) ಜೊತೆಗೆ ಗೋವಿಂದ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ, ಪತ್ನಿ ಸುನೀತಾ ಅವರು ತಮ್ಮ ಪತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸುನೀತಾ, ‘ತನ್ನ ಮಗಳ ವಯಸ್ಸಿನ ಹುಡುಗಿಯನ್ನು ಜೊತೆಯಲ್ಲಿ ಕರೆದುಕೊಂಡು ತಿರುಗಾಡಲು ಅವನಿಗೆ ಕನಿಷ್ಠ ನಾಚಿಕೆಯಾಗಬೇಕು’ ಎಂದು ಗೋವಿಂದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಈ ರೀತಿ ಹೇಳಿಕೆ ನೀಡುವ ಮೂಲಕ ಗೋವಿಂದ ಮೇಲೆ ತಮಗೆ ಇರುವ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕೋಮಲ್ ರಾಣಿ ವಿರುದ್ಧ ಸುನೀತಾ ವ್ಯಂಗ್ಯ:

ಗೋವಿಂದ ಅವರು ತಮ್ಮ ಮುಂಬರುವ ‘ರೂಪಾ’ ಸಿನಿಮಾದ ಪ್ರಚಾರದಲ್ಲಿ ಕೋಮಲ್ ರಾಣಿ ಜೊತೆ ಸಕ್ರಿಯರಾಗಿರುವುದರ ಕುರಿತು ಪಾಪಾರಾಜಿಗಳು ಪ್ರಶ್ನಿಸಿದಾಗ, ಸುನೀತಾ ತೀವ್ರವಾಗಿ ವ್ಯಂಗ್ಯವಾಡಿದ್ದಾರೆ. ‘ಮೊದಲನೆಯದಾಗಿ ಸಿನಿಮಾ ಪೂರ್ಣಗೊಳ್ಳಬೇಕು, ಪ್ರಚಾರವೆಲ್ಲ ಸಿನಿಮಾ ಮುಗಿದ ನಂತರ ಅಲ್ಲವೇ? ಆದರೆ ಇಲ್ಲಿ ಸಿನಿಮಾ ಪೂರ್ಣಗೊಳ್ಳುವ ಮುನ್ನವೇ ಪ್ರಚಾರ ನಡೆಯುತ್ತಿದೆ’ ಎಂದು ಲೇವಡಿ ಮಾಡಿದ್ದಾರೆ.

ವಿನಾಶ ಕಾಲೇ ವಿಪರೀತ ಬುದ್ಧಿ:

ಇಷ್ಟಕ್ಕೇ ನಿಲ್ಲಿಸದ ಅವರು ಕೋಮಲ್ ರಾಣಿಯನ್ನು ಉದ್ದೇಶಿಸಿ, ‘ನಿಮ್ಮ ಶುಗರ್ ಡ್ಯಾಡಿ ಅಷ್ಟೊಂದು ಶ್ರೀಮಂತನಾಗಿದ್ದರೆ, ಮೊದಲು ಸರಿಯಾದ ಬಟ್ಟೆ ಧರಿಸುವುದನ್ನು ಕಲಿಯಿರಿ. ನಮ್ಮ ಶೈಲಿಯನ್ನು ನೋಡಿ ಕಲಿಯಿರಿ’ ಎಂದು ತಿರುಗೇಟು ನೀಡಿದ್ದಾರೆ. ಗೋವಿಂದ ಅವರ ನಡವಳಿಕೆಯನ್ನು ಖಂಡಿಸಿದ ಸುನೀತಾ, ‘ವಿನಾಶ ಕಾಲೇ ವಿಪರೀತ ಬುದ್ಧಿ ಎಂಬ ನಾಣ್ಣುಡಿಯನ್ನು ನೀವು ಕೇಳಿರಬಹುದು. ಅವನ ಬುದ್ಧಿ ಭ್ರಷ್ಟವಾಗಿದೆ. ಅದಕ್ಕಾಗಿಯೇ ಇಂತಹ ಕೆಲಸಗಳನ್ನು ಮಾಡುತ್ತಿದ್ದಾನೆ’ ಎಂದಿದ್ದಾರೆ.

ಇದನ್ನೂ ಓದಿ: ‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ

ಜನರು ಗೋವಿಂದ ಅವರನ್ನು ‘ಚೀಟರ್ ನಂಬರ್ ಒನ್’ ಎಂದು ಕರೆಯುತ್ತಿರುವ ಬಗ್ಗೆ ಕೇಳಿದಾಗ, ‘ನಾನು ಗೋವಿಂದ ಅವರ ಅಫೇರ್ ಕುರಿತು ಮಾತನಾಡಿದಾಗ ಅವರ ಅಭಿಮಾನಿಗಳು ನನ್ನನ್ನೇ ಟ್ರೋಲ್ ಮಾಡುತ್ತಿದ್ದರು. ಈಗ ನಾನು ಗೋವಿಂದ ಅವರ ಅಭಿಮಾನಿಗಳು ಹಾಗೂ ಮಾಧ್ಯಮಗಳನ್ನು ಕೇಳಲು ಬಯಸುತ್ತೇನೆ, ನಿಮ್ಮ ಬಳಿ ಈಗ ಏನು ಉತ್ತರವಿದೆ? ನನ್ನನ್ನು ಏನೂ ಕೇಳಬೇಡಿ, ನನಗೆ ಇದರಲ್ಲಿ ಯಾವುದೇ ಆಸಕ್ತಿಯಿಲ್ಲ’ ಎಂದು ನೇರವಾಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ದ್ರೌಪದಿ ಮುರ್ಮು – Kannada News | Operation Sindoor Sent Firm Message To Terrorists President Droupadi Murmu

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu), ಭಯೋತ್ಪಾದಕ ಜಾಲಗಳ ವಿರುದ್ಧ ದಾಳಿ ನಡೆಸುವ ಭಾರತೀಯ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ‘ಆಪರೇಷನ್ ಸಿಂಧೂರ್’ ಪ್ರದರ್ಶಿಸಿದೆ. ಈ ಕಾರ್ಯಾಚರಣೆ ಭಯೋತ್ಪಾದಕರಿಗೆ ಪ್ರಬಲ ಸಂದೇಶ ರವಾನಿಸಿದೆ ಎಂದು ಹೇಳಿದರು. ಸಿಂಧೂ ನದಿ ನೀರು ಒಪ್ಪಂದದ ಕುರಿತು ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ದೇಶದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸಿರುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲಿ, ಅದರಲ್ಲೂ ವಿಶೇಷವಾಗಿ ರೈತರಿಗಾಗಿ ತೆಗೆದುಕೊಂಡ ನಿರ್ಣಾಯಕ ಹೆಜ್ಜೆಯಾಗಿದೆ ಎಂದರು.

“ಮೂರೂ ಸಶಸ್ತ್ರ ಪಡೆಗಳು, ಎಲ್ಲಾ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆಯನ್ನು ನಾನು ಶ್ಲಾಘಿಸುತ್ತೇನೆ. ಜಾಗತಿಕ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿಸುತ್ತಿರುವ ಭಾರತೀಯರನ್ನು ಹಾಗೂ ವಿದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏಷ್ಯಾಕಪ್ ಜೊತೆಗೆ ಏಷ್ಯನ್ ಗೇಮ್ಸ್​ನಿಂದಲೂ ಹೊರಬಿದ್ದ ಜೆಮಿಮಾ ರೊಡ್ರಿಗಸ್

Source link

“ಇಟಲಿಯೊಂದಿಗೆ ಬಲವಾದ ಸಂಬಂಧವಿದೆ”; ಮೆಲೋನಿ ಕುರಿತ ಕಾಂಗ್ರೆಸ್​​ ಟೀಕೆಗೆ ಕೇಂದ್ರ ಸರ್ಕಾರ ತಿರುಗೇಟು – Kannada News | MEA says We have strong ties with Italy; responds to Congress MP Rahul Gandhis Meloni jibe

ನವದೆಹಲಿ, ಆಗಸ್ಟ್ 14: ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಕಾಂಗ್ರೆಸ್ ನಾಯಕರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕುರಿತು ಲೇವಡಿ ಮಾಡಿದ್ದರು. ಇದರ ಬೆನ್ನಲ್ಲೇ ಭಾರತ ಇದಕ್ಕೆ ಪ್ರತಿಕ್ರಿಯಿಸಿದ್ದು, ಭಾರತ ಮತ್ತು ಇಟಲಿಯ ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಪರಸ್ಪರ ಗೌರವ ಮತ್ತು ಅರ್ಥಮಾಡಿಕೊಳ್ಳುವಿಕೆ ಮುಖ್ಯ ಎಂದು ಭಾರತ ಪ್ರತಿಪಾದಿಸಿದೆ. ಹಾಗೇ, ಎರಡೂ ದೇಶಗಳು ಆಳವಾದ ಮತ್ತು ಗಟ್ಟಿಯಾದ ಬಾಂಧವ್ಯವನ್ನು ಹಂಚಿಕೊಂಡಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ರಾಹುಲ್ ಗಾಂಧಿ ವ್ಯಂಗ್ಯ:

ವಿದೇಶಾಂಗ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ನಿರ್ವಹಿಸುತ್ತಿರುವ ರೀತಿಯ ಬಗ್ಗೆ ಲೇವಡಿ ಮಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿಶ್ವನಾಯಕರನ್ನು ತಬ್ಬಿಕೊಳ್ಳುವ ರೀತಿಯನ್ನು ಅಣಕಿಸಿದ್ದಕ್ಕಾಗಿ ಬಿಜೆಪಿ ವಾಗ್ದಾಳಿ ನಡೆಸಿದೆ. ನಿನ್ನೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸ್ಕೃತಿರಹಿತ ಮತ್ತು ಅಸಭ್ಯ ಭಾಷೆಯನ್ನು ಬಳಸಿದ್ದಾರೆ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನದ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ

“ನಾವು ಇಟಲಿಯೊಂದಿಗೆ ಆಳವಾದ ಮತ್ತು ಬಲವಾದ ಬಾಂಧವ್ಯವನ್ನು ಹಂಚಿಕೊಂಡಿದ್ದೇವೆ. ಈ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಬದ್ಧರಾಗಿದ್ದೇವೆ. 2 ದೇಶಗಳ ನಡುವಿನ ಸ್ನೇಹ ಮತ್ತು ದ್ವಿಪಕ್ಷೀಯ ಬಾಂಧವ್ಯದ ವಿಷಯ ಬಂದಾಗ, ಅದನ್ನು ಪರಸ್ಪರ ಗೌರವ ಮತ್ತು ಅರ್ಥಮಾಡಿಕೊಳ್ಳುವಿಕೆಯ ಚೌಕಟ್ಟಿನೊಳಗೆ ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ತಿಳಿಸಿದೆ.

ದೆಹಲಿಯಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ತಮ್ಮ ಪಕ್ಷದ ನಾಯಕ ಸಂದೀಪ್ ದೀಕ್ಷಿತ್ ಅವರನ್ನು ತಬ್ಬಿಕೊಳ್ಳುವ ಮೂಲಕ ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯನ್ನು ಅಣಕಿಸಿದ್ದರು. ಪ್ರಧಾನಿಯವರು ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವಂತಹ ಸಾಂಕೇತಿಕ ನಡವಳಿಕೆಗಳಿಗಷ್ಟೇ ಗಮನ ಕೊಟ್ಟು ರಾಜತಾಂತ್ರಿಕತೆಯನ್ನು ಅತ್ಯಂತ ಸರಳೀಕೃತಗೊಳಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಪರೋಕ್ಷವಾಗಿ ಟೀಕಿಸಿದ್ದರು. ಈ ವೇಳೆ ಸಂದೀಪ್ ದೀಕ್ಷಿತ್ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹೆಸರನ್ನು ಎಳೆದು ತಂದು ವ್ಯಂಗ್ಯಾತ್ಮಕವಾಗಿ ಮಾತನಾಡಿದ್ದರು. ಇದಕ್ಕೆ ರಾಹುಲ್ ಗಾಂಧಿ ಕೂಡ ಸಾಥ್ ನೀಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ‘ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ’; ರಾಹುಲ್ ಗಾಂಧಿ ವ್ಯಂಗ್ಯ

ಬಿಜೆಪಿಯಿಂದ ತೀವ್ರ ವಾಗ್ದಾಳಿ:

ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ರಾಹುಲ್ ಗಾಂಧಿ ಯಾವಾಗ ದೊಡ್ಡವರಾಗುತ್ತಾರೆ? ಎಂದು ಪ್ರಶ್ನಿಸಿದ್ದರು. “ರಾಹುಲ್ ಗಾಂಧಿ ಅವರೇ, ನೀವು ಯಾವಾಗ ಪ್ರಬುದ್ಧರಾಗುತ್ತೀರಿ? ಭಾರತವನ್ನು ಮುನ್ನಡೆಸಲು ಪ್ರಬುದ್ಧ ನಾಯಕತ್ವ ಬೇಕೇ ಹೊರತು ಅನನುಭವಿ ನಾಟಕಗಳಲ್ಲ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ‘ಜೋಕರ್‌ಗಳು ಮತ್ತು ಕೋಡಂಗಿಗಳು’ ಎಂದು ಕರೆಯುವುದು ನಿಮ್ಮ ಅಪಕ್ವತೆಯನ್ನು ತೋರಿಸುತ್ತದೆ” ಎಂದು ಪ್ರಲ್ಹಾದ್ ಜೋಶಿ ಹೇಳಿದ್ದರು.

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕೂಡ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ, “ರಾಹುಲ್ ಗಾಂಧಿ ಮಾನಸಿಕವಾಗಿ ಹತಾಶರಾಗಿದ್ದಾರೆ” ಎಂದಿದ್ದರು. ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿಗೆ ಚಿಕಿತ್ಸೆ ಕೊಡಿಸಲಿ” ಎಂದು ವ್ಯಂಗ್ಯವಾಡಿದ್ದರು. “ರಾಹುಲ್ ಗಾಂಧಿ ಮಾನಸಿಕವಾಗಿ ಹತಾಶರಾದಂತೆ ಕಾಣುತ್ತಿದ್ದಾರೆ. ಅವರ ನಡವಳಿಕೆಯು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದೆ. ಸೋನಿಯಾ ಗಾಂಧಿಯವರು ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳದಿದ್ದರೆ ಪರಿಸ್ಥಿತಿ ಗಂಭೀರವಾಗಬಹುದು” ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್ – Kannada News | Yash Toxic movie Bengaluru Set Budget Rs 75 Crore says Art Director Mohan B Kere

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಿದೆ. ಯಶ್ ನಟನೆಯ ಈ ಚಿತ್ರಕ್ಕೆ ಮೋಹನ್ ಬಿ. ಕೆರೆ ಅವರು ಕಲಾ ನಿರ್ದೇಶನ ಮಾಡಿದ್ದಾರೆ. ತಮಗೆ ಈ ಅವಕಾಶ ಸಿಕ್ಕಿದ್ದಕ್ಕೆ ಅವರು ಖುಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೋಹನ್ ಬಿ. ಕೆರೆ ಅವರು ‘ಟಾಕ್ಸಿಕ್’ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದರು. ಆ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಈ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದ್ದೆವು. ನಾನು ಬಿಟ್ಟುಕೊಡಲು ಸಾಧ್ಯವಾಗದ ರಹಸ್ಯಗಳು ಸಾಕಷ್ಟು ಇವೆ. ಸಿನಿಮಾ ಎಂಬುದೇ ಒಂದು ಕುತೂಹಲ. ಅದನ್ನು ನಾವು ಚಿತ್ರಮಂದಿರಕ್ಕೆ ಬಂದು ಎಂಜಾಯ್ ಮಾಡಬೇಕು. ಬೆಂಗಳೂರಿನಲ್ಲಿ ಈ ಸಿನಿಮಾಗೆ 10ಕ್ಕೂ ಅಧಿಕ ಸೆಟ್ ಹಾಕಿದ್ದೆವು. ಅದಕ್ಕಾಗಿ ಅಂದಾಜು 75 ಕೋಟಿ ರೂಪಾಯಿ ತನಕ ಖರ್ಚು ಆಗಿದೆ’ ಎಂದು ಅವರು ಹೇಳಿದ್ದಾರೆ. ಒಟ್ಟಾರೆಯಾಗಿ ಸೆಟ್ ನಿರ್ಮಾಣದ ಕೆಲಸ ಹೇಗೆ ನಡೆಯಿತು ಎಂಬುದನ್ನು ಮೋಹನ್ ಬಿ. ಕೆರೆ ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Asia Cup 2026: ಏಷ್ಯಾಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ; ಜೆಮಿಮಾ, ಶ್ರೇಯಾಂಕ ಔಟ್..! – Kannada News | India Women’s Squad for 2026 T20 Asia Cup Announced: Kaur to Lead, Mandhana VC

ಇದೇ ಆಗಸ್ಟ್ 28 ರಿಂದ ಪ್ರಾರಂಭವಾಗಲಿರುವ 2026 ರ ಮಹಿಳಾ ಟಿ20 ಏಷ್ಯಾಕಪ್​ಗೆ (Women’s T20 Asia Cup 2026) ಭಾರತ ಮಹಿಳಾ ತಂಡವನ್ನು (India Women’s Squad) ಪ್ರಕಟಿಸಲಾಗಿದೆ. ಎಂದಿನಂತೆ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್ (Harmanpreet Kaur) ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಳಿದಂತೆ ತಂಡದಲ್ಲಿ ನಿರೀಕ್ಷಿತ ಹೆಸರುಗಳೇ ಇವೆ. ಆದರೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಗಾಯದಿಂದಾಗಿ ಈ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹಾಗೆಯೇ ಕನ್ನಡತಿ ಶ್ರೇಯಾಂಕ ಪಾಟೀಲ್ ಕೂಡ ಗಾಯದಿಂದ ಇನ್ನು ಚೇತರಿಸಿಕೊಳ್ಳದ ಕಾರಣ ತಂಡದಲ್ಲಿ ಆಯ್ಕೆಯಾಗಿಲ್ಲ.

ತಂಡ ಹೀಗಿದೆ

ಬ್ಯಾಟಿಂಗ್‌ ವಿಭಾಗವನ್ನು ನೋಡುವುದಾದರೆ.. ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಜೆಮಿಮಾ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಅವರ ಸ್ಥಾನದಲ್ಲಿ ಭಾರತಿ ಫುಲ್‌ಮಾಲಿ ಬರಬಹುದು. 4ನೇ ಕ್ರಮಾಂಕದಲ್ಲಿ ನಾಯಕಿ ಹರ್ಮನ್​ಪ್ರೀತ್ ಕೌರ್ ಆಡಿದರೆ, ವಿಕೆಟ್‌ಕೀಪರ್ ಪಾತ್ರದಲ್ಲಿ ರಿಚಾ ಘೋಷ್ ಕಾಣಿಸಿಕೊಳ್ಳಲಿದ್ದಾರೆ.

ಆಲ್‌ರೌಂಡರ್ ಆಗಿ ದೀಪ್ತಿ ಶರ್ಮಾ, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರಾಧಾ ಯಾದವ್ ಆಡಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅನುಭವಿ ರೇಣುಕಾ ಠಾಕೂರ್, ನಂದನಿ ಶರ್ಮಾ ಇದ್ದರೆ, ಸ್ಪಿನ್ನರ್‌ಗಳಾಗಿ ಶ್ರೀಚರಣಿ, ಪ್ರೇಮಾ ರಾವತ್ ತಂಡದಲ್ಲಿದ್ದಾರೆ. ಎರಡನೇ ವಿಕೆಟ್​ ಕೀಪರ್ ಆಗಿ ಜಿ. ಕಮಲಿನಿ ಹಾಗೂ ಮತ್ತೊಬ್ಬ ಆರಂಭಿಕ ಆಟಗಾರ್ತಿಯಾಗಿ ಪ್ರತಿಕಾ ರಾವಲ್ ತಂಡದಲ್ಲಿದ್ದಾರೆ.

ಏಷ್ಯಾಕಪ್‌ಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಭಾರತಿ ಫುಲ್‌ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ಜಿ. ಕಮಲಿನಿ (ವಿಕೆಟ್‌ಕೀಪರ್), ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ನಂದನಿ ಶರ್ಮಾ, ಕ್ರಾಂತಿ ಗೌಡ್, ಪ್ರತೀಕಾ ರಾವಲ್.

ಏಷ್ಯಾಕಪ್ ಸಮೀಪಿಸುತ್ತಿರುವ ಬೆನ್ನಲ್ಲೇ ಗಾಯಕ್ಕೆ ತುತ್ತಾದ ಜೆಮಿಮಾ ರೊಡ್ರಿಗಸ್

ಏಷ್ಯಾಕಪ್ ಯಾವಾಗ ಪ್ರಾರಂಭ?

ಮಹಿಳೆಯರ ಏಷ್ಯಾಕಪ್ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ದುಬೈನಲ್ಲಿ ನಡೆಯಲಿದೆ. ಅತ್ಯಂತ ಯಶಸ್ವಿ ತಂಡವಾದ ಭಾರತ ಆಗಸ್ಟ್ 30 ರಂದು ಥೈಲ್ಯಾಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದ್ದು, ಸೆಪ್ಟೆಂಬರ್ 5 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಬಹುನಿರೀಕ್ಷಿತ ಪಂದ್ಯ ನಡೆಯಲಿದೆ. ಭಾರತ ತಂಡವು ಪಾಕಿಸ್ತಾನ, ಥೈಲ್ಯಾಂಡ್, ಹಾಂಗ್ ಕಾಂಗ್, ಚೀನಾ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದ್ದರೆ, ಹಾಲಿ ಚಾಂಪಿಯನ್ ಶ್ರೀಲಂಕಾ, ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡಗಳು ಗ್ರೂಪ್ ಬಿ ಯಲ್ಲಿ ಸ್ಥಾನ ಪಡೆದಿವೆ.

ಭಾರತದ ವೇಳಾಪಟ್ಟಿ

  • ಆಗಸ್ಟ್ 30: ಭಾರತ vs. ಥೈಲ್ಯಾಂಡ್
  • ಸೆಪ್ಟೆಂಬರ್ 3: ಭಾರತ vs. ಹಾಂಗ್ ಕಾಂಗ್
  • ಸೆಪ್ಟೆಂಬರ್ 5: ಭಾರತ vs. ಪಾಕಿಸ್ತಾನ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:47 pm, Fri, 14 August 26

Source link

‘ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ’; ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು

ನವದೆಹಲಿ, ಆಗಸ್ಟ್ 14: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಆ ದೇಶದ ಸರ್ಕಾರವು ಅಲ್ಲಿನ ಜನರ ಮೇಲೆ ನಡೆಸುತ್ತಿದೆಯನ್ನಲಾದ ದೌರ್ಜನ್ಯಗಳು ಹಾಗೂ ಆ ಪ್ರದೇಶವನ್ನು ಭಯೋತ್ಪಾದನೆಯ ತಾಣವಾಗಿ ಬಳಸಿಕೊಳ್ಳಲು ಮಾಡುತ್ತಿರುವ ಪ್ರಯತ್ನಗಳನ್ನು ಅಂತಾರಾಷ್ಟ್ರೀಯ ಸಮುದಾಯವು ಗಮನಿಸಬೇಕು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿದೆ. ನಾರ್ವೆಯ ವಿದೇಶಾಂಗ ಸಚಿವರ ಪಾಕಿಸ್ತಾನ ಭೇಟಿಯ ಸಮಯದಲ್ಲಿ ನಡೆದ ಕಾಶ್ಮೀರದ ಕುರಿತ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಸಂಪೂರ್ಣ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗಗಳಾಗಿವೆ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎರಟು ದಶಕ ಕಳೆದರೂ ಸಿಗದ ಪರಿಹಾರ: ಗದಗ ಡಿಸಿ ಕಾರನ್ನೇ ಕೊಂಡೊಯ್ದ ರೈತರು – Kannada News | Gadag DC Car Seized: Court Orders Action Over 20 Year Delay in Singatalur Project Land Compensation

ಕಾರು ಜಪ್ತಿ ಮಾಡಿದ ರೈತರುImage Credit source: tv9 kannada

ಗದಗ, ಆಗಸ್ಟ್​​ 14: ಅದು ಮೂರು ಜಿಲ್ಲೆಯ ಏತ ನೀರಾವರಿ ಯೋಜನೆ. ಈ ಏತ ನೀರಾವರಿ ಯೋಜನೆ ಜಾರಿಯಾದರೆ ನಮ್ಮ ಬದುಕು ಬಂಗಾರವಾಗುತ್ತೆ ಅಂತ ರೈತರು (Farmers) ಯೋಜನೆ ಭೂಮಿ ನೀಡಿದ್ದರು. ಆದರೆ ಭೂಮಿ ಹೋಯ್ತು ಎರಡು ದಶಕಗಳು ಕಳೆದರೂ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಹೀಗಾಗಿ ರೈತರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ ಈಗ ಜಿಲ್ಲಾಧಿಕಾರಿಗಳ ಕಾರು ಸೀಜ್ (Car Seized) ಮಾಡಲು ಆದೇಶ ಮಾಡಿದ್ದು, ಇಂದು ರೈತರು ಡಿಸಿ ಕಾರು ಜಪ್ತಿ ಮಾಡಿದ್ದಾರೆ. ಆದರೆ ಅಧಿಕಾರಿಗಳು, ಸರ್ಕಾರದ ಧೋರಣೆ ವಿರುದ್ಧ ರೈತರು ಕಣ್ಣೀರು ಹಾಕಿ ಆಕ್ರೋಶ ಹೊರಹಾಕಿದರು.

ನನಸಾಗದ ರೈತರ ಕನಸು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೀಡನಾಳ, ಮೇವುಂಡಿ, ಕೊರ್ಲಹಳ್ಳಿ, ಯಕ್ಲಾಪೂರ ಸೇರಿ ಹಲವು ಗ್ರಾಮಗಳ ರೈತರು ತುಂಗಭದ್ರಾ ನದಿಯಿಂದ ಗದಗ, ಕೊಪ್ಪಳ, ಬಳ್ಳಾರಿ ಜಿಲ್ಲೆಯ ಹಳ್ಳಿಗೆ ನೀರಾವರಿ ಯೋಜನೆ ಜಾರಿಗಾಗಿ ಸರ್ಕಾರ ಸಿಂಗಟಾಲೂರ ಏತ ನೀರಾವರಿ ಯೋಜನೆ ಮಾಡಿದೆ. ಆರಂಭದಲ್ಲಿ ಯೋಜನೆ ಜಾರಿಯಾದರೆ ನಮ್ಮ ಜಮೀನುಗಳು ಹಸಿರಾಗುತ್ತವೆ, ಬದುಕು ಬಂಗಾರವಾಗುತ್ತೆ ಅಂತ ಕನಸು ಕಂಡಿದ್ದರು.

ಡಿಸಿ ಕಾರು ಸೀಜ್ ಮಾಡಿ ತೆಗೆದುಕೊಂಡು ಹೋದ ರೈತರು

ಇದೆ ಖುಷಿಯಲ್ಲಿ ಯೋಜನೆಗೆ ಗದಗ ಜಿಲ್ಲೆಯ ನೂರಾರು ಕ್ಕೂ ಹೆಚ್ಚು 350ಕ್ಕೂ ಹೆಚ್ಚು ಎಕರೆ ಭೂಮಿ ಯೋಜನೆ ನೀಡಿದ್ದರು. ಆದರೆ ಎರಡು ದಶಕಗಳು ಕಳೆದರೂ ಸರ್ಕಾರ ಪರಿಹಾರ ನೀಡಿಲ್ಲ. ಹೀಗಾಗಿ ರೈತರು ಕೊರ್ಟ್ ಮೊರೆ ಹೋಗಿದ್ದರು. ಇಂದು ಗದಗ ಜಿಲ್ಲಾ ನ್ಯಾಯಾಲಯ ಗದಗ ಡಿಸಿ ಸಿ ಎನ್ ಶ್ರೀಧರ್ ಅವರ ಕಾರನ್ನೇ ಜಪ್ತಿ ಮಾಡುವ ಆದೇಶ ನೀಡಿದೆ. ಹೀಗಾಗಿ ವಕೀಲರ ಸಮೇತ ಡಿಸಿ ಕಚೇರಿಗೆ ಎಂಟ್ರಿ ಕೊಟ್ಟ ರೈತರ ದಂಡು ಡಿಸಿ ಕಾರು ಸೀಜ್ ಮಾಡಿ ತೆಗೆದುಕೊಂಡು ಹೋದರು.

ಇದನ್ನೂ ಓದಿ: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಲಕ್ಷಾಂತರ ರೂ. ಮೌಲ್ಯದ ಕಂಪ್ಯೂಟರ್, AC ಮಾಯ: ಅಧಿಕಾರಿಗಳೇ ಲೂಟಿ ಮಾಡಿದ್ರಾ?

ಸರ್ಕಾರ, ನೀರಾವರಿ ನಿಗಮ ಹಾಗೂ ಜಿಲ್ಲಾಡಳಿತ ವಿರದ್ಧ ರೈತರು ಕಿಡಿಕಾರಿದ್ದಾರೆ. ಎರಡು ದಶಕಗಳು ಕಳೆದ್ರೂ ಪರಿಹಾರ ನೀಡಿದ ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಿ ಇಂದು ಜಿಲ್ಲಾಡಳಿತ ವಿರುದ್ಧ ಗೆದ್ದು ಬೀಗಿದ್ದಾರೆ. ಒಂದು ಎಕರೆಗೆ 40 ಲಕ್ಷ ರೂ ನೀಡುವಂತೆ ಕೋರ್ಟ್ ಆದೇಶ ಮಾಡಿದೆ ಅಂತ ವಕೀಲರು ಹೇಳಿದ್ದಾರೆ. ಪರಿಹಾರ ನೀಡದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಪೀಠೋಪಕರಣ ಹಾಗೂ ಕಾರು ವಶಕ್ಕೆ ಪಡೆಯಲಾಗಿದೆ.

ಪರಿಹಾರ ನೀಡದೇ ಚೆಲ್ಲಾಟ: ಕಣ್ಣೀರು ಹಾಕಿದ ರೈತ ಮಹಿಳೆ 

ಇನ್ನೂ ಸರ್ಕಾರದ ವಿಳಂಬಕ್ಕೆ ರೈತ ಮಹಿಳೆ ಕಣ್ಣೀರು ಹಾಕಿದರು. ‘ಹತ್ತು ವರ್ಷವಾದ್ರೂ ಸರ್ಕಾರ ಪರಿಹಾರ ಕೊಟ್ಟಿಲ್ಲ ಅಂತ ಕಣ್ಣೀರು ಹಾಕಿದ್ರು. ಗಂಡ ತೀರಿ ಹೋಗಿದ್ದಾನೆ. ಮಕ್ಕಳ್ಳಿಲ್ಲ ಕೋರ್ಟ್ ಮೆಟ್ಟಿಲೇರಿ ಹೋರಾಟ ಮಾಡಿ ಸಾಕಾಗಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು. ಡಿಸಿ, ಅಧಿಕಾರಿಗಳಿಗೆ ಸರ್ಕಾರ ಸಂಬಳ ಕೊಡುತ್ತೆ. ಎಸಿ ರೂಂನಲ್ಲಿ ಹಾಯಾಗಿರ್ತಾರೆ. ನಮ್ಮ ಕಷ್ಟ ಯಾರ ಕೇಳ್ತಾರೆ ಅಂತ ರೈತ ಗದಿಗೆಪ್ಪ ಕಿಡಿ ಕಾರಿದ್ರು. ನಾವು ಗುಡಿಸಲಲ್ಲಿ ವಾಸ ಮಾಡ್ತೀವಿ. ನಮ್ಮ ನೋವು ಯಾವ ಸರ್ಕಾರ ಕೇಳುತ್ತೆ’ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: Gadag Government Hostel Raid: ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ

ಮುಂಡರಗಿ ಭಾಗದ ರೈತರ ಬದುಕು ದೀಪದ ಕೆಳಗೆ ಕತ್ತಲು ಎಂಬಂತಾಗಿದೆ. ಪಕ್ಕದಲ್ಲೇ ತುಂಗಭದ್ರ ನದಿ ಹರಿದರೂ ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಯುತ್ತಿಲ್ಲ. ಈಗ ಜಮೀನು ಇಲ್ಲ, ಪರಿಹಾರದ ಹಣವೂ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಗದಗ ಜಿಲ್ಲೆಯ ಸಚಿವರು, ಶಾಸಕರು ರೈತರ ಸಂಕಷ್ಟಗಳ ಬಗ್ಗೆ ತಲೆ ಕೆಡಿಸಿಕೊಳ್ತಾಯಿಲ್ಲ. ಇನ್ನಾದ್ರೂ ಸರ್ಕಾರ, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರೈತರಿಗೆ ಪರಿಹಾರ ಕೊಡುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version