ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes
ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್ ವಾಹನ ಡಿಕ್ಕಿಯಾಗಿ ಪೊಲೀಸ್ ಸಿಬ್ಬಂದಿ…