ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್! ವಂಚಕನ ಖಾತೆಯಲ್ಲಿ 1000 ಕೋಟಿ ರೂ.ಗೂ ಹೆಚ್ಚು ವಹಿವಾಟು – Kannada News | Davangere Cyber Crime Bust: Police Uncover Rs 1000 plus Crore Fraud Through Single Bank Account
ಆರೋಪಿಗಳಾದ ಅರ್ಫಾತ್ ಪಾಷಾ ಹಾಗೂ ಸಂಜಯ್ ಕುಂದ್ ದಾವಣಗೆರೆ, ಡಿಸೆಂಬರ್ 20: ದಾವಣಗೆರೆ (Davanagere) ಪೊಲೀಸರು ಬಯಲಿಗೆಳೆದಿದ್ದ ಸೈಬರ್ ವಂಚನೆ ಪ್ರಕರಣವೊಂದು ಇದೀಗ ರಾಜ್ಯದಲ್ಲೇ ಅತಿದೊಡ್ಡ ಸೈಬರ್ ಅಪರಾಧ (Cyber Crime) ಪ್ರಕರಣಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಆರಂಭದಲ್ಲಿ ಕೇವಲ 150 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದ್ದ ಈ ಪ್ರಕರಣದಲ್ಲಿ, ಇದೀಗ 1,000 ಕೋಟಿ ರೂಪಾಯಿಗೂ ಅಧಿಕ ಹಣ ವಹಿವಾಟು ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಅವರು…