Headlines

ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್ – Kannada News | Javed Akhtar and Mufti Shamail Nadwi debate on existence of The God

ನವದೆಹಲಿ, ಡಿಸೆಂಬರ್ 21: ಜಗತ್ತಿನ ಎಲ್ಲಾ ಧರ್ಮಗಳನ್ನು ಯಾವುದೇ ಭೇದವಿಲ್ಲದೇ ಕುಟುಕುವ ಬಾಲಿವುಡ್ ಚಿತ್ರ ಸಾಹಿತಿ, ಕವಿ ಹಾಗೂ ವಿಚಾರವಂತರಾದ ಜಾವೇದ್ ಅಖ್ತರ್ (Javed Akhtar), ಮತ್ತೊಮ್ಮೆ ದೇವರ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದಾರೆ. ದಿ ಲಲ್ಲನ್​ಟಾಪ್ ಎನ್ನುವ ಯೂಟ್ಯೂಬ್ ಪೋಡ್​ಕ್ಯಾಸ್ಟ್​ನಲ್ಲಿ ಇಸ್ಲಾಮೀ ವಿದ್ವಾಂಸ ಮುಫ್ತಿ ಷಮಾಯಿಲ್ ನದ್ವಿ (Mufti Shamail Nadwi) ಮತ್ತು ಜಾವೇದ್ ಅಖ್ತರ್ ನಡುವೆ ದೇವರ ಅಸ್ತಿತ್ವ ವಿಚಾರ ಕುರಿತು ನಡೆದ ಚರ್ಚೆ ಸಾಕಷ್ಟು ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ, ಅಖ್ತರ್ ಅವರು ಪ್ಯಾಲೆಸ್ಟೀನ್…

Read More

ಹೆರಿಗೆಗೂ ಮೊದಲೇ ಮೃತಪಟ್ಟ ಹಸುಗೂಸು: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಪುಟ್ಟ ಜೀವ? – Kannada News | Newborn Dies: Medical Negligence Allegations Rock Karnataka Hospital and Spark Protests

ರಾಯಚೂರು/ಹಾವೇರಿ, ಏಪ್ರಿಲ್​​ 28: ಹೆರಿಗೆಗೂ ಮೊದಲೇ  ಹಸುಗೂಸು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಜಂಗಮರ ಹಳ್ಳಿ ಗ್ರಾಮದ ಗುಂಡಪ್ಟ ಅವರ ಪತ್ನಿ ಪರಮ್ಮಳಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ…

Read More

ಕರ್ಣನ ಟಾರ್ಚರ್​​ಗೆ ಬೇಸತ್ತ ತಂದೆ ರಮೇಶ್; ಮುಂದಿದೆ ಮಾರಿ ಹಬ್ಬ – Kannada News | Karna’s Bold Twist: Zee Kannada Serial Sees Silent Karna Confront Father Ramesh

ಜೀ ಕ್ನಡದ ‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣ ಇಷ್ಟು ದಿನ ಸೈಲೆಂಟ್ ಆಗಿ ಇರುತ್ತಿದ್ದ. ತಂದೆ ಏನೇ ಹೇಳಿದರೂ ಅದನ್ನು ಸಹಿಸಿಕೊಳ್ಳುತ್ತಿದ್ದ. ಆದರೆ, ಈಗ ಎಲ್ಲವೂ ಬದಲಾಗಿ ಹೋಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಹೌದು, ಕರ್ಣನು ಈಗ ತಂದೆ ರಮೇಶ್​​ಗೆ ಟಾರ್ಚರ್ ಕೊಡುವ ನಿರ್ಧಾರಕ್ಕೆ ಬಂದಿದ್ದಾನೆ. ಈ ಟಾರ್ಚರ್​​ನಿಂದ ತಂದೆ ಬೇಸತ್ತು ಹೋಗುವ ಎಲ್ಲಾ ಲಕ್ಷಣ ಇದೆ. ಕರ್ಣ ಇಷ್ಟು ದಿನ ತಂದೆಯನ್ನು ಅಪಾರವಾಗಿ ಗೌರವಿಸುತ್ತಿದ್ದ. ಈ ಗೌರವ ಅತಿಯಾಗಿತ್ತು. ತಂದೆಯನ್ನು ಸಾಕಷ್ಟು ಪ್ರೀತಿ ಮಾಡುತ್ತಿದ್ದ. ತಂದೆ…

Read More

‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ – Kannada News

2026ನೇ ಸಾಲಿನ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ಸ್ವಲ್ಪ ಮುಂಚಿತವಾಗಿಯೇ ಆರಂಭ ಆಗಲಿದೆ. ಈ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿ ಈಗಾಗಲೇ ಮಾಹಿತಿ ಹಂಚಿಕೊಂಡಿದೆ. ವಿಶೇಷ ಏನೆಂದರೆ ಈ ಬಾರಿ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲದೇ ಸಾಮಾನ್ಯ ಜನರಿಗೆ ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ. ಅದಕ್ಕಾಗಿ ಆಡಿಷನ್ ನಡೆಸಲಾಗುವುದು. ಈ ಸುದ್ದಿ ಕೇಳಿದ ಬಳಿಕ ಜನಸಾಮಾನ್ಯರಲ್ಲಿ ಆಸೆ…

Read More

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! – Kannada News | NIA, Raw and NSG Join Probe into Explosives Found on PM Modi’s Route in Bengaluru

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು (Gilatine) ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಭಾವಿ ತನಿಖಾ ಸಂಸ್ಥೆಗಳಾದ ಎನ್ಐಎ (NIA), ರಾ (RAW) ಮತ್ತು ಕೇಂದ್ರ ಗುಪ್ತಚರ ಇಲಾಖೆ (IB) ಅಧಿಕಾರಿಗಳು ಈಗ ತನಿಖಾ ಕಣಕ್ಕೆ ಇಳಿದಿದ್ದಾರೆ. ಮುಖ್ಯಾಂಶಗಳು  ಜಿಲೆಟಿನ್ ಪತ್ತೆ ಪ್ರಕರಣದ ತನಿಖೆಗೆ ಎನ್ಐಎ ಮತ್ತು…

Read More

ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ – Kannada News | PM Narendra Modi arrives in Indonesia President Prabowo Subianto welcomed him at airport

ಜಕಾರ್ತ, ಜುಲೈ 6: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ತಮ್ಮ ಮೂರು ದೇಶಗಳ ಅಧಿಕೃತ ಪ್ರವಾಸದ ಮೊದಲ ಭಾಗವಾಗಿ ಇಂಡೋನೇಷ್ಯಾಕ್ಕೆ ತಲುಪಿದ್ದಾರೆ. ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ರಾಜಧಾನಿ ಜಕಾರ್ತಾಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಇಂಡೋನೇಷ್ಯಾದ ಅಧ್ಯಕ್ಷರಾದ ಪ್ರಬೋವೊ ಸುಬಿಯಾಂಟೊ ಅವರು ಬರಮಾಡಿಕೊಂಡರು. ಈ ಭೇಟಿಯ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಹಿಂದೂ ಮಹಾಸಾಗರ ಮತ್ತು ಇಂಡೋ-ಪೆಸಿಫಿಕ್ ವಲಯದಲ್ಲಿ ಜಂಟಿ ಕಡಲ ಭದ್ರತೆಯನ್ನು…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

SSLC ತೃತೀಯ ಭಾಷೆಗೆ ಗ್ರೇಡ್​​ ವಿವಾದ: ರಾಜ್ಯಪಾಲರ ನಿಲುವಿಗೆ ಕರವೇ ಕೆಂಡ; ಸೋಮವಾರ ರಾಜಭವನ ಮುತ್ತಿಗೆಗೆ ಕರೆ

ಬೆಂಗಳೂರು, ಏಪ್ರಿಲ್​​ 04: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿರುವ ವಿಚಾರವೀಗ ಕರ್ನಾಟಕ ರಕ್ಷಣಾ ವೇದಿಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನ ಮುತ್ತಿಗೆಗೆ ಕರವೇ ಮುಂದಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ. ರಾಜ್ಯಪಾಲರ ಪತ್ರದ ಬಗ್ಗೆ ಕಿಡಿ ಕಾರಿರುವ ನಾರಾಯಣಗೌಡ, ಈ ಹಸ್ತಕ್ಷೇಪ…

Read More

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ. ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್…

Read More

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? DRDO RAC ಪ್ರಕಟಿಸಿರುವ ಅಧಿಸೂಚನೆಯ…

Read More