ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಸಂಕಷ್ಟದಲ್ಲಿ: ಸಿಬ್ಬಂದಿಗೆ ಸಿಗುತ್ತಿಲ್ಲ ಸಂಬಳ – Kannada News | Kusina Mane Scheme in Koppal Faces Fund Crunch, Staff Unpaid: Impact on NREGA Mothers
ಕೊಪ್ಪಳ, ಫೆ.3: ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಇದೀಗ ಆರ್ಥಿಕ ಸಂಕಷ್ಟಕ್ಕೆ (Kusina Mane Crisis) ಸಿಲುಕಿದೆ. ಕಳೆದ ಒಂದು ತಿಂಗಳಿನಿಂದ ಕೆಲಸ ಮಾಡಿದ ಸಿಬ್ಬಂದಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಹಲವೆಡೆ ಈ ಕೇಂದ್ರಗಳಿಗೆ ಬೀಗ ಬಿದ್ದಿದೆ.ನರೇಗಾ ಕೆಲಸಕ್ಕೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಹೋಗಲಿ ಎಂಬ ಉದ್ದೇಶದಿಂದ ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ…