Headlines

ಹೈಕೋರ್ಟ್​​ ಆದೇಶಕ್ಕೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ – Kannada News | Supreme Court Stays High Court Order; Subbareddy’s MLA Position Revived

ಎಸ್‌.ಎನ್‌. ಸುಬ್ಬಾರೆಡ್ಡಿImage Credit source: Google ನವದೆಹಲಿ, ಫೆಬ್ರವರಿ 27: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದ್ದು, ಕಾಂಗ್ರೆಸ್​​ ನಾಯಕನಿಗೆ ತಾತ್ಕಾಲಿಕ ರಿಲೀಫ್​​ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಸುಪ್ರೀಂಕೋರ್ಟ್…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ ಮೂರು ಗೀತೆಗಳು ಬಿಡುಗಡೆ ಆಗಿವೆ. ಆದರೆ ನಾಲ್ಕನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀರ್ ಸಮರ್ಥ್ (Veer Samarth) ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಮಾಣಿಕ್ಯ’ ಎಂಬ ಸಿನಿಮಾದ ಸಲುವಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆಶಾ ಭೋಸ್ಲೆ ಅವರಿಂದ ಹಾಡಿಸಬೇಕು ಎಂಬುದು ವೀರ್ ಸಮರ್ಥ್ ಅವರ ಕನಸಾಗಿತ್ತು….

Read More

ಸಣ್ಣದೊಂದು ಮನಸ್ಥಾಪ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ಗಂಡ

ಕೋಲ್ಕತ್ತಾ, ಮಾರ್ಚ್​ 13: ಸಣ್ಣದೊಂದು ಮನಸ್ಥಾಪಕ್ಕೆ ಪತಿಯೇ ಪತ್ನಿಗೆ ಬೆಂಕಿ ಹಚ್ಚಿ  ಕೊಲೆ(Murder) ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ  ನರ್ಸ್ ಒಬ್ಬರು ಕಾರಿನ ಇಎಂಐ ಪಾವತಿಗೆ ಸಂಬಂಧಿಸಿದ ಜಗಳದಲ್ಲಿ ಪತಿಯ ಕೈಯಿಂದಲೇ ಸಾವನ್ನಪ್ಪಿದ್ದಾರೆ. ಕೂಚ್ ಬೆಹಾರ್‌ನಲ್ಲಿರುವ ಎಂಜೆಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಸೂತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಛಂದಾ ರಾಯ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಛಂದಾ ಮನೆಯಿಂದ ಕೂಗುತ್ತಾ ಹೊರಗೆ ಓಡಿಹೋಗಿದ್ದಳು, ಬೆಂಕಿ ಹೊತ್ತಿಕೊಂಡಿದ್ದರಿಂದ…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಬಿಗ್​​ ಶಾಕ್​​: ಅತ್ಯಾಚಾರ ಪ್ರಕರಣ ದಾಖಲು

ಮಂಗಳೂರು, ಮಾರ್ಚ್​​ 22: ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ  ಬಿಗ್​​ ಶಾಕ್​​ ಸಿಕ್ಕಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್​​ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. 2020ರಲ್ಲಿ ಸಂದೇಶ್​​​ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್…

Read More

ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ನಡೆಯಿತು ಶೋಧಕಾರ್ಯ – Kannada News | Geological Survey of India Conducts Aerial Search for Gold in Gudibande KGF Hills, Chikkaballapura

ಚಿಕ್ಕಬಳ್ಳಾಪುರ, ಫೆಬ್ರವರಿ 2: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿನ್ನ ಹಾಗೂ ನಿಧಿ ನಿಕ್ಷೇಪಗಳ ಶೋಧ ಕಾರ್ಯ ತೀವ್ರಗೊಂಡಿದೆ. ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಯು (GSI) ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದೆ. ಕೆಜಿಎಫ್ ಗೋಲ್ಡ್ ಮೈನಿಂಗ್ ಬೆಟ್ಟದ ಸಾಲಿನಲ್ಲಿ ಇರುವ ಈ ಪ್ರದೇಶದಲ್ಲಿ ತಜ್ಞರು ಚಿನ್ನದ ಲಭ್ಯತೆಯನ್ನು ಪತ್ತೆಹಚ್ಚಲು ಶೋಧ ನಡೆಸುತ್ತಿದ್ದಾರೆ. ಈ ಹಿಂದೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ಮಣ್ಣಿನಲ್ಲಿ ಚಿನ್ನದ ಕಣಗಳು ಪತ್ತೆಯಾಗಿದ್ದವು. ನಿರ್ದಿಷ್ಟವಾಗಿ ಹೇಳುವುದಾದರೆ, ಬಾಗೇಪಲ್ಲಿ ಮತ್ತು…

Read More

ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿಗೆ ಆಪರೇಷನ್ ಮಾಡಿದ ವೈದ್ಯರು; ಹೆರಿಗೆ ವೇಳೆ ತಾಯಿ ಸಾವು! – Kannada News | Bihar fake doctor performed operation to pregnant woman after watching youtube video she died during delivery

ನವದೆಹಲಿ, ಜನವರಿ 9: ಹೊಟ್ಟೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ (Pregnant) ನಕಲಿ ವೈದ್ಯರೊಬ್ಬರು ಯೂಟ್ಯೂಬ್ ವಿಡಿಯೋ ನೋಡಿಕೊಂಡು ಆಪರೇಷನ್ ಮಾಡಿದ್ದಾರೆ. ಆ ವೈದ್ಯರ ಹುಚ್ಚಾಟದಿಂದಾಗಿ ಆ ಮಹಿಳೆ ಸಾವನ್ನಪ್ಪಿದ್ದಾರೆ. ಆದರೆ, ಮಗು ಸದ್ಯಕ್ಕೆ ಸುರಕ್ಷಿತವಾಗಿದೆ. ಬಿಹಾರದ ಭಾಗಲ್ಪುರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಕಲಿ ವೈದ್ಯ ಯೂಟ್ಯೂಬ್​​ನಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ನೋಡಿಕೊಂಡು ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಆಪರೇಷನ್ ಮಾಡಿದ್ದಾರೆ. ಆಪರೇಷನ್ ಸಮಯದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮಹಿಳೆಯ ಕುಟುಂಬಸ್ಥರು ಹಾಗೂ ಊರಿನವರು…

Read More

ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ – Kannada News | Imran Khan’s Failing Eyesight in Jail: Cricket Legends Appeal Pakistan Govt for Treatment

ಇಮ್ರಾನ್ ಖಾನ್-ಕಪಿಲ್ ದೇವ್ Image Credit source: India Today ಇಸ್ಲಾಮಾಬಾದ್, ಫೆಬ್ರವರಿ 17: ಭ್ರಷ್ಟಾಚಾರ ಆರೋಪದಲ್ಲಿ ಅಡಿಯಾಲ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್(Imran Khan)​ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಪಾಕ್ ಸರ್ಕಾರಕ್ಕೆ ವಿಶ್ವ ಕ್ರಿಕೆಟ್​​ನ 14 ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಕೋರಿ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿ ಕ್ರಿಕೆಟ್ ತಂಡಗಳ ಹಲವು ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಅಕ್ಟೋಬರ್…

Read More

Sanatana Dharma: ಶಾಸ್ತ್ರಗಳ ಪ್ರಕಾರ ಈ ವಸ್ತುಗಳನ್ನು ಎಂದಿಗೂ ಬರೀ ನೆಲದ ಮೇಲೆ ಇಡಲೇಬಾರದು! – Kannada News | Sanatana Dharma Vastu: Don’t Place These Sacred Items on Floor for Lakshmi’s Grace

ಸನಾತನ ಧರ್ಮದಲ್ಲಿ ಪ್ರತೀ ನಿಯಮದ ಹಿಂದೆಯೂ ಒಂದು ಆಳವಾದ ಆಧ್ಯಾತ್ಮಿಕ ಕಾರಣವಿರುತ್ತದೆ. ನಮ್ಮ ಹಿರಿಯರು ಮತ್ತು ಶಾಸ್ತ್ರಗಳ ಪ್ರಕಾರ, ಕೆಲವು ಪವಿತ್ರ ಹಾಗೂ ಶುಭ ವಸ್ತುಗಳನ್ನು ಎಂದಿಗೂ ನೇರವಾಗಿ ಬರಿ ನೆಲದ ಮೇಲೆ ಇಡಬಾರದು. ಹೀಗೆ ಮಾಡುವುದು ಆ ವಸ್ತುಗಳಿಗೆ ನಾವು ಮಾಡುವ ಅಪಚಾರ ಅಥವಾ ಅಪಮಾನ ಎಂದು ಪರಿಗಣಿಸಲಾಗುತ್ತದೆ. ಪವಿತ್ರ ವಸ್ತುಗಳನ್ನು ಗೌರವದಿಂದ ಕಾಣುವುದು ಎಂದರೆ ಸಾಕ್ಷಾತ್ ದೇವರನ್ನು ಗೌರವಿಸಿದಂತೆ. ಎಲ್ಲಿ ಗೌರವ ಮತ್ತು ಶುಚಿತ್ವ ಇರುತ್ತದೆಯೋ, ಅಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ ಎಂಬುದು ನಂಬಿಕೆ….

Read More

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ! – Kannada News | Namma Metro Green Line Disrupted: Trains Suspended Between Yeshwanthpur and Madavara

ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ. ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ ವಿದ್ಯುತ್‌ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ…

Read More

IND vs NZ: ವೇಗದ ರನ್ ಚೇಸ್; ವಿಶ್ವ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ – Kannada News | India Shatters T20 World Record: Fastest 200+ Chase Against NZ in Raipur!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನು ಸಹ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 208 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 16ನೇ ಓವರ್​ನಲ್ಲೇ ಅಂದರೆ ಕೇವಲ 92 ಎಸೆತಗಳಲ್ಲಿ 209…

Read More