ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್ ಕಣ್ಣು: ಹೀಗಿದೆ ದಳಪತಿಗಳ ಲೆಕ್ಕಾಚಾರ – Kannada News | JDS Aims for Hiriyur By Election Victory with Strategic Candidate Selection
ಚಿತ್ರದುರ್ಗ, ಮೇ 21: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ. ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ಗೆಲ್ಲಲು ಜೆಡಿಎಸ್ ಉತ್ಸುಕವಾಗಿದೆ. ಪಕ್ಷದ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ಅವರು ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿ, ಟಿಕೆಟ್ ತರುವುದು ನನ್ನ ಜವಾಬ್ದಾರಿ, ಗೆಲ್ಲಿಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಯಾದವ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಹೀಗಾಗಿ ಈ ಸಮುದಾಯಗಳಿಂದಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಲೆಕ್ಕಾಚಾರವಿದೆ. 2023ರ…