Chamundeshwari Vardhanti Mahotsav: ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ! – Kannada News | Grand Chamundeshwari Vardhanti Mahotsav Celebrated at Mysurus Chamundi Hills
ಮೈಸೂರು, ಆಗಸ್ಟ್ 04: ನಾಡದೇವಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಚಾಮುಂಡೇಶ್ವರಿ ದೇವಸ್ಥಾನವು ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿತ್ತು. ಈ ಮಹತ್ವದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳನ್ನು ನೆರವೇರಿಸಲಾಯಿತು. ವರ್ಧಂತಿ ಮಹೋತ್ಸವದ ಪ್ರಯುಕ್ತ ದೇವಾಲಯವನ್ನು ಆಕರ್ಷಕವಾಗಿ ಅಲಂಕರಿಸಲಾಗಿತ್ತು. ದೇವಾಲಯದ ಮುಖ್ಯದ್ವಾರದಲ್ಲಿ ತೆಂಗಿನ ಗರಿಗಳು, ಕಬ್ಬು ಮತ್ತು ವಿವಿಧ ಬಗೆಯ ಸುಂದರ ಹೂವುಗಳನ್ನು ಬಳಸಿ ಭವ್ಯವಾದ…