ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಾಪತ್ತೆ ಕೇಸ್: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರು, ಏಪ್ರಿಲ್ 10: ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆಯಾಗಿದ್ದು, ಇನಾಮು ದತ್ತಾತ್ರೇಯ ಬಾಬುಡಂ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದಾಗ ಈ ಘಟನೆ ನಡೆದಿದೆ. ಎಸ್ಡಿಆರ್ಎಫ್, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಎನ್ಎಫ್ ತಂಡಗಳು ಸೇರಿ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ….