ಕೊಪ್ಪಳ: ಜೆಸ್ಕಾಂ ನಿರ್ಲಕ್ಷ್ಯದಿಂದ ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ – Kannada News | Koppal Agri Crisis: Farmers Struggle to Irrigate Crops Amid GESCOM Negligence and Irregular Power Supply
ಕೊಪ್ಪಳ, ಜೂನ್ 22: ಕೊಪ್ಪಳ ಜಿಲ್ಲೆಯ ರೈತರು ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಮಳೆ ಕೊರತೆಯ ಸಮಸ್ಯೆ ಪರಿಹರಿಸಲು ರೈತರು ಸ್ಪ್ರಿಂಕ್ಲರ್‌ಗಳ ಮೊರೆ ಹೋಗಿದ್ದರೂ ಇದೀಗ ಸಮರ್ಪಕ ವಿದ್ಯುತ್ ಸಿಗದೆ ಹರಸಾಹಸ ಪಡುತ್ತಿದ್ದಾರೆ. ಬಿ.ಹೊಸಳ್ಳಿಯ ರೈತ ರಮೇಶ್ ಮತ್ತು ಸುರೇಶ್ ಸೇರಿದಂತೆ ಹಲವು ರೈತರು ಜೆಸ್ಕಾಂನಿಂದ ಪ್ರತಿದಿನ ಕನಿಷ್ಠ ಎಂಟು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸುತ್ತಿದ್ದಾರೆ. ಪ್ರಸ್ತುತ ವಿದ್ಯುತ್ ಪೂರೈಕೆ…