ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಕಲಬುರಗಿ, ಜೂನ್ 26: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿ 20 ದಿನಗಳು ಕಳೆದರೂ ಕಲಬುರಗಿ ಜಿಲ್ಲೆಯಲ್ಲಿ ವರುಣ ಕೃಪೆ ತೋರಿಲ್ಲ. ಕಳೆದ 20 ದಿನಗಳಿಂದ ಒಂದೇ ಒಂದು ಹನಿ ಮಳೆ ಬರದ ಕಾರಣ, ಇಡೀ ಕಲಬುರಗಿ ಜಿಲ್ಲೆ ಭೀಕರ ಬರಗಾಲದ ಛಾಯೆಗೆ ಒಳಗಾಗಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಜೀವನಾಡಿಯಾಗಿರುವ ಭೀಮಾ ನದಿ ಸಂಪೂರ್ಣವಾಗಿ ಬರಿದಾಗಿದೆ. ಕಳೆದ ವರ್ಷ ಇದೇ ಜೂನ್‌ನಲ್ಲಿ ಭೀಮಾ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿತ್ತು. ಆದರೆ ಈ ಬಾರಿ ನದಿ ಸಂಪೂರ್ಣ ಬಿಕೋ ಎನ್ನುತ್ತಿದೆ….