Karnataka Weather Forecast: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ – Kannada News | Karnataka Weather Forecast on July 18: Heavy Rain, Landslide Warning for Coastal Districts; Dakshina Kannada Schools Closed Today
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಳೆImage Credit source: tv9 ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ…