ವಿವಾದ ಪುರುಷರಾದ್ರಾ ಮಲ್ಲಿಕಾರ್ಜುನ ಖರ್ಗೆ?: ಟೀಕಿಸುವ ಭರದಲ್ಲಿ ಸಾಲು ಸಾಲು ಕಾಂಟ್ರವರ್ಸಿ!
ಬೆಂಗಳೂರು, ಏಪ್ರಿಲ್ 08: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ನ ಹಿರಿಯ ರಾಜಕಾರಣಿ. ಎಐಸಿಸಿಯ ಅಧ್ಯಕ್ಷರೂ ಆಗಿರುವ ಇದೇ ಖರ್ಗೆ ಅದ್ಯಾಕೋ ಗೊತ್ತಿಲ್ಲ ಬೇಕು ಬೇಕಂತಲೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಮೊನ್ನೆ ಭಾನುವಾರ ಅಸ್ಸಾಂನ ನಿಲಾಂಬಜಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಇವರು, ಕುರಾನ್‌ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್‌ಎಸ್‌ಎಸ್ ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದೀಗ ಭಾರೀ…