ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್ಕುಮಾರ್ – Kannada News | Raghavendra Rajkumar awarded honorary doctorate by Yoga Samskrutham University in Mantralaya
ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ಇದೇ ಉತ್ಸವದ ವೇದಿಕೆಯಲ್ಲಿ ಹಲವು ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ನಟ ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವೇಳೆ ರಾಘವೇಂದ್ರ ರಾಜ್ಕುಮಾರ್ ಅವರಿಗೆ ರಾಯರ ಅನುಗೃಹ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಯಿತು. ಅಮೆರಿಕದ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು…