ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ – Kannada News
ಟೆಹ್ರಾನ್, ಜೂನ್ 8: ಇಸ್ರೇಲ್ ಮತ್ತು ಇರಾನ್ ನಡುವೆ ಇತ್ತೀಚೆಗೆ ನಡೆದ ಕ್ಷಿಪಣಿ ದಾಳಿಗಳ ಬಳಿಕ, ಇರಾನ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಬೈರೂತ್ ಮತ್ತು ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತಿಕಾರವಾಗಿ ಇರಾನ್ (Iran) ಇತ್ತೀಚೆಗೆ ಇಸ್ರೇಲ್ ಮೇಲೆ ಭಾರಿ ಪ್ರಮಾಣದ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ತಡೆಯಲು ಇರಾನ್‌ನ ಮಿಲಿಟರಿ ಜಂಟಿ ಕಮಾಂಡ್, ಇಸ್ರೇಲ್ ವಿರುದ್ಧದ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ….