ನಮ್ಮ ಸಮಯ ವ್ಯರ್ಥ ಮಾಡಬೇಡಿ, ಸಿಜೆಪಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ವಿರುದ್ಧದ ಅರ್ಜಿ ತಳ್ಳಿ ಹಾಕಿದ ಸುಪ್ರೀಂ – Kannada News | Supreme Court Rejects Plea Against Police Action on CJP Protestors, Citing Time Waste
ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿರುವ ಬಲ ಪ್ರಯೋಗ, ಲಾಠಿಚಾರ್ಜ್ ಖಂಡಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್(Supreme Court) ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರಿದ್ದ ಪೀಠವು, “ನಮ್ಮ ಸಮಯವನ್ನೂ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ಅರ್ಜಿದಾರ ಪರ ವಕೀಲರಿಗೆ ಖಡಕ್ ಆಗಿ ತಿಳಿಸಿದೆ. ವೀಡಿಯೊ ನೋಡಲು ನಮಗೆ ಸಮಯವಿಲ್ಲ: ಸಿಜೆಐ…