Headlines

ಆಮಿರ್ ಖಾನ್‌ಗೆ ಕೊಲೆ ಬೆದರಿಕೆ; ಕೊಂದವರಿಗೆ 5 ಕೋಟಿ ರೂ. ಬಹುಮಾನ ಘೋಷಿಸಿದ ಅಯೋಧ್ಯೆ ಧಾರ್ಮಿಕ ಮುಖಂಡ – Kannada News | Aamir Khan faces Death Threat Rs 5 Cr Bounty from Ayodhya Priest over 3rd Marriage Love Jihad

ಬಾಲಿವುಡ್‌ನ ಖ್ಯಾತ ನಟ ಆಮಿರ್ ಖಾನ್ (Aamir Khan) ಜುಲೈ 5ರಂದು ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಮೂರನೇ ವಿವಾಹವಾದ ಬೆನ್ನಲ್ಲೇ ಅವರ ಸುತ್ತಲಿನ ವಿವಾದಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಆರಂಭದಲ್ಲಿ ಬಜರಂಗದಳದ ಪ್ರತಿಭಟನೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ತೀವ್ರ ಆಕ್ರೋಶಗಳು ಈಗ ಕೊಲೆ ಬೆದರಿಕೆಯ ಹಂತಕ್ಕೆ ಬಂದು ತಲುಪಿವೆ. ಅಯೋಧ್ಯೆಯ ತಪಸ್ವಿ ಛಾವಣಿಯ ಪೀಠಾಧೀಶರಾದ ಜಗದ್ಗುರು ಪರಮಹಂಸ ಆಚಾರ್ಯ (Jagadguru Paramhans Acharya) ಅವರು ಆಮಿರ್ ಖಾನ್ ಅವರನ್ನು ಕೊಲ್ಲುವವರಿಗೆ ಬರೋಬ್ಬರಿ 5…

Read More

Chanakya Niti: ಜೀವನದಲ್ಲಿ ಮುಂದೆ ಬರಬೇಕು ಅಂದ್ರೆ ಈ ವಿಷಯಗಳನ್ನು ನಿಯಂತ್ರಿಸಲು ಕಲಿಯಿರಿ – Kannada News | Chanakya Niti: Chanakya says that these habits must be controlled to move forward in life

ನಮ್ಮಲ್ಲಿರುವ ಕೆಟ್ಟ ಅಭ್ಯಾಸಗಳು (bad habits) ನಮ್ಮನ್ನು ಮುಂದುವರೆಯಲು ಬಿಡುವುದಿಲ್ಲ, ಪ್ರಗತಿಗೆ ಅಡ್ಡಿಯನ್ನು ಉಂಟು ಮಾಡುತ್ತವೆ. ಆ ಅಭ್ಯಾಸವನ್ನು ನಿಯಂತ್ರಿಸಲು ಕಲಿತವರು ಮಾತ್ರ ಜೀವನದಲ್ಲಿ ಮುಂದುವರೆಯಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಅವರ ಪ್ರಕಾರ ಪ್ರತಿಯೊಬ್ಬರೂ ಸಹ ಈ ಕೆಲವೊಂದು ಅಭ್ಯಾಸಗಳನ್ನು ನಿಯಂತ್ರಿಸಲೇಬೇಕು, ಇದು ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಸಾಕಷ್ಟು ಸಹಾಯವನ್ನು ಮಾಡುತ್ತದೆ. ಹಾಗಿದ್ರೆ ಜೀವನವನ್ನು ಸುಧಾರಿಸಲು, ಜೀವನದಲ್ಲಿ ಸಕಾರಾತ್ಮಕವಾಗಿ ಮುಂದುವರೆಯಲು ಯಾವೆಲ್ಲಾ ವಿಷಯಗಳನ್ನು ನಿಯಂತ್ರಿಸಬೇಕು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಮುಂದುವರೆಯಲು ನಿಯಂತ್ರಿಸಬೇಕಾದ ಅಭ್ಯಾಸಗಳು:…

Read More

ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ

ಅಲ್ಲು ಅರ್ಜುನ್ ಅವರು (Allu Arjun) ಸಿನಿಮಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್​​ನ ಹೈದರಾಬಾದ್​​ನಲ್ಲಿ ಆರಂಭಿಸಿದ್ದಾರೆ. ಐಷಾರಾಮಿ ಆಸನ ವ್ಯವಸ್ಥೆ ಹಾಗೂ ಅದ್ಭುತ ಸಿನಿಮಾ ವೀಕ್ಷಣೆ ಅನುಭವ ನೀಡುವ ಈ ಮಲ್ಟಿಪ್ಲೆಕ್ಸ್ ಗುರುವಾರ (ಮಾರ್ಚ್ 12) ಉದ್ಘಾಟನೆ ಆಯಿತು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಈ ಥಿಯೇಟರ್​​ನ ವಾಲ್​​ ಆಫ್ ಫೇಮ್​ ಅಲ್ಲಿ ಇಬ್ಬರು ಕನ್ನಡದ ನಿರ್ದೇಶಕರ ಫೋಟೋ ಇದೆ ಎಂಬುದು ವಿಶೇಷ. ಈ ಸಂದರ್ಭದ ವಿಡಿಯೋ…

Read More

ವಿಶ್ವ ಕ್ರಿಕೆಟ್​ನ ಶ್ರೇಷ್ಠ ಆಲ್‌ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ – Kannada News | Sir Garfield Sobers, West Indies Cricket Legend and All rounder, Dies at 89

ವೆಸ್ಟ್ ಇಂಡೀಸ್‌ ತಂಡದ ಮಾಜಿ ನಾಯಕ, ವಿಶ್ವ ಕ್ರಿಕೆಟ್​ನ ದಿಗ್ಗಜ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಸರ್ ಗಾರ್ಫೀಲ್ಡ್ ಸೋಬರ್ಸ್ (Sir Garfield Sobers) ತಮ್ಮ 89 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸೋಬರ್ಸ್ ಇಂದು ನಿಧನರಾಗಿದ್ದಾರೆ. ಜುಲೈ 28 ರಂದು 90ನೇ ವರ್ಷಕ್ಕೆ ಕಾಲಿಡಬೇಕಿದ್ದ ಸೋಬರ್ಸ್ ತಮ್ಮ ಹುಟ್ಟುಹಬ್ಬಕ್ಕೆ 11 ದಿನಗಳ ಮೊದಲು ಅಂದರೆ ಜುಲೈ 17 ರಂದು ಕೊನೆಯುಸಿರೆಳಿದಿದ್ದಾರೆ. ಬಾರ್ಬಡೋಸ್‌ನಿಂದ ವಿಂಡೀಸ್ ತಂಡವನ್ನು ಪ್ರತಿನಿಧಿಸಿದ್ದ ಗ್ಯಾರಿ ಸೋಬರ್ಸ್ ದೀರ್ಘಕಾಲದವರೆಗೆ ವೆಸ್ಟ್…

Read More

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ, ಭಾರತಕ್ಕೆ ಸಿಗಲಿದೆಯೇ ಜಾಗತಿಕ ಇಂಧನ ಬಲ ತರುವ ‘ಯುರೇನಿಯಂ’? – Kannada News | PM Modi in Australia: India’s Global Energy Push with Uranium Deal

ಮೆಲ್ಬೋರ್ನ್, ಜುಲೈ 09: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಮೂರು ರಾಷ್ಟ್ರಗಳ ಅಧಿಕೃತ ಪ್ರವಾಸದ ಎರಡನೇ ಹಂತವಾಗಿ ಗುರುವಾರ ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಜಾಗತಿಕ ಪೂರೈಕೆ ಸರಪಳಿ ಅಡಚಣೆ ಮತ್ತು ಇಂಧನ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನೈಸರ್ಗಿಕ ಹಾಗೂ ಅತ್ಯಂತ ವಿಶ್ವಾಸಾರ್ಹ ಪಾಲುದಾರರಾಗಿ ಮುಂದುವರೆಯಲಿದೆ ಎಂದು ಎರಡೂ ದೇಶಗಳ ನಾಯಕರು ಘೋಷಿಸಿದ್ದಾರೆ. ‘ಮಾ ತುಜೆ ಸಲಾಮ್’ ಗೀತೆಗೆ ಮನಸೋತ ಮೋದಿ! ಆಸ್ಟ್ರೇಲಿಯಾಕ್ಕೆ…

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನಿಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್ ಗೆದ್ದು ತನ್ನ…

Read More

LPG Cylinder Price: ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ! ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ – Kannada News | Commercial LPG Cylinder Prices Slashed by Rs 183.50; Check Revised Rates Here

ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ!Image Credit source: PTI ಬೆಂಗಳೂರು, ಜುಲೈ 01: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಬಳಿಕ ಪೆಟ್ರೋಲ್ (Petrol), ಡೀಸೆಲ್ ಸೇರಿದಂತೆ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಗಳಲ್ಲಿ ಸತತವಾಗಿ ಏರಿಕೆ ಕಂಡುಬಂದಿತ್ತು. ಆದರೆ ಇಂದಿನಿಂದ (ಜು.01) ವಾಣಿಜ್ಯ ಬಳಕೆಯ (19 ಕೆಜಿ) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 183.50 ರೂಪಾಯಿಗಳಷ್ಟು ಕಡಿತಗೊಳಿಸಲಾಗಿದ್ದು, ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಭಾರಿ ಗುಡ್ ನ್ಯೂಸ್ ಸಿಕ್ಕಿದೆ. ಹೋಟೆಲ್ ಅಸೋಸಿಯೇಷನ್ ಮಾಹಿತಿ…

Read More

ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ – Kannada News | Sand mafia In Raichur: A Gang threatens to Devadurga JDS MLA Karemma Nayak, case Book

ರಾಯಚೂರು, (ಜನವರಿ 20): ಅಕ್ರಮ ಮರಳು ದಂಧೆ (illegal sand mining )ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ (Karemma Nayak) ಮನೆಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲಿಸರಿಗೆ ಶಾಸಕಿ ಕರೆಮ್ಮ ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಪೊಲೀಸರು, ಅಕ್ರಮ ಮರಳು ದಂಧೆ ಮೇಲೆ ದಾಳಿ ಮಾಡಿದ್ದು, ಜೆಸಿಬಿ,ಟಿಪ್ಪರ್,…

Read More

ಕ್ಯಾಬ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್ – Kannada News | Good News for Cab Passengers: Government Bans Mandatory Tips on Ola, Uber, Rapido and Namma Yatri Apps

ಬೆಂಗಳೂರು, ಜನವರಿ 8: ಬೆಂಗಳೂರಿನಲ್ಲಿ ಆಟೋ ಮತ್ತು ಕ್ಯಾಬ್ ಸೇವೆಗಳಿಗೆ ಹೆಸರುವಾಸಿಯಾದ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಮುಂತಾದ ಅಗ್ರಿಗೇಟರ್ ಕಂಪನಿಗಳು ಪ್ರಯಾಣಿಕರಿಂದ ಕಡ್ಡಾಯವಾಗಿ ಟಿಪ್ಸ್ ಪಡೆಯುವ ನೀತಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಇದುವರೆಗೆ, ಕ್ಯಾಬ್ ಬುಕ್ ಮಾಡುವಾಗ ಆ್ಯಪ್​ಗಳಲ್ಲಿ ಪ್ರಯಾಣ ದರದ ಜೊತೆಗೆ 20, 40, 60 ರೂಪಾಯಿ ಟಿಪ್ಸ್ ನೀಡುವ ಆಯ್ಕೆ ಇದ್ದು, ಅದನ್ನು ಆಯ್ಕೆ ಮಾಡದಿದ್ದರೆ ಬೇಗನೆ ಕ್ಯಾಬ್ ಬುಕ್ ಆಗುತ್ತಿರಲಿಲ್ಲ. ಈ ಟಿಪ್ಸ್ ನೀಡಿದರೆ ವಾಹನಗಳು ಬೇಗ ಸಿಗುತ್ತವೆ…

Read More

ಸುಕೇಶ್ ಚಂದ್ರಶೇಖರ್ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ನಟಿ ಜಾಕ್ವೆಲಿನ್ ಫರ್ನಾಂಡಿಸ್ – Kannada News | Jacqueline Fernandez withdraws Supreme Court plea in Sukesh Chandrashekhar Money Laundering Case

200 ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ (ED) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಜಾಕ್ವೆಲಿನ್ ಗುರುವಾರ ಹಿಂಪಡೆದಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿ ಹಿಂಪಡೆಯಲು ನಟಿಗೆ ಅನುಮತಿ ನೀಡಿದೆ. ಇಡಿ ದಾಖಲಿಸಿದ್ದ ದೋಷಾರೋಪ ಪಟ್ಟಿ ಹಾಗೂ…

Read More