Headlines

ಬಸ್‌ನಲ್ಲಿ ಎಸಿ ವ್ಯವಸ್ಥೆ ವೈಫಲ್ಯ: ಪ್ರಯಾಣಿಕನಿಗೆ 13 ಸಾವಿರ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿಗೆ ಗ್ರಾಹಕ ನ್ಯಾಯಾಲಯ ಆದೇಶ – Kannada News | Bus AC Failure: Consumer Court Orders KSRTC to Pay 13,000 Rupees Compensation to Passenger

ಮಡಿಕೇರಿ, ಜೂನ್​​ 19: ಹಣಕೊಟ್ಟು ಟಿಕೆಟ್​​ ಖರೀದಿಸಿ ಪ್ರಯಾಣಿಸುವ ವೇಳೆ ಬಸ್​​ಗಳ ದುಃಸ್ತಿತಿಯ ಕಾರಣ ಪ್ರಯಾಣಿಕರು ಅನಾನುಕೂಲ ಎದುರಿಸುವ ಪ್ರಕರಣಗಳು ಮೇಲಿಂದ ಮೇಲೆ ಮಡೆಯುತ್ತಲೇ ಇರುತ್ತವೆ. ಆದರೆ ಈ ಬಗ್ಗೆ ಯಾರೂ ಅಷ್ಟೊಂದು ತಲೆ ಕೆಡಸಿಕೊಳ್ಳಲು ಹೋಗುವುದಿಲ್ಲ. ಒಮ್ಮೆ ಆಕ್ರೋಶಗೊಂಡು ಸುಮ್ಮನಾಗುವವರ ಸಂಖ್ಯೆಯೇ ಹೆಚ್ಚು. ಹೀಗಿರುವಾಗ ತನಗಾದ ಅಸೌಕರ್ಯವನ್ನು ಪ್ರಶ್ನಿಸಿದ ಪ್ರಯಾಣಿಕರೋರ್ವರ ಪರ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶ ನೀಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಭರವಸೆ ನೀಡಿದ್ದ ಸೇವೆಯನ್ನು ಇವಿ ಪವರ್ ಪ್ಲಸ್ (EV…

Read More

Video: ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ, ದಿಕ್ಕಾಪಾಲಾಗಿ ಓಡಿದ ಜನ – Kannada News | Bee Swarm Sparks Panic at Mandore Garden, Visitors Rush for Safety

ಜೋಧ್​ಪುರ, ಏಪ್ರಿಲ್ 21: ಜೋಧ್​ಪುರದ ಮಂಡೋರ್ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್‌ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್ರವಾಸಿಗರು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾ, ಐತಿಹಾಸಿಕ ಸೌಂದರ್ಯವನ್ನು ಸವಿಯುತ್ತಿದ್ದರು. ಆದರೆ, ದೊಡ್ಡ ಆಪತ್ತು ಕಾದಿದೆ ಎಂದು ಯಾರೂ ಊಹಿಸಿರಲಿಲ್ಲ. ಉದ್ಯಾನದ ಮುಖ್ಯ ದ್ವಾರದ ಬಳಿ ಇದ್ದ ಬೃಹತ್ ಜೇನುಗೂಡಿನಿಂದ ಸಾವಿರಾರು ಜೇನುನೊಣಗಳು ಒಮ್ಮೆಗೆ ಹೊರಬಂದವು. ನೋಡುನೋಡುತ್ತಿದ್ದಂತೆಯೇ ದಾಳಿ ಶುರು ಮಾಡಿದ್ದವು. ದಾಳಿಯ ತೀವ್ರತೆ…

Read More

‘ವಿದ್ಯಾರ್ಥಿ ಭವನ’ ಮತ್ತು ಡಾ ರಾಜ್ಕುಮಾರ್: ನೆನಪಿನ ಬುತ್ತಿ ತೆರೆದಿಟ್ಟ ಮಾಲೀಕರು – Kannada News | Famous Vidyarthi Bhavan hotel owner talks about Dr Rajkumar and his connection with hotel

ಡಾ ರಾಜ್​ಕುಮಾರ್ (Dr Rajkumar) ಅವರ ಪುಣ್ಯ ಜಯಂತಿ ಇಂದು. ರಾಜ್ಯದ ಹಲವಾರು ಕಡೆ ಡಾ ರಾಜ್​ಕುಮಾರ್ ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ರಾಜ್ಯದ ಯಾವ ಮೂಲೆಗೆ ಹೋದರೂ ರಾಜ್​ಕುಮಾರ್ ಅವರ ಚಿತ್ರ, ಪ್ರತಿಮೆಗಳು ಇಂದಿಗೂ ಹೆಜ್ಜೆಗೊಂದರಂತೆ ಕಾಣುತ್ತವೆ. ವಿಶೇಷವೆಂದರೆ ರಾಜ್ಯದ ಯಾವುದೇ ಜನಪ್ರಿಯ ಹೋಟೆಲ್​​ಗಳಿಗೆ ಹೋದರೂ ಅಲ್ಲಿ ರಾಜ್​ಕುಮಾರ್ ಅವರ ಫೋಟೊ ಒಂದು ಇದ್ದೇ ಇರುತ್ತದೆ. ಅಭಿಮಾನಿಗಳಿಗೆ ಗೊತ್ತಿರುವಂತೆ ರಾಜ್​ಕುಮಾರ್ ಅವರು ಮಹಾನ್ ಭೋಜನಪ್ರಿಯರು. ಬೆಂಗಳೂರಿನ ಪ್ರಖ್ಯಾತ ಹೋಟೆಲ್ ವಿದ್ಯಾರ್ಥಿ ಭವನಕ್ಕೂ ರಾಜ್​ಕುಮಾರ್ ಅವರೊಟ್ಟಿಗೆ ನಂಟಿದೆ. ಆ…

Read More

ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಪೊಲೀಸರಿಂದ 18 ಕಾರ್ಮಿಕರ ರಕ್ಷಣೆ – Kannada News | Hassan Police Rescue 18 Bonded Labourers from Exploitative Farm

ಹಾಸನ, ಫೆಬ್ರವರಿ 26: ರಾಜ್ಯದಲ್ಲಿ ಇನ್ನೂ ಅನಿಷ್ಟ ಜೀತ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಹಾಸನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಹಳೇಬೀಡು ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಕೂಡಿಹಾಕಲಾಗಿದ್ದ 18ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಶುಂಠಿ ಕೆಲಸಕ್ಕೆಂದು ಕರೆತರಲಾಗಿದ್ದ ಈ ಕಾರ್ಮಿಕರನ್ನು, ಮಾಲೀಕ ನಾಗರಾಜ್ ಎಂಬಾತ ಕೂಡಿಹಾಕಿ ದುಡಿಸಿಕೊಳ್ಳುತ್ತಿದ್ದ. ಇವರಿಗೆ ಯಾವುದೇ ಹಣ ನೀಡದೆ, ಕೆಲಸ ಮುಗಿದ ನಂತರ ಒಂದೇ ಜಾಗದಲ್ಲಿ ಲಾಕ್ ಮಾಡಲಾಗುತ್ತಿತ್ತು. ಹೊರಗಡೆ ಹೋಗಲು ಯಾವುದೇ ಅವಕಾಶವಿರಲಿಲ್ಲ ಎನ್ನಲಾಗಿದೆ….

Read More

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ? – Kannada News | Assam CM Himanta Biswa Sarma files Rs 500 crore defamation case against Congress leaders

ನವದೆಹಲಿ, ಫೆಬ್ರವರಿ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ (Himanta Biswa Sarma) ಇಂದು ತಮ್ಮ ವಿರುದ್ಧ ಮಾಡಲಾದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ ಹಿನ್ನೆಲೆಯಲ್ಲಿ  ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ, “ಇಂದು ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು…

Read More

Rajat Patidar: ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಇವರೇ..! – Kannada News | Rajat patidar post match interview after RCB Vs GT Match IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 18.5 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್‌ಸಿಬಿ ತಂಡದ ನಾಯಕ ರಜತ್…

Read More

ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ, ಇದು ದೇಶವನ್ನು ಅಸ್ಥಿರಗೊಳಿಸುವ ಪಿತೂರಿ: ಪ್ರತಾಪ್ ಸಿಂಹ – Kannada News | Pratap Simha Alleges NEET Protest Conspiracy, Targets Congress and ‘Deep State’ in Mysuru

ಮೈಸೂರು, ಜುಲೈ 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ಪ್ರತಿಭಟನೆಗಳು ಭಾರತವನ್ನು ಅಸ್ಥಿರಗೊಳಿಸುವ ವ್ಯವಸ್ಥಿತ ಪಿತೂರಿಯ ಭಾಗವಾಗಿವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಜ್ಯ ಮತ್ತು ದೆಹಲಿಯ ಕಾಂಗ್ರೆಸ್‌ನೊಂದಿಗೆ ಸೇರಿಕೊಂಡು ಪ್ರತಿಭಟನೆಗಳನ್ನು ನಡೆಸುತ್ತಿದೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನೀಟ್ ಮರುಪರೀಕ್ಷೆ ನಡೆದು, ಫಲಿತಾಂಶ ಪ್ರಕಟಗೊಂಡು ಹಲವು ದಿನಗಳ ನಂತರ ಪ್ರತಿಭಟನೆಗಳು ಆರಂಭವಾಗಿವೆ. ಇದು ಪೂರ್ವಯೋಜಿತ ಹುನ್ನಾರ ಎಂದು ಅಭಿಪ್ರಾಯಪಟ್ಟರು. ಹಿಂದೆ ಸಿಎಎ ಮತ್ತು ಕೃಷಿ ಮಸೂದೆಗಳ ವಿರುದ್ಧ ನಡೆದ…

Read More

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…

Read More

ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇದೇ ಫೆಬ್ರವರಿ 26 ರಂದು ಬಲು ಅದ್ಧೂರಿಯಾಗಿ ಮದುವೆಯಾದರು. ಇವರ ಮದುವೆಯ ಚಿತ್ರಗಳು ಇನ್​​ಸ್ಟಾಗ್ರಾಂನಲ್ಲಿ ದಾಖಲೆಯನ್ನೇ ಬರೆದವು. ಅವರ ಉಡುಗೆ, ಧರಿಸಿದ್ದ ಆಭರಣಗಳು ಹೊಸ ಟ್ರೆಂಡ್ ಸೃಷ್ಟಿ ಮಾಡಿದವು. ಆಧುನಿಕತೆಯ ಜೊತೆಗೆ ಸಂಪ್ರದಾಯವನ್ನು ಬೆರೆಸಿದ್ದ ಅವರ ಮದುವೆಯ ಚರ್ಚೆಗಳು ವಾರಗಳ ಗಟ್ಟಲೆ ನಡೆದವು. ಇದೀಗ ವಿಜಯ್ ತಮ್ಮ ಪತ್ನಿಯನ್ನು ಅದೆಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಸಾಕ್ಷಿಯನ್ನು ನೆಟ್ಟಿಗರು ಹುಡುಕಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ವಿಮಾನ ನಿಲ್ದಾಣವೊಂದರಿಂದ ಹೊರಗೆ…

Read More

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ. ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು….

Read More