Headlines

ಅತ್ಯಂತ ಮೌಲ್ಯಯುತ ಭಾರತೀಯ ಕಂಪನಿಗಳು; ರಿಲಾಯನ್ಸ್ ನಂತರ ಏರ್ಟೆಲ್; ಎಚ್​ಡಿಎಫ್​ಸಿಯನ್ನು ಹಿಂದಿಕ್ಕಿದ ಭಾರತೀಯ ಟೆಲಿಕಾಂ ಕಂಪನಿ – Kannada News | Bharti Airtel briefly edges HDFC Bank to Become India’s 2nd Most Valued Company

ನವದೆಹಲಿ, ಮೇ 18: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ (Bharti Airtel) ಐತಿಹಾಸಿಕ ಸಾಧನೆ ಮಾಡಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ (HDFC Bank) ಅನ್ನು ಹಿಂದಿಕ್ಕುವ ಮೂಲಕ ಭಾರ್ತಿ ಏರ್‌ಟೆಲ್ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalisation) ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಏರ್‌ಟೆಲ್ ಷೇರುಗಳು ಸತತವಾಗಿ ಏರಿಕೆ ಕಾಣುತ್ತಿರುವುದು ಈ ಸಾಧನೆಗೆ ಕಾರಣವಾಗಿದೆ. ಮುಕೇಶ್ ಅಂಬಾನಿ ಅವರ ರಿಲಾಯನ್ಸ್ ಇಂಡಸ್ಟ್ರೀಸ್…

Read More

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ ಕುರಿತು ಅಮೆರಿಕದೊಂದಿಗೆ ಮಾತುಕತೆ ನಡೆದಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 16: ತೈಲ ಟ್ಯಾಂಕರ್‌ಗಳ ಸುರಕ್ಷಿತ ಸಾಗಾಟವನ್ನು ಖಚಿತಪಡಿಸಿಕೊಳ್ಳಲು ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ನೌಕಾ ಹಡಗುಗಳ ನಿಯೋಜನೆಯ ಕುರಿತು ಅಮೆರಿಕದೊಂದಿಗೆ ಯಾವುದೇ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಜಗತ್ತಿನ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತ ಮತ್ತು ಮುಕ್ತವಾಗಿಡಲು ಈ ಪ್ರದೇಶಕ್ಕೆ ಯುದ್ಧನೌಕೆಗಳನ್ನು ಕಳುಹಿಸುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ, ಫ್ರಾನ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ…

Read More

ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಯುವಕನಿಗೆ ಕಣ್ಣು, ಕದ್ದು ಮುಚ್ಚಿ ಆಕೆಯ ಒಳ ಉಡುಪುಗಳ ಕದ್ದು ಸಿಕ್ಕಿಬಿದ್ದ

ಉಜ್ಜಯಿನಿ, ಮಾರ್ಚ್​ 14: ಯುವಕನೊಬ್ಬನಿಗೆ ಪಕ್ಕದ ಮನೆಯ ವಿವಾಹಿತ ಮಹಿಳೆ ಮೇಲೆ ಕಣ್ಣು ಬಿದ್ದಿತ್ತು, ಆಕೆಯ ಒಳ ಉಡುಪುಗಳನ್ನು ಕದಿಯುತ್ತಿದ್ದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಈ ಘಟನೆಯು ಸಿಸಿಟವಿಯಲ್ಲಿ ಸೆರೆಯಾಗಿದ್ದು, ಈ ವಿಚಿತ್ರ ಪ್ರಕರಣವು ಪ್ರದೇಶದ ನಿವಾಸಿಗಳನ್ನು ಆಘಾತಕ್ಕೀಡು ಮಾಡಿದೆ. ಚಿಮನ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಹೊರಗೆ ಒಣಗಲು ಇಟ್ಟಿದ್ದ ಮಹಿಳೆಯ ಒಳ ಉಡುಪುಗಳು ಕಾಣೆಯಾಗುತ್ತಿವೆ ಎಂದು ಕುಟುಂಬವೊಂದು ದೂರು(Complaint) ನೀಡಿತ್ತು. ಪೊಲೀಸರ ಪ್ರಕಾರ, ಧಂಚ ಭವನ ಪ್ರದೇಶದಲ್ಲಿ ವಾಸಿಸುವ…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು – Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu Shiva Murder Case

ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು…

Read More

LIC Recruitment 2026: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | LIC HFL Junior Assistant Recruitment 2026: 180 Vacancies for Graduates

ದೇಶಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸಂಬಂಧಿತ…

Read More

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ…

Read More

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ – Kannada News | Karwar: Failed yesterday, topper for school today? Blind student’s SSLC result confused

ವಿದ್ಯಾರ್ಥಿನಿ ಲೀಸಾ ಖಾನಮ್Image Credit source: tv9 kannada ಕಾರವಾರ, ಏಪ್ರಿಲ್​ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್​​ಎಸ್​ಎಲ್​ಸಿಯಲ್ಲಿ (SSLC Result) ಫೇಲ್​​ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್​​ ಇದೀಗ ಶಾಲೆಗೆ ಟಾಪರ್​ ಆಗಿದ್ದಾರೆ. ಗುರುವಾರ ಬಂದಿದ್ದ ಅಧಿಕೃತ ರಿಸಲ್ಟ್​ನಲ್ಲಿ ಸಮಾಜ-ವಿಜ್ಞಾನ ವಿಷಯದಲ್ಲಿ ಗೈರು ಅಂತ ಬಂದಿತ್ತು. ಇಂದು ಪರೀಕ್ಷಾ ಪ್ರಾಧಿಕಾರದಿಂದ ಬಂದ ರಿಸಲ್ಟ್​​ನಲ್ಲಿ ವಿದ್ಯಾರ್ಥಿನಿ ಲೀಸಾ ಖಾನಮ್​​ ಶಾಲೆಗೆ ಟಾಪರ್​ ಆಗಿದ್ದಾರೆ. ಆದರೆ ಶಿರಸಿ ಡಿಡಿಪಿಐ ಇದು ಅಧಿಕೃತ ಪ್ರತಿ ಅಲ್ಲ ಎನ್ನುತ್ತಿದ್ದು, ವಿದ್ಯಾರ್ಥಿನಿಯ…

Read More

ಮುಸ್ಲಿಮರಿಗೆ ಕಾಂಗ್ರೆಸ್​​ ಮಣೆ ಹಾಕಿದ್ರೆ, ಬಿಜೆಪಿಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ?: ಯತ್ನಾಳ್​​ ಹೊಸ ಬಾಂಬ್​​

ದಾವಣಗೆರೆ, ಮಾರ್ಚ್​​ 19: ಬಾಗಲಕೋಟೆ ಸೇರಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಈ ನಡುವೆ ವಿಜಯಪುರದಲ್ಲಿ ಮಾತನಾಡಿದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನಡೆಯುತ್ತಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಕುಟುಂಬ ತಮ್ಮ ಸ್ವಾರ್ಥಕ್ಕಾಗಿ ಪಕ್ಷವನ್ನು ಬಲಿಕೊಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಯಡಿಯೂರಪ್ಪ ಕುಟುಂಬ ಹಾಗೂ ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊಂದಾಣಿಕೆ ಇದೆ. ಹಿಂದೆ ಶಿವಮೊಗ್ಗದಲ್ಲಿ ರಾಘವೇಂದ್ರಗೆ ಮತ ಹಾಕುವಂತೆ ಶಾಮನೂರು…

Read More

ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ – Kannada News | Accenture effect, Indian stock market dragged down as investors lose Rs 2 lakh crore on June 19th

ನವದೆಹಲಿ, ಜೂನ್ 19: ಕಳೆದ ಐದು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಷೇರು ಮಾರುಕಟ್ಟೆಯ (Stock Market) ಓಟಕ್ಕೆ ಶುಕ್ರವಾರ ಬ್ರೇಕ್ ಬಿದ್ದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಮುಂಜಾನೆಯ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಸುಮಾರು 750 ರಿಂದ 786 ಪಾಯಿಂಟ್‌ಗಳಷ್ಟು ಭಾರಿ ಕುಸಿತ ಕಂಡು 76,624 ರ ಮಟ್ಟಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ ಕೂಡ 200 ಕ್ಕೂ ಹೆಚ್ಚು ಪಾಯಿಂಟ್‌ಗಳನ್ನು ಕಳೆದುಕೊಂಡು 24,000 ರ ಮಟ್ಟಕ್ಕಿಂತ ಕೆಳಗೆ ಇಳಿದಿದೆ. ಐಟಿ ಸಂಸ್ಥೆಯಾದ ಅಕ್ಸೆಂಚರ್ ಕೊಟ್ಟ ಅದರ ಗೈಡೆನ್ಸ್…

Read More

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್! – Kannada News | Systemic Effects of Fatty Liver: From Metabolism to Brain Health

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. ಯಕೃತ್ತು ದೇಹದಲ್ಲಿನ ವಿಷಕಾರಿ…

Read More