Headlines

ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ – Kannada News | Late Night Clashes Erupt at Jantar Mantar Between Police and Protesters

ನವದೆಹಲಿ, ಜುಲೈ 22: ದೆಹಲಿಯ ಜಂತರ್ ಮಂತರ್‌ನಲ್ಲಿ ತಡರಾತ್ರಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದಿದೆ. ಮಧ್ಯರಾತ್ರಿಯವರೆಗೂ ಮುಂದುವರೆದ ಈ ಜಟಾಪಟಿಯಲ್ಲಿ, ಪ್ರತಿಭಟನಾ ನಿರತ ಯುವಕರು ಆರ್​ಎಎಫ್ ಸಿಬ್ಬಂದಿಯನ್ನೇ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ.. ಕೆಲವರು ಆರ್​ಎಎಫ್​ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿ ಕಾಲಿನಲ್ಲಿ ಒದ್ದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆ ಜಂತರ್ ಮಂತರ್‌ನಲ್ಲಿ ರಾತ್ರಿಯಿಡೀ ಕೋಲಾಹಲಕ್ಕೆ ಕಾರಣವಾಯಿತು. ಸಂಸದ್ ಚಲೋ ಪ್ರತಿಭಟನೆಯ ಭಾಗವಾಗಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಸೋನಂ ವಾಂಗ್‌ಚುಕ್ ಅವರ ಉಪವಾಸ…

Read More

ಸಲ್ಮಾನ್ ತಡವಾಗಿ ಬರ್ತಿದ್ರು, ಹಾಗಾಗಿ ಸೆಟ್‌ನಲ್ಲೇ ಜಿಮ್ ಮಾಡ್ತಿದ್ದೆ: ಕಾಜಲ್ ಅಗರ್ವಾಲ್ – Kannada News | Kajal Aggarwal Critiques Bollywood Lack of Punctuality Shares Insights on Salman Khan Habits

ಬಾಲಿವುಡ್ (Bollywood) ಮತ್ತು ದಕ್ಷಿಣ ಭಾರತದ ಚಿತ್ರರಂಗದ ನಡುವೆ ಹೋಲಿಕೆ ಇಂದಿನದೇನಲ್ಲ. ಸೌತ್ ಸಿನಿಮಾಗಳ ಮೇಕಿಂಗ್, ಕಥೆ ಮತ್ತು ನಿರ್ದೇಶನದ ಶಿಸ್ತನ್ನು ನೋಡಿ ಬಾಲಿವುಡ್‌ನವರು ಕಲಿಯಬೇಕಾದದ್ದು ತುಂಬಾನೇ ಇದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿರುತ್ತಾರೆ. ಇದೀಗ ಇದೇ ವಿಷಯವಾಗಿ ಸೌತ್ ಹಾಗೂ ನಾರ್ತ್ ಎರಡೂ ಕಡೆ ನಟಿಸಿ ಸೈ ಎನಿಸಿಕೊಂಡಿರುವ ಸ್ಟಾರ್ ನಟಿ ಕಾಜಲ್ ಅಗರ್ವಾಲ್ ಮುಕ್ತವಾಗಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ, ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಅವರ ಕೆಟ್ಟ ಅಭ್ಯಾಸವೊಂದನ್ನು ರಿವೀಲ್ ಮಾಡಿದ್ದಾರೆ. ಬಾಲಿವುಡ್‌ಗಿಂತ ಸೌತ್ ಇಂಡಸ್ಟ್ರಿನೇ…

Read More

Lakshmi Hayagreeva: ಓದಿದ್ದು ನೆನಪಿನಲ್ಲಿ ಉಳಿಯುತ್ತಿಲ್ಲವೇ? ಸ್ಮರಣಶಕ್ತಿಗೆ ‘ಶ್ರೀ ಲಕ್ಷ್ಮಿ ಹಯಗ್ರೀವ’ ಆರಾಧನೆ!

ಗಂಟೆಗಟ್ಟಲೆ ಓದಿದರೂ ಪರೀಕ್ಷೆಯಲ್ಲಿ ನೆನಪಾಗದಿರುವುದು, ಆಫೀಸ್ ಕೆಲಸದಲ್ಲಿ ಪ್ರಮುಖ ಮಾಹಿತಿ ಮರೆಯುವುದು ಹಾಗೂ ಏಕಾಗ್ರತೆಯ ಕೊರತೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆಧುನಿಕ ಜೀವನಶೈಲಿ ಮತ್ತು ಒತ್ತಡವೇ ಇದಕ್ಕೆ ಪ್ರಮುಖ ಕಾರಣ. ಇಂತಹ ಸಮಯದಲ್ಲಿ ಸನಾತನ ಸಂಪ್ರದಾಯದಲ್ಲಿ ಜ್ಞಾನ, ಸ್ಮರಣಶಕ್ತಿ ಮತ್ತು ಬುದ್ಧಿವಂತಿಕೆಯ ಸಂಕೇತವಾದ ‘ಶ್ರೀ ಲಕ್ಷ್ಮಿ ಹಯಗ್ರೀವ ಸ್ವಾಮಿ’ ಆರಾಧನೆಗೆ ವಿಶೇಷ ಮಹತ್ವವಿದೆ. ಹಯಗ್ರೀವ ಅವತಾರದ ಹಿನ್ನೆಲೆ: ಪುರಾಣಗಳ ಪ್ರಕಾರ, ರಾಕ್ಷಸರು ವೇದಗಳನ್ನು ಕದ್ದು ಜಗತ್ತನ್ನು ಅಜ್ಞಾನಕ್ಕೆ ತಳ್ಳಿದಾಗ, ಶ್ರೀಮನ್ನಾರಾಯಣನು ಕುದುರೆಯ ಮುಖ ಮತ್ತು ಮಾನವ ದೇಹದ…

Read More

ಮತ್ತಿಕೆರೆಯಲ್ಲಿ ನಿರ್ಮಾಣವಾಗಲಿದೆ 199 ಕೋಟಿ ರೂ. ವೆಚ್ಚದ ಬೃಹತ್ ‘ಡಬಲ್ ಡೆಕ್ಕರ್’ ಫ್ಲೈ ಓವರ್!

ಬೆಂಗಳೂರು, ಜುಲೈ 22: ಮೆಟ್ರೋ ಸಿಟಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಹೊಸ ರೂಪ ನೀಡಲು ಮತ್ತು ಟ್ರಾಫಿಕ್ ಸಮಸ್ಯೆಯಿಂದ ಜನರನ್ನು ಮುಕ್ತರನ್ನಾಗಿಸಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದಲ್ಲಿ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ ಈಗಾಗಲೇ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈ ಓವರ್ ಮಾದರಿಯಲ್ಲೇ, ಇದೀಗ ಬೆಂಗಳೂರು ಉಪನಗರ ರೈಲು ಯೋಜನೆಯಿಂದಲೂ (BSRP) ಡಬಲ್ ಡೆಕ್ಕರ್ ಕಾಮಗಾರಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. 199 ಕೋಟಿ ರೂ. ವೆಚ್ಚದಲ್ಲಿ 1.2 ಕಿ.ಮೀ…

Read More

ದಿ ಹಂಡ್ರೆಡ್ ಲೀಗ್​ನಿಂದ ಜೇಕಬ್ ಬೆಥೆಲ್ ಔಟ್ – Kannada News | Jacob bethell Ruled Out of The Hundred

ಇಂಗ್ಲೆಂಡ್ ತಂಡದ ಉದಯೋನ್ಮುಖ ಆಲ್‌ರೌಂಡರ್ ಜೇಕಬ್ ಬೆಥೆಲ್ ಬಲ ಮೊಣಕಾಲಿನ ಗಾಯದ  ಕಾರಣದಿಂದಾಗಿ 2026ರ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಈ ವರ್ಷದ ಟೂರ್ನಿಯಲ್ಲಿ ಬರ್ಮಿಂಗ್​ಹ್ಯಾಮ್​ ಫೀನಿಕ್ಸ್ ತಂಡವನ್ನು ಮುನ್ನಡೆಸಬೇಕಾಗಿದ್ದ ಬೆಥೆಲ್ ಅವರ ಅನುಪಸ್ಥಿತಿ, ಟೂರ್ನಿ ಆರಂಭಕ್ಕೂ ಮುನ್ನವೇ ಫ್ರಾಂಚೈಸಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಗಾಯದ ಹಿನ್ನಲೆ: ಭಾರತದ ವಿರುದ್ಧ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಕದಿನ ಸರಣಿಯ ವೇಳೆ ಜೇಕಬ್ ಬೆಥೆಲ್ ಗಾಯಗೊಂಡಿದ್ದರು. ಸರಣಿಯ ಅಂತಿಮ ಪಂದ್ಯದಲ್ಲಿ 91 ರನ್ ಬಾರಿಸಿ ಹಾಗೂ 1 ವಿಕೆಟ್ ಪಡೆದು…

Read More

ಇರಾನ್ ಜತೆ ಮಾತುಕತೆ ನಡೆಸಲು ನಮಗೆ ಆಸಕ್ತಿ ಇಲ್ಲ, ತೆರೆಮರೆಯ ಸಂಭಾಷಣೆ ತಿರಸ್ಕರಿಸಿದ ಟ್ರಂಪ್ – Kannada News | Trump Rejects Iran Talks: US Escalates Military Action and Economic Fears Amidst Hormuz Tensions

ವಾಷಿಂಗ್ಟನ್, ಜುಲೈ 22: ಅಮೆರಿಕ ಹಾಗೂ ಇರಾನ್(Iran) ನಡುವಿನ ಸಂಘರ್ಷವು ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ. ಇರಾನ್​ನ ಅಧಿಕಾರಿಗಳು ಅಮೆರಿಕದೊಂದಿಗೆ ತೆರೆಮರೆಯ ಮಾತುಕತೆ ನಡೆಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಪ್ರತಿಪಾದಿಸಿರುವ ಟ್ರಂಪ್ ಅರ್ಥಪೂರ್ಣ ಚರ್ಚೆಗೆ ಇರಾನ್ ಸಿದ್ಧವಾಗುವವರೆಗೆ ನಮಗೆ ಅವರೊಂದಿಗೆ ಮಾತುಕತೆ ನಡೆಸಲು ಯಾವುದೇ ಆಸಕ್ತಿ ಇಲ್ಲ ಎಂದು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಶ್ವೇತಭವನದಲ್ಲಿ ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರೊಂದಿಗೆ ನಡೆಸಿದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಡೊನಾಲ್ಡ್​ ಟ್ರಂಪ್, ಇರಾನ್ ಮಾತುಕತೆ…

Read More

Karnataka Weather Forecast: ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ, ಉತ್ತರ ಒಳನಾಡಿನಲ್ಲಿ ಭಾರೀ ಗಾಳಿ – Kannada News | Karnataka Weather Today July 22: IMD Forecasts Rain Across State, 40 50 kmph Winds in North Interior Districts

ಬೆಂಗಳೂರು, ಜುಲೈ 22: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ…

Read More

83ನೇ ವಯಸ್ಸಲ್ಲಿ ಅಮಿತಾಭ್ ಬಚ್ಚನ್​ಗೆ ಸರ್ಜರಿ? ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಪೋಸ್ಟ್ – Kannada News | Amitabh Bachchan Mysterious Surgery Blog Sparks Health Concerns Among Fans

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ (Amitabh Bachchan) ಈಗ 83 ವರ್ಷ ವಯಸ್ಸು. ಅವರಿಗೆ ನಾನಾ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಅವನ್ನು ಮೆಟ್ಟಿ ನಿಂತು ಸಿನಿಮಾ ಕೃಷಿ ಮಾಡುತ್ತಿದ್ದಾರೆ. ಅಮಿತಾಭ್ ಮಾಡಿರುವ ಹೊಸ ಬ್ಲಾಗ್ ಪೋಸ್ಟ್ ಈಗ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಅವರು ಆಸ್ಪತ್ರೆ ಸೇರಿರುವ ಬಗ್ಗೆ ಮತ್ತು ಸರ್ಜರಿ ಆಗಿರುವ ಬಗ್ಗೆ ಬರೆದುಕೊಂಡಿದ್ದಾರೆ. ಆದರೆ ಇದು ಅವರದ್ದೇ ಆರೋಗ್ಯದ ಬಗ್ಗೆಯೋ ಅಥವಾ ಸಾಮಾನ್ಯವಾಗಿ ಬ್ಲಾಗ್ ಬರೆದಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ. ಬಿಗ್ ಬಿ ಬ್ಲಾಗ್‌ನಲ್ಲೇನಿದೆ?…

Read More

Bengaluru Air Quality: ಬೆಂಗಳೂರಿಗರೇ ನೆಮ್ಮದಿಯಾಗಿ ಉಸಿರಾಡಿ! ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ – Kannada News | Karnataka Air Quality Today: Bengaluru and Major Cities AQI Report

ರಾಜ್ಯದ ವಿವಿಧೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ Image Credit source: The economic times ಬೆಂಗಳೂರು, ಜುಲೈ 22: ಮುಂಗಾರು ಮಳೆ ಶುರುವಾಗುವ ಮೊದಲು ಅತ್ಯಂತ ಕಳಪೆ ವಾಯು ಗುಣಮಟ್ಟ (AQI) ನೋಡಿದ್ದ ರಾಜ್ಯ ಇದೀಗ ಕ್ರಮೇಣವಾಗಿ ಸುಧಾರಿಸುತ್ತಿದೆ. ಮಳೆಯ ಕಾರಣದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಕ್ಯೂಐ ಉತ್ತಮವಾಗಿದೆ. ತಾವರಣದಲ್ಲಿದ್ದ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿದ್ದು, ಜನಸಾಮಾನ್ಯರಿಗೆ ನಿಟ್ಟುಸಿರು ಬಿಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ? ಇಂದು ಬೆಂಗಳೂರು…

Read More

ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Mars Enters Taurus: Daily Horoscope for All 12 Zodiac Signs on July 22, 2026 by Dr Basavaraj Guruji

ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ…

Read More