Headlines

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

Ranji Final: ಗಂಡು ಮೆಟ್ಟಿದ ನಾಡಿನಲ್ಲಿ ಕೆಚ್ಚೆದೆಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್ – Kannada News | Mayank Agarwal’s Ranji Trophy Century: Karnataka’s Lone Warrior in Hubballi Final

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸ್ಮರಣೀಯ ಶತಕ ಬಾರಿಸಿ ತಂಡದ ಪರ ಏಕಾಂಗಿ ಹೋರಾಟ ನೀಡುತ್ತಿದ್ದಾರೆ. 153 ಎಸೆತಗಳಲ್ಲಿ ಮಯಾಂಕ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 21ನೇ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ತಂಡವನ್ನು ಕೂಡ 150 ರನ್​ಗಳ ಗಡಿ ದಾಟಿಸಿದರು. ಮೊದಲ ಇನ್ನಿಂಗ್ಸ್​ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳಿಗೆ ಆಲೌಟ್…

Read More

Vastu Tips for Money: ಪರ್ಸ್‌ನಲ್ಲಿ ಈ 4 ವಸ್ತುಗಳಿದ್ದರೆ ಜೀವನದಲ್ಲಿ ಹಣಕ್ಕೆಂದು ಕೊರತೆಯಾಗದು! – Kannada News | Vastu Tips for Money: Keep These 4 Items in Your Wallet to Attract Wealth

ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ. ಅಕ್ಕಿ ಕಾಳು:…

Read More

ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ! – Kannada News

ಮುಂಬೈ, ಜೂನ್ 11: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಾಲೂಕಿನ ಬಂಬಾಲಿ ಗ್ರಾಮದಲ್ಲಿ ದೇಶವನ್ನೇ ಬೆಚ್ಚಿಬೀಳಿಸುತ್ತಿರುವ ಹೃದಯವಿದ್ರಾವಕ ಘಟನೆ (Viral News) ಬೆಳಕಿಗೆ ಬಂದಿದೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬದ ದುಃಸ್ಥಿತಿಯನ್ನು ನೋಡಿ ನೆಟ್ಟಿಗರು ಮರುಕಪಡುತ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಸಿಡಿಲಿನ ಹೊಡೆತಕ್ಕೆ ಬಂಬಲಿ ಗ್ರಾಮದ ಬಡ ರೈತ ಕಾಶಿನಾಥ್ ಗಾಯಕ್ವಾಡ್ ಅವರಿಗೆ ಸೇರಿದ ಎತ್ತು ಸಾವನ್ನಪ್ಪಿತು. ಖಾರಿಫ್ ಋತು ಆರಂಭವಾಗಿ ಕೃಷಿ ಕೆಲಸಗಳು ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಅವರ ಜೀವನೋಪಾಯಕ್ಕೆ ಆಧಾರವಾಗಿದ್ದ…

Read More

ಗಾನವಿ ಕುಟುಂಬಸ್ಥರಿಗೆ ಶಾಕ್​​: ಸೂರಜ್​​ ಸಾವಿನ ಸಂಬಂಧ 9 ಮಂದಿ ಮೇಲೆ FIR – Kannada News | FIR Filed Against Nine Members of Ganavi Family Over Suraj’s Death

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್​​ಐಆರ್​ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ 9 ಮಂದಿ ಮೇಲೆ ಪೊಲೀಸರು ಕೇಸ್​​ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್​​ ಕೂಡ ಸೂಸೈಡ್​​ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ. ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ…

Read More

ಫಿಫಾ ವಿಶ್ವಕಪ್‌ ಸಂಭ್ರಮಾಚರಣೆಯಲ್ಲಿ ದುರಂತ: 13 ವರ್ಷದ ಬಾಲಕ ಸಾವು; ಇಬ್ಬರಿಗೆ ಗಾಯ – Kannada News | Spain Crowned 2026 FIFA World Cup Champions; Victory Celebration Ends in Tragedy

2026 ರ ಫಿಫಾ ವಿಶ್ವಕಪ್​ಗೆ (FIFA World Cup 2026) ಅದ್ಧೂರಿ ತೆರೆಬಿದ್ದಿದೆ. ನ್ಯೂಜೆರ್ಸಿಯಲ್ಲಿ ನಡೆದ ಈ ಪ್ರಶಸ್ತಿ ಪಂದ್ಯದಲ್ಲಿ, ಸ್ಪೇನ್ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು (Spain vs Argentina) 1-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಸ್ಪೇನ್ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಸಾಧನೆಯನ್ನು ಮಾಡಿತು. ತಂಡದ ಈ ಗೆಲುವನ್ನು ಸ್ಪೇನ್​ನಲ್ಲಿ ಹಬ್ಬದಂತೆ ಆಚರಿಸಲಾಗುತ್ತಿದೆ. ಅಲ್ಲಿನ ನಾಗರೀಕರು ಬೀದಿಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ದುರಂತವಾಗಿ ಮಾರ್ಪಟ್ಟಿದೆ. ಫೌಂಟೇನ್ ಬಿದ್ದು ಬಾಲಕ…

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

ತಟ್ಟೆಹಕ್ಕಲು ನದಿಯಲ್ಲಿ 8 ಜಲಸಮಾಧಿ: ಓರ್ವ ಪುರುಷ, ಏಳು ಮಹಿಳೆಯರ ಸಾವು: ಅಸಲಿಗೆ ಆಗಿದ್ದೇನು? – Kannada News | Eight Drown In Thatte Hakkalu River Near Bhatkal While Collecting Sea Shell Stones, here Is reasons for incident

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ (Hakkalu River incident )ಮುಳುಗಿ 8 ಜನರು ಸಾವನ್ನಪ್ಪಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಒಟ್ಟು 14 ಜನರು ಒಂದಾಗಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರವರು ನೀರಿಗೆ ಸಿಲುಕಿದ್ದು, ಎಂಟು ಜನರು ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರನ್ನ ರಕ್ಷಣೆ ಮಾಡಿದ್ದರೆ, ನಾಪತ್ತೆಯಾಗಿರುವ ಇನ್ನಿಬ್ಬರ ಪತ್ತೆಯಾಗಿ ಶೋಧ ಕಾರ್ಯ ಮುಂದುವರೆದಿದೆ. ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43),…

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು….

Read More

Video: ನೇಪಾಳ: ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ, ವಿಡಿಯೋ ನೋಡಿ

ಕಠ್ಮಂಡು, ಮಾರ್ಚ್​ 19: ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಆದರೆ ಪವಾಡವೆಂಬಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪೈಲಟ್ ಸೇರಿ ಐದು ಪ್ರಯಾಣಿಕರು ಬದುಕುಳಿದಿದ್ದಾರೆ.ಆದರೆ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ, ಅವರ ಕಾಲಿಗೆ ಸಣ್ಣಪುಟ್ಟ ಗಾಯವಾಗಿದೆ. ಏರ್ ರಾಜವಂಶದ ಚಾಪರ್ ಅಪಘಾತಕ್ಕೊಳಗಾಗಿರುವ ಹೆಲಿಕಾಪ್ಟರ್ ಆಗಿದೆ. ಕೃಷಿ ಭೂಮಿಯಲ್ಲಿ ಇಳಿಯುವಾಗ ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಗಾಯಗೊಂಡ ಪ್ರಯಾಣಿಕರನ್ನು ಕಂಪನಿಯ ಮತ್ತೊಂದು ಹೆಲಿಕಾಪ್ಟರ್ ಮೂಲಕ ಕಠ್ಮಂಡುವಿಗೆ ಸ್ಥಳಾಂತರಿಸಲಾಯಿತು. ಉಳಿದ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.   ವಿಡಿಯೋ…

Read More