Headlines

ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ – Kannada News | DyCM D.K. Shivakumar Attends Naringana Kambala in Ullal, Mangaluru

ಮಂಗಳೂರು, ಜನವರಿ 11: ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಕೋಣಗಳ ಓಟಕ್ಕೆ ಡಿಕೆಶಿ ಫಿದಾ ಆಗಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಕಂಬಳ ಆಯೋಜಿಸಲಾಗಿತ್ತು. ಇದೇ ವೇಳೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

IND vs ZIM: ಭಾರತ- ಜಿಂಬಾಬ್ವೆ ಪಂದ್ಯಕ್ಕೆ ಮಳೆ ಅಡ್ಡಿ? ಹರಾರೆ ಪಿಚ್ ಯಾರಿಗೆ ಸಹಕಾರಿ? – Kannada News | IND vs ZIM T20 Series: 1st Match Preview, Pitch Report and Weather in Harare

ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜುಲೈ 23 ರಂದು ಪ್ರಾರಂಭವಾಗಲಿದೆ. ಮೂರೂ ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿವೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಶ್ರೇಯಸ್ ಅಯ್ಯರ್ ನಾಯಕನಾಗಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದ್ದಾರೆ. ಇತ್ತ ಟೀಂ ಇಂಡಿಯಾ ಕೂಡ ಸತತ 6 ಪಂದ್ಯಗಳ ಸೋಲಿನ ನಂತರ ಗೆಲುವಿನ ಸವಿಸವಿಯುವ ಗುರಿ ಹೊಂದಿದೆ. ಇದಕ್ಕೆ ಪೂರಕವಾಗಿ ಹರಾರೆಯ ಹವಾಮಾನ ಕೂಡ ಮೊದಲ ಪಂದ್ಯಕ್ಕೆ ಅನುಕೂಲಕರವಾಗಿರುತ್ತದೆ ಎಂದು…

Read More

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ – Kannada News | Central Govt not allowing screening of Palestinian films: Prakash Raj expresses displeasure

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಉದ್ಘಾಟನೆ ಆಗಿದೆ. ಈ ಸಿನಿಮೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿ ಆಗಿದ್ದಾರೆ. ಉದ್ಘಾಟನಾ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ಸುಮಾರು 16 ವರ್ಷಗಳ ಹಿಂದೆ ಈ ಸಿನಿಮೋತ್ಸವವನ್ನು ನಾನು ಉದ್ಘಾಟನೆ ಮಾಡಿದ್ದೆ. ಆಗ ಒಂದು ಚೈತನ್ಯ ಇತ್ತು. ರಂಗನತಿಟ್ಟಿಗೆ ಬೇರೆ ಬೇರೆ ದೇಶದ ಹಕ್ಕಿಗಳು ಬರುವ ರೀತಿಯಲ್ಲಿ ಉತ್ಸವ ಆಗಬೇಕು ಎಂಬ ಚೈತನ್ಯದಿಂದ ಶುರುಮಾಡಿದ ಉತ್ಸವ ಇದು. 16 ವರ್ಷದ ಬಳಿಕ ನಟನಾಗಿ,…

Read More

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ – Kannada News | Jr. NTR and Trivikram Team Up for Mythological Film; Anirudh Scores Music

ತೆಲುಗು ನಟ ನಟ ಜೂನಿಯರ್ ಎನ್‌ಟಿಆರ್ (JR NTR) ಸದ್ಯ ‘ಡ್ರ್ಯಾಗನ್’ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಸಿನಿಮಾ ಕೆಲಸಗಳು ನಡೆಯುವಾಗಲೇ ಜೂನಿಯರ್ ಎನ್​​ಟಿಆರ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದು ಭಾರಿ ಬಜೆಟ್‌ನ ಪೌರಾಣಿಕ ಸಿನಿಮಾ ಮೂಡಿಬರಲಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರವನ್ನು ನಂದಮೂರಿ ಕಲ್ಯಾಣ್…

Read More

ಈ ಬಾರಿ ಗೆಲ್ಲಲು ಇದುವೇ ಕಾರಣ: ಶ್ರೇಯಸ್ ಅಯ್ಯರ್ – Kannada News | Shreyas iyer Post match interview after IND vs ZIM 3rd T20 Match

ಝಿಂಬಾಬ್ವೆ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಯುವ ಪಡೆಯ ಪ್ರದರ್ಶನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಂಡದಲ್ಲಿರುವ ಯುವ ಆಟಗಾರರು ಅತ್ಯಂತ ಭಯವಿಲ್ಲದೆ ಕ್ರಿಕೆಟ್ ಆಡುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಾಯಕರಾಗಿ ತಮ್ಮ ಮೊದಲ ಸರಣಿ ಗೆಲುವಿನ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ನಮ್ಮ ತಂಡದಲ್ಲಿ ಯುವ ಆಟಗಾರರ ದಂಡೇ ಇದೆ. ಅವರು ಮೈದಾನದಲ್ಲಿ ತೋರುತ್ತಿರುವ ಎನರ್ಜಿ ಮತ್ತು ಆಟದ ಮೇಲಿರುವ ಅವರ…

Read More

KD Movie Trailer: ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ; ಧ್ರುವ ಸರ್ಜಾ, ಸಂಜಯ್ ದತ್ ಆ್ಯಕ್ಷನ್ ಅಬ್ಬರ – Kannada News | Dhruva Sarja Sanjay Dutt starrer KD movie trailer release Directed by Jogi Prem

ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಟ್ರೇಲರ್ (KD Trailer) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಧ್ರುವ ಸರ್ಜಾ (Dhruva Sarja) ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಕನ್ನಡ ಮಾತ್ರವಲ್ಲದೇ…

Read More

‘ಬಿಗ್ ಬಾಸ್’ ಪ್ರೋಮೋ ರಿಲೀಸ್; ಗಮನ ಸೆಳೆದ ಹೊಸ ನಿರೂಪಕ – Kannada News

ರಿಯಾಲಿಟಿ ಶೋ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿರುವ ‘ಬಿಗ್ ಬಾಸ್’ ಶೋ ಈಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ರೆಡಿಯಾಗಿದೆ. ಬರೋಬ್ಬರಿ ಒಂದು ದಶಕದ ಸುದೀರ್ಘ ಗ್ಯಾಪ್ ನಂತರ ‘ಬಿಗ್ ಬಾಸ್ ಬಾಂಗ್ಲಾ’ ಭರ್ಜರಿಯಾಗಿ ಕಂಬ್ಯಾಕ್ ಮಾಡುತ್ತಿದ್ದು, ಶೋನ ಹೊಸ ಟೀಸರ್ ಅಧಿಕೃತವಾಗಿ ರಿಲೀಸ್ ಆಗಿದೆ. ವಿಶೇಷ ಎಂದರೆ, ಈ ಬಾರಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಶೋನ ನಿರೂಪಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಸ್ಟಾರ್ ಜಲ್ಶಾ ವಾಹಿನಿಯು ತನ್ನ ಅಧಿಕೃತ…

Read More

ಯುದ್ಧ ಭೂಮಿಯಿಂದ ಬಳ್ಳಾರಿ ಮಂದಿ ವಾಪಸ್: ದೃಷ್ಟಿ ತೆಗೆದು, ಪಟಾಕಿ ಸಿಡಿಸಿ ಸ್ವಾಗತಿಸಿದ ಕುಟುಂಬಸ್ಥರು – Kannada News | Ballari Tourists Rescued from Dubai Amid Israel Iran War: Family members welcomed with fireworks

ಆರತಿ ಮಾಡಿ ಸ್ವಾಗತಿಸುತ್ತಿರುವುದು Image Credit source: tv9 kannada ಬಳ್ಳಾರಿ, ಮಾರ್ಚ್​ 05: ಅವರೆಲ್ಲಾ ದುಬೈಗೆ ಪ್ರವಾಸಕ್ಕೆ ಹೋದವರು. ಪ್ರವಾಸ ಮುಗಿಸಿ ಇನ್ನೇನು ತಾಯ್ನಾಡಿಗೆ ಮರಳಬೇಕಿತ್ತು. ಅಷ್ಟರಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ (Israel-Iran War) ಆರಂಭವಾಗಿ ಬಿಟ್ಟಿದೆ. ಇತ್ತ ವಿಮಾನ ಇಲ್ಲದೆ ಜೀವ ಕೈಯಲ್ಲಿ ಹಿಡಿದು 35ಕ್ಕೂ ಹೆಚ್ಚು ಬಳ್ಳಾರಿಗರು ದುಬೈನಲ್ಲಿ ಪರದಾಡಿದ್ದಾರೆ. ಆದರೆ ಸರ್ಕಾರದ ನೆರವಿನಿಂದ ಇಂದು ಬಳ್ಳಾರಿಗೆ ವಾಪಾಸ್ ಆಗಿದ್ದಾರೆ. ಆ ಮೂಲಕ ನಿಟ್ಟುಸಿರು ಬಿಟ್ಟಿದ್ದಾರೆ ಇತ್ತ ಕುಟುಂಬಸ್ಥರು ಅವರನ್ನ…

Read More

ಮಾನವೀಯತೆ ಮರೆತ್ರಾ ವೈದ್ಯರು?: ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ – Kannada News | Koppal Hospital Faces Negligence Allegations Over Injured Womans Treatment Delay

ಕೊಪ್ಪಳ, ಮಾರ್ಚ್​ 05: ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಬಿದ್ದು ಗಾಯಗೊಂಡಿದ್ದ ಚಿಕ್ಕಬೊಮ್ಮನಾಳ ನಿವಾಸಿ ಹುಲಿಗೆಮ್ಮ ಎಂಬ ಮಹಿಳೆಯನ್ನು ರಾತ್ರಿ 11 ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ವೈದ್ಯರು ಮಾನವೀಯತೆಯನ್ನು ಮರೆತು, ಅವರನ್ನು ಅಡ್ಮಿಟ್ ಮಾಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ. ಗಾಯಾಳು ಹುಲಿಗೆಮ್ಮ ಚಿಕಿತ್ಸೆಗಾಗಿ ರಾತ್ರಿಯಿಡೀ ಸ್ಟ್ರೆಚರ್ ಮೇಲೆ ಮಲಗಿದ್ದರು. ಬೆನ್ನು ಮೂಳೆಗೆ ಪೆಟ್ಟಾಗಿ, ನರ ಬ್ಲಾಕ್ ಆಗಿದೆ ಎಂದು ವೈದ್ಯರು ಹೇಳಿದ್ದು, ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದಿದ್ದಾರೆ. ಆದರೆ, ರಕ್ತದೊತ್ತಡ…

Read More

ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್ – Kannada News | Zameer Ahmed Khan review Zaid Khan Cult Movie

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ತೆರೆಗೆ ಬಂದಿದೆ. ಈ ಸಿನಿಮಾನ ಝೈದ್ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವೀಕ್ಷಿಸಿದ್ದಾರೆ. ‘ಸಿನಿಮಾ ನೋಡಿದ ಜನರು ವಿಮರ್ಶೆ ತಿಳಿಸಬೇಕು. ನಾನು ತಂದೆಯಾಗಿ ಚೆನ್ನಾಗಿದೆ ಎಂದೇ ಹೇಳುತ್ತೇನೆ. ಆದರೆ, ಸಿನಿಮಾ ನಿಜಕ್ಕೂ ಉತ್ತಮವಾಗಿದೆ. ಬನಾರಸ್ ಚಿತ್ರಕ್ಕೆ ಹೋಲಿಸಿದರೆ ಇದು ಬೇರೆ ರೀತಿ ಇದೆ’ ಎಂದಿದ್ದಾರೆ ಝೈದ್ ಖಾನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More