29 ಕಡೆ ಕಣಕ್ಕಿಳಿದು ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Source link

ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ – Kannada News

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ 2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಆಯ್ಕೆಯಲ್ಲಿ ಬಿಸಿಸಿಐ ಹಲವು ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಗಳನ್ನು ಮಾಡಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ.

ಈ ಬದಲಾವಣೆಯೊಂದಿಗೆ ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಂಡದ ನೂತನ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇನ್ನು ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಹಾಗೆಯೇ ಐಪಿಎಲ್ 2026 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅವರನ್ನು ಭಾರತ ಹಿರಿಯರ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಟಿ20 ಸರಣಿ ಹಾಗೂ ಟೂರ್ನಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…

ಐರ್ಲೆಂಡ್ ಟಿ20 ಸರಣಿಗೆ ಭಾರತ ತಂಡ:  ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.

ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!

ಏಷ್ಯಾಕಪ್​ಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ  ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Source link

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಜೂ. 07 ರಿಂದ 13ರ ವರೆಗಿನ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ – Kannada News

ಜೂನ್ 07ರಿಂದ ಜೂನ್‌ 13ರವರೆಗೆ ಎರಡನೇ ವಾರವಾಗಿದ್ದು ಉದ್ಯೋಗದಲ್ಲಿ ಎಷ್ಟೇ ಎಚ್ಚರಿಕೆಯೂ ಸಾಧ್ಯವಾಗದು. ಬೌದ್ಧಿಕ ಕಸರತ್ತಿನಿಂದ ಆಯಾಸಮಾಡಿಕೊಳ್ಳದೇ ಹೇಗೆ ನಿರ್ವಹಿಸುವುದು ಎಂಬುದನ್ನು ಕೂಲಂಕಷವಾಗಿ ಚಿಂತಿಸಿ ತೀರ್ಮಾನಿಸಿ.‌ ಉತ್ತಮ ಶ್ರೇಯಸ್ಸು ಎಲ್ಲರದ್ದಾಗಲಿ.

​ಮೇಷ ರಾಶಿ :

ನಿಮ್ಮದೇ ರಾಶಿಯಲ್ಲಿ ಮಂಗಳನಿರುವುದರಿಂದ ಉದ್ಯೋಗದಲ್ಲಿ ಅಪಾರ ಉತ್ಸಾಹ ಮತ್ತು ಧೈರ್ಯ ಕಂಡುಬರುತ್ತದೆ. ಆದರೆ ಮೀನದಲ್ಲಿರುವ ಶನಿಯ ದೃಷ್ಟಿ ಹಾಗೂ ವೃಷಭದ ಸೂರ್ಯನ ಪ್ರಭಾವದಿಂದಾಗಿ, ಅತಿಯಾದ ಆತುರ ಅಥವಾ ಸಹೋದ್ಯೋಗಿಗಳ ಜೊತೆ ವಾಗ್ವಾದ ಉಂಟಾಗದಂತೆ ಎಚ್ಚರ ವಹಿಸಬೇಕು. ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿವೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದ್ದು, ನಿಮ್ಮ ಸಾಮರ್ಥ್ಯಕ್ಕೆ ತಕ್ಕ ಗೌರವ ಸಿಗಲಿದೆ.

ವೃಷಭ ರಾಶಿ:

​ನಿಮ್ಮ ರಾಶಿಯಲ್ಲಿಯೇ ಸೂರ್ಯ ಮತ್ತು ಚಂದ್ರರ ಯುತಿ ಇರುವುದರಿಂದ, ಕೆಲಸದ ಸ್ಥಳದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ಬುಧನು ದ್ವಿತೀಯದಲ್ಲಿದ್ದು, ಮಾತು ಮತ್ತು ಸಂವಹನ ಕೌಶಲ್ಯದಿಂದ ಕಠಿಣವಾದ ಕೆಲಸಗಳನ್ನೂ ಸುಲಭವಾಗಿ ಪೂರ್ಣಗೊಳಿಸುವಿರಿ. ಸಹೋದ್ಯೋಗಿಗಳಿಂದ ಉತ್ತಮ ಬೆಂಬಲ ಸಿಗಲಿದೆ. ಹೊಸ ಉದ್ಯಮ ಅಥವಾ ಹೂಡಿಕೆಗೆ ಈ ವಾರ ಪೂರಕವಾಗಿದ್ದರೂ, ಆತುರದ ನಿರ್ಧಾರಗಳನ್ನು ತಪ್ಪಿಸುವುದು ಒಳ್ಳೆಯದು.

ಮಿಥುನ ರಾಶಿ:

​ನಿಮ್ಮ ರಾಶ್ಯಾಧಿಪತಿ ಬುಧನು ಸ್ವಸ್ಥಾನದಲ್ಲಿಯೇ ಇರುವುದರಿಂದ ಬೌದ್ಧಿಕ ಕೆಲಸಗಳಲ್ಲಿ ನಿರತರಾಗಿರುವವರಿಗೆ ಅತ್ಯುತ್ತಮ ಪ್ರಗತಿ ಕಂಡುಬರುತ್ತದೆ. ಕರ್ಕಾಟಕದ ಗುರು-ಶುಕ್ರರ ಶುಭ ಪ್ರಭಾವದಿಂದಾಗಿ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಸೂಕ್ತ ಅವಕಾಶಗಳು ಕೈಗೂಡಲಿವೆ. ಉದ್ಯೋಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಮನ್ನಣೆ ದೊರೆತು, ಕಚೇರಿಯಲ್ಲಿ ನಿಮ್ಮ ವರ್ಚಸ್ಸು ವೃದ್ಧಿಯಾಗಲಿದೆ.

ಕರ್ಕಾಟಕ ರಾಶಿ:

​ನಿಮ್ಮ ರಾಶಿಯಲ್ಲಿ ಗುರು ಮತ್ತು ಶುಕ್ರರ ಸಂಯೋಜನೆ ಇರುವುದರಿಂದ ವೃತ್ತಿಜೀವನದಲ್ಲಿ ಅತ್ಯಂತ ಶುಭ ಫಲಗಳು ದೊರೆಯಲಿವೆ. ಮೇಷದ ಮಂಗಳನ ಹತ್ತನೇ ದೃಷ್ಟಿ ಉದ್ಯೋಗದ ಮೇಲೆ ಇರುವುದರಿಂದ ಅಧಿಕಾರ ಪ್ರಾಪ್ತಿ ಮತ್ತು ಬಡ್ತಿಯ ಯೋಗವಿದೆ. ಕಚೇರಿಯಲ್ಲಿ ನಿಮ್ಮ ನಿರ್ಧಾರಗಳಿಗೆ ಭಾರಿ ಮನ್ನಣೆ ಸಿಗಲಿದೆ. ವ್ಯಾಪಾರಸ್ಥರಿಗೆ ಲಾಭದ ಪ್ರಮಾಣ ಹೆಚ್ಚಾಗಲಿದ್ದು, ಹೊಸ ಒಪ್ಪಂದಗಳಿಗೆ ಸಹಿ ಹಾಕಲು ಇದು ಸಕಾಲ.

ಸಿಂಹ ರಾಶಿ :

​ನಿಮ್ಮ ರಾಶಿಯಲ್ಲಿ ಕೇತು ಇದ್ದರೂ, ರಾಶ್ಯಾಧಿಪತಿ ಸೂರ್ಯನು ವೃಷಭದಲ್ಲಿ (ಹತ್ತನೇ ಮನೆಯಲ್ಲಿ) ದಿಗ್ದರ್ಶನ ಪಡೆಯುತ್ತಿರುವುದರಿಂದ ವೃತ್ತಿರಂಗದಲ್ಲಿ ಅದ್ಭುತ ಯಶಸ್ಸು ಕಾದಿದೆ. ಕಳೆದುಹೋದ ಗೌರವ ಅಥವಾ ಹುದ್ದೆ ಮರಳಿ ಸಿಗುವ ಸಾಧ್ಯತೆ ಇದೆ. ಸರ್ಕಾರಿ ವಲಯದ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮೇಲಾಧಿಕಾರಿಗಳ ಸಂಪೂರ್ಣ ಬೆಂಬಲ ನಿಮ್ಮದಾಗಲಿದ್ದು, ಕಠಿಣ ಸವಾಲುಗಳನ್ನು ಸುಲಭವಾಗಿ ಎದುರಿಸುವಿರಿ.

ಕನ್ಯಾ ರಾಶಿ:

​ರಾಶ್ಯಾಧಿಪತಿ ಬುಧನು ಹತ್ತನೇ ಮನೆಯಾದ ಮಿಥುನದಲ್ಲಿ ಭದ್ರ ಮಹಾಪುರುಷ ಯೋಗವನ್ನು ರೂಪಿಸುತ್ತಿರುವುದರಿಂದ, ಉದ್ಯೋಗದಲ್ಲಿ ಮಹತ್ತರ ಬದಲಾವಣೆಗಳು ಬರಲಿವೆ. ತಾಂತ್ರಿಕ, ಬ್ಯಾಂಕಿಂಗ್ ಮತ್ತು ಬರವಣಿಗೆ ಕ್ಷೇತ್ರದಲ್ಲಿರುವವರಿಗೆ ಉತ್ತಮ ಪ್ರಗತಿ ಸಿಗಲಿದೆ. ಶನಿಯ ಸಪ್ತಮ ದೃಷ್ಟಿ ಇರುವುದರಿಂದ ಕೆಲಸದ ಒತ್ತಡ ಸ್ವಲ್ಪ ಹೆಚ್ಚಾಗಬಹುದು, ಆದರೆ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಮತ್ತು ಪ್ರಶಂಸೆ ಖಂಡಿತವಾಗಿ ದೊರೆಯಲಿದೆ.

ತುಲಾ ರಾಶಿ:

​ನಿಮ್ಮ ರಾಶ್ಯಾಧಿಪತಿ ಶುಕ್ರನು ಉಚ್ಚ ಗುರುವಿನೊಂದಿಗೆ ಹತ್ತನೇ ಮನೆಯಲ್ಲಿ ಭಾಗ್ಯ ಸ್ಥಾನವನ್ನು ವೀಕ್ಷಿಸುತ್ತಿರುವುದರಿಂದ, ವಿದೇಶಿ ಉದ್ಯೋಗಾವಕಾಶಗಳು ಒದಗಿ ಬರಲಿವೆ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಸುವರ್ಣ ಅವಕಾಶಗಳು ಲಭಿಸಲಿವೆ. ಉದ್ಯೋಗದಲ್ಲಿ ಸ್ಥಾನಪಲ್ಲಟ ಅಥವಾ ವರ್ಗಾವಣೆಯ ಯೋಗವಿದೆ. ಹಿರಿಯ ಅಧಿಕಾರಿಗಳ ಪ್ರೋತ್ಸಾಹದಿಂದಾಗಿ ನಿಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ.

ವೃಶ್ಚಿಕ ರಾಶಿ:

ನಿಮ್ಮ ರಾಶ್ಯಾಧಿಪತಿ ಮಂಗಳನು ಆರನೇ ಮನೆಯಾದ ಮೇಷದಲ್ಲಿದ್ದು ಬಲಿಷ್ಠನಾಗಿದ್ದಾನೆ. ಇದು ಉದ್ಯೋಗದಲ್ಲಿರುವ ಶತ್ರುಗಳು ಮತ್ತು ಸ್ಪರ್ಧಿಗಳ ಮೇಲಿನ ವಿಜಯವನ್ನು ಸೂಚಿಸುತ್ತದೆ. ಕೋರ್ಟ್-ಕಚೇರಿ ಅಥವಾ ವೃತ್ತಿಪರ ವಿವಾದಗಳು ನಿಮ್ಮ ಪರವಾಗಿ ಬಗೆಹರಿಯಲಿವೆ. ಕಚೇರಿಯಲ್ಲಿ ಹೊಸ ಜವಾಬ್ದಾರಿಗಳು ಸಿಗಲಿದ್ದು, ಕೆಲಸದ ಒತ್ತಡದ ನಡುವೆಯೂ ನಿಮ್ಮ ದಕ್ಷತೆಯನ್ನು ಸಾಬೀತುಪಡಿಸುವಿರಿ. ಆರ್ಥಿಕವಾಗಿ ಲಾಭದಾಯಕ ವಾರವಿದು.

ಧನು ರಾಶಿ:

​ನಿಮ್ಮ ರಾಶ್ಯಾಧಿಪತಿ ಗುರುವು ಅಷ್ಟಮದಲ್ಲಿದ್ದರೂ ಶುಕ್ರನೊಂದಿಗಿರುವುದರಿಂದ ಮತ್ತು ಬುಧನ ದೃಷ್ಟಿ ಇರುವುದರಿಂದ, ಸಂಶೋಧನೆ ಹಾಗೂ ರಹಸ್ಯ ಕಾವಲು ವಲಯದ ಉದ್ಯೋಗಿಗಳಿಗೆ ಲಾಭವಾಗಲಿದೆ. ಶನಿಯ ನಾಲ್ಕನೇ ಮನೆ ವೀಕ್ಷಣೆ ಇರುವುದರಿಂದ ಕೆಲಸದಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗಬಹುದು. ತಾಳ್ಮೆಯಿಂದ ಕೆಲಸ ನಿರ್ವಹಿಸುವುದು ಅಗತ್ಯ. ಕಚೇರಿಯಲ್ಲಿ ವದಂತಿಗಳಿಗೆ ಕಿವಿಗೊಡದೆ ನಿಮ್ಮ ಕೆಲಸದ ಕಡೆಗೆ ಮಾತ್ರ ಗಮನ ಹರಿಸಿ.

ಮಕರ ರಾಶಿ :

​ನಿಮ್ಮ ರಾಶ್ಯಾಧಿಪತಿ ಶನಿಯು ತೃತೀಯದಲ್ಲಿದ್ದು ಧೈರ್ಯವನ್ನು ಹೆಚ್ಚಿಸಲಿದ್ದಾನೆ. ಐದನೇ ಮನೆಯ ಸೂರ್ಯ-ಚಂದ್ರರ ಪ್ರಭಾವದಿಂದಾಗಿ ಕಲಾತ್ಮಕ ಮತ್ತು ಸೃಜನಶೀಲ ರಂಗದಲ್ಲಿರುವವರಿಗೆ ಹೊಸ ಯೋಜನೆಗಳು ಸಿಗಲಿವೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಮೂಡಲಿದೆ. ಉದ್ಯೋಗ ನಿಮಿತ್ತ ಸಣ್ಣ ಪ್ರಯಾಣಗಳು ಮಾಡಬೇಕಾಗಬಹುದು. ವ್ಯಾಪಾರಸ್ಥರಿಗೆ ಹೂಡಿಕೆಯಿಂದ ಉತ್ತಮ ಲಾಭ ತರುವಂತಹ ವಾರವಾಗಿದೆ.

ಕುಂಭ ರಾಶಿ :

ನಿಮ್ಮ ರಾಶಿಯಲ್ಲಿ ರಾಹು ಇರುವುದರಿಂದ ಮತ್ತು ಶನಿಯು ದ್ವಿತೀಯದಲ್ಲಿರುವುದರಿಂದ ವೃತ್ತಿ ಜೀವನದಲ್ಲಿ ಕೆಲವು ಗೊಂದಲಗಳು ಏರ್ಪಡಬಹುದು. ಆದರೆ ನಾಲ್ಕನೇ ಮನೆಯ ಸೂರ್ಯ ಮತ್ತು ಬುಧನ ಶುಭ ದೃಷ್ಟಿಯಿಂದಾಗಿ ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ನಿಮ್ಮ ಹತೋಟಿಗೆ ಬರಲಿದೆ. ರಿಯಲ್ ಎಸ್ಟೇಟ್ ಮತ್ತು ವಾಹನೋದ್ಯಮದಲ್ಲಿ ಇರುವವರಿಗೆ ಉತ್ತಮ ಲಾಭ ಸಿಗಲಿದೆ. ಯಾವುದೇ ದೊಡ್ಡ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಯೋಚಿಸಿ.

ಮೀನ ರಾಶಿ:

ನಿಮ್ಮ ರಾಶಿಯಲ್ಲಿಯೇ ಶನಿ ಇರುವುದರಿಂದ ಕೆಲಸದ ಹೊರೆ ಹೆಚ್ಚಾಗಲಿದ್ದು, ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಆದರೆ ಐದನೇ ಮನೆಯಲ್ಲಿರುವ ಉಚ್ಚ ಗುರು ಮತ್ತು ಶುಕ್ರರ ಪ್ರಭಾವದಿಂದಾಗಿ ನಿಮ್ಮ ಶ್ರಮಕ್ಕೆ ತಕ್ಕ ಗೌರವ ಹಾಗೂ ಧನಲಾಭ ದೊರೆಯಲಿದೆ. ಶಿಕ್ಷಣ ಮತ್ತು ಸಮಾಜಸೇವಾ ವಲಯದಲ್ಲಿರುವವರಿಗೆ ಗೌರವ ಹೆಚ್ಚಾಗಲಿದೆ. ಆತುರದಿಂದ ಕೆಲಸ ಬಿಡುವ ನಿರ್ಧಾರಗಳನ್ನು ಮಾಡಬೇಡಿ, ತಾಳ್ಮೆಯೇ ಈ ವಾರದ ಯಶಸ್ಸಿನ ಸೂತ್ರ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಭಾಷಣಕ್ಕೆ ಅಡ್ಡಿ: ತೀವ್ರ ಆಕ್ರೋಶ ಹೊರಹಾಕಿದ ಹೈಕಮಿಷನ್! – Kannada News

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ Image Credit source: India Today

ನವದೆಹಲಿ, ಜೂನ್ 06: ಲಂಡನ್‌ನಲ್ಲಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಕೆಲವರು ಗದ್ದಲ ಸೃಷ್ಟಿಸಿ, ಅಡ್ಡಿಪಡಿಸಿರುವ ಘಟನೆ ನಡೆದಿದೆ. ಈ ವರ್ತನೆಯನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ (ರಾಯಭಾರ ಕಚೇರಿ) ತೀವ್ರವಾಗಿ ಖಂಡಿಸಿದೆ. ಇದು ಸಭ್ಯತೆಯಿಂದ ಕೂಡಿದ ನಡವಳಿಕೆಯಲ್ಲ. ಗೌರವಾನ್ವಿತ ಕಾರ್ಯಕ್ರಮಗಳಲ್ಲಿ ಇಂತಹ ವರ್ತನೆಗಳನ್ನು ಒಪ್ಪಲು ಸಾಧ್ಯವಿಲ್ಲ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಶಾಂತಿಯುತ ಮತ್ತು ಗೌರವಾನ್ವಿತ ರೀತಿಯಲ್ಲಿ ವ್ಯಕ್ತಪಡಿಸಬೇಕು ಎಂದು ಹೈಕಮಿಷನ್ ತನ್ನ X ಖಾತೆಯಲ್ಲಿ ತಿಳಿಸಿದೆ.

ಮುಖ್ಯಾಂಶಗಳು

  • ಲಂಡನ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಕಾರ್ಯಕ್ರಮಕ್ಕೆ ಅಡ್ಡಿ.
  • ಭಾರತದಲ್ಲಿ ಭಿನ್ನಾಭಿಪ್ರಾಯ ಹತ್ತಿಕ್ಕುವಿಕೆ ಮತ್ತು ‘ಕಾಕ್ರೋಚ್’ ಹೇಳಿಕೆ ಕುರಿತು ಪ್ರಶ್ನಿಸಿದ ಮಹಿಳೆ.
  • ಗದ್ದಲದ ವರ್ತನೆಯನ್ನು ತೀವ್ರವಾಗಿ ಖಂಡಿಸಿದ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್.

ಅಸಲಿಗೆ ಲಂಡನ್‌ನಲ್ಲಿ ಆಗಿದ್ದೇನು?

ಜೂನ್ 4 ರಂದು ಲಂಡನ್‌ನ ಬರ್ಕ್‌ಬೆಕ್ ಕಾಲೇಜಿನಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ‘ಕೃತಕ ಬುದ್ಧಿಮತ್ತೆ (AI) ಮತ್ತು ಅಂತರರಾಷ್ಟ್ರೀಯ ಕಾನೂನು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುತ್ತಿದ್ದರು. ಈ ವೇಳೆ ಪ್ರಶ್ನೋತ್ತರ ಅವಧಿಯಲ್ಲಿ ಸಾರ್ವಜನಿಕರಲ್ಲಿದ್ದ ಕೆಲವರು, ಭಾರತದಲ್ಲಿ ವಿರೋಧದ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿ ಪ್ರಶ್ನೆ ಕೇಳಲು ಆರಂಭಿಸಿದರು. ಅಲ್ಲದೆ, ನ್ಯಾಯಮೂರ್ತಿಗಳು ಇತ್ತೀಚೆಗೆ ನೀಡಿದ್ದ ಕಾಕ್ರೋಚ್ ಹೇಳಿಕೆಯ ಕುರಿತೂ ಪ್ರಶ್ನಿಸಲು ಯತ್ನಿಸಿದರು.

ಆಗ ಕಾರ್ಯಕ್ರಮದ ಸಂಘಟಕರು ಮತ್ತು ನಿರೂಪಕರು ಮಧ್ಯಪ್ರವೇಶಿಸಿ, ಈ ಪ್ರಶ್ನೆಗಳು ಇಂದಿನ ವಿಷಯಕ್ಕೆ ಸಂಬಂಧಿಸಿದ್ದಲ್ಲ ಎಂದು ಹೇಳಿ ಆ ಪ್ರಶ್ನೆಗಳನ್ನು ಅಲ್ಲಗಳಿದರು. ಈ ಘಟನೆಯ ವಿಡಿಯೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

ವೈರಲ್ ವಿಡಿಯೋದಲ್ಲೇನಿದೆ?

ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು, ಭಾರತದಲ್ಲಿ ಸರ್ಕಾರದ ನಿಲುವುಗಳನ್ನು ವಿರೋಧಿಸುವವರನ್ನು ಹತ್ತಿಕ್ಕಲಾಗುತ್ತಿದೆ ಎಂದು ದೇಶದ ಮತ್ತು ಜಾಗತಿಕ ಕಾನೂನು ತಜ್ಞರು ಕಳವಳ ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರಶ್ನೆ ಕೇಳುತ್ತಿರುವುದು ಕಂಡುಬಂದಿದೆ. ಈ ಒಂದು ಅಸಹಿಷ್ಣುತೆ ನ್ಯಾಯಾಧೀಶರ ಭಾಷಣದಲ್ಲೂ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ ಎಂದಿದ್ದಾರೆ. ಆದರೆ ತಕ್ಷಣವೇ ನಿರೂಪಕರು, ಕ್ಷಮಿಸಿ, ಇಂದಿನ ವಿಷಯ ಕೃತಕ ಬುದ್ಧಿಮತ್ತೆಗೆ ಸಂಬಂಧಿಸಿದ್ದಾಗಿದೆ. ಹಾಗಾಗಿ ಈ ಪ್ರಶ್ನೆಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಮೈಕ್ ಕಟ್ ಮಾಡಿದ್ದಾರೆ.

ಕೃತಕ ಬುದ್ಧಿಮತ್ತೆ (AI) ಬಗ್ಗೆ ಸಿಜೆಐ ಹೇಳಿದ್ದೇನು?

ಇದಕ್ಕೂ ಮುನ್ನ ಭಾಷಣ ಮಾಡಿದ್ದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಕೃತಕ ಬುದ್ಧಿಮತ್ತೆಯು ಆಡಳಿತ, ನ್ಯಾಯಾಂಗ ಮತ್ತು ಸಂವಹನ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸುತ್ತಿದೆ. ತಂತ್ರಜ್ಞಾನ ಎಷ್ಟೇ ಬೆಳೆದರೂ ಅದು ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವ ಮತ್ತು ಮಾನವನ ಘನತೆಗೆ ಬದ್ಧವಾಗಿರಬೇಕು ಎಂದು ಒತ್ತಿ ಹೇಳಿದ್ದರು. ತಂತ್ರಜ್ಞಾನ ಮತ್ತು ಮಾನವ ಸ್ವಾತಂತ್ರ್ಯದ ನಡುವಿನ ಸಂಬಂಧವನ್ನು ಮುಂಬರುವ ದಿನಗಳು ನಿರ್ಧರಿಸಲಿವೆ ಎಂದು ಅವರು ತಿಳಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

KCET Results 2026: ಕೆಸಿಇಟಿ ಫಲಿತಾಂಶ ಪ್ರಕಟ, ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ – Kannada News

ಬೆಂಗಳೂರು, ಜೂನ್ 06: ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಸಚಿವರ ಜಂಟಿ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ ‘ಬಂದರ್’; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಹಾಗೂ ಬಾಲಿವುಡ್ ನಟ ಬಾಬಿ ಡಿಯೋಲ್ ಕಾಂಬಿನೇಷನ್‌ನ ‘ಬಂದರ್’ ಚಿತ್ರ (Bandar Movie) ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಈ ಇಬ್ಬರು ದಿಗ್ಗಜರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಶಾದಾಯಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಸಾಕ್ನಿಲ್ಕ್ ಪ್ರಕಾರ, ಚಿತ್ರವು ತನ್ನ ಮೊದಲ ದಿನ ದೇಶಾದ್ಯಂತ ಕೇವಲ 50 ಲಕ್ಷ ನೆಟ್ ಕಲೆಕ್ಷನ್ ಮಾಡಿದ್ದು, ಕನಿಷ್ಠ 1 ಕೋಟಿ ರೂಪಾಯಿ ಗಡಿ ದಾಟಲು ಕೂಡ ವಿಫಲವಾಗಿದೆ. ಚಿತ್ರದ ಒಟ್ಟು ಗ್ರಾಸ್ ಗಳಿಕೆ 60 ಲಕ್ಷಕ್ಕೆ ಬಂದು ನಿಂತಿದೆ.

ಸಿನಿಮಾ ವಿಶ್ಲೇಷಕರ ಪ್ರಕಾರ, ಚಿತ್ರದ ಈ ಭಾರಿ ಸೋಲಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಇತ್ತೀಚಿನ ನಡೆಗಳೂ ಕಾರಣ ಇರಬಹುದು ಎನ್ನಲಾಗುತ್ತಿದೆ. ಅನುರಾಗ್ ಕಶ್ಯಪ್ ಅವರು ಈ ಹಿಂದೆ ಬಾಲಿವುಡ್‌ನ ಕಾರ್ಯವೈಖರಿಯನ್ನು ಬಹಿರಂಗವಾಗಿಯೇ ಬೈದು, ತೀವ್ರ ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೆ, ಅವರು ಮುಂಬೈ ನಗರವನ್ನು ತೊರೆದು ಬೆಂಗಳೂರಿನಲ್ಲಿ ಬಂದು ಸೆಟಲ್ ಆಗಿದ್ದಾರೆ.

ಬಾಲಿವುಡ್ ಮಾರುಕಟ್ಟೆಯಿಂದ ದೂರ ಸರಿದು ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವುದು ಹಾಗೂ ಹಿಂದಿ ಚಿತ್ರರಂಗದ ವಿರುದ್ಧ ಅವರು ನೀಡಿದ್ದ ಹೇಳಿಕೆ ಉತ್ತರ ಭಾರತದ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ನಕಾರಾತ್ಮಕ ಭಾವನೆ ಮೂಡಿಸಿರಬಹುದು. ಇದು ನೇರವಾಗಿ ‘ಬಂದರ್’ ಚಿತ್ರದ ಓಪನಿಂಗ್‌ಗೆ ಭಾರಿ ಹಿನ್ನಡೆ ತಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮೊದಲ ದಿನ ‘ಬಂದರ್’ ಸಿನಿಮಾ ದೇಶಾದ್ಯಂತ 1,365 ಶೋಗಳು ಪ್ರದರ್ಶನ ಕಂಡಿದ್ದು, ಕೇವಲ 12.58% ರಷ್ಟು ಒಟ್ಟಾರೆ ಆಕ್ಯುಪೆನ್ಸಿ ಪಡೆದುಕೊಂಡಿದೆ. ದೆಹಲಿ-ಎನ್‌ಸಿಆರ್ ಭಾಗದಲ್ಲಿ ಅತಿ ಹೆಚ್ಚು ಅಂದರೆ 253 ಶೋಗಳು ಇದ್ದರೂ ಅಲ್ಲಿ ಕೇವಲ 9% ಆಕ್ಯುಪೆನ್ಸಿ ಇತ್ತು. ಇನ್ನು ಅಹಮದಾಬಾದ್‌ನಲ್ಲಿ 106 ಶೋಗಳಿದ್ದರೂ ಕೇವಲ 6% ಪ್ರೇಕ್ಷಕರು ಮಾತ್ರ ಚಿತ್ರಮಂದಿರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅನುರಾಗ್ ಕಶ್ಯಪ್ ಅವಹೇಳನಕಾರಿ ಹೇಳಿಕೆ: ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

‘ಅನಿಮಲ್’ ಬಳಿಕ ಬಾಬಿ ಡಿಯೋಲ್ ಸ್ಟಾರ್​​ಡಂ ಬಲದಾಗಿದೆ. ಅವರು ‘ಬಂದರ್’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಆದರೂ ಕಲೆಕ್ಷನ್ ಹೆಚ್ಚಿಲ್ಲ. ಸದ್ಯ ಚಿತ್ರಮಂದಿರಗಳಲ್ಲಿ ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಮತ್ತು ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರಗಳು ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು, ಈ ದೊಡ್ಡ ಸಿನಿಮಾಗಳ ಪೈಪೋಟಿಯ ನಡುವೆ ‘ಬಂದರ್’ ಸಿಲುಕಿದೆ. ಕನ್ನಡದ ಖ್ಯಾತ ನಟ ರಾಜ್ ಬಿ ಶೆಟ್ಟಿ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Weekly Love Astrology: ಈ ರಾಶಿಯ ಪ್ರೇಮ ಸಂಬಂಧ ವಿವಾಹ ಹಂತಕ್ಕೆ ತಲುಪಲು ಈ ವಾರ ಸುಸಮಯ! – Kannada News

ವಾರದ ಪ್ರೇಮ – ಪ್ರೀತಿ ಭವಿಷ್ಯImage Credit source: Pinterest

ಜೂನ್ 07ರಿಂದ ಜೂನ್ 13ರವರೆಗೆ ಈ ತಿಂಗಳ ಎರಡನೇ ವಾರವಾಗಿದ್ದು, ಶುಕ್ರನು ಚಂದ್ರನ ರಾಶಿಯಲ್ಲಿಯೂ ಶನಿಯ ಆಧಿಪತ್ಯದ ನಕ್ಷತ್ರದಲ್ಲಿಯೂ ಇರುವನು. ಪ್ರೇಮ ಅಥವಾ ದಾಂಪತ್ಯದಲ್ಲಿ ಸುಮಧುರ ಕ್ಷಣಗಳನ್ನು ಕಳೆಯಬಹುದಾದರೂ ಭಯ ಆತಂಕಗಳು ನಿಮ್ಮೊಳಗೆ ಕಾಡುವುದು. ವನದುರ್ಗೆಯನ್ನು ಪ್ರಾರ್ಥಿಸಿ, ಭಯವನ್ನು ದೂರಮಾಡಿ.

​​ಮೇಷ ರಾಶಿ:

ನಿಮ್ಮ ರಾಶ್ಯಧಿಪತಿ ಮಂಗಲ ಸ್ವಕ್ಷೇತ್ರದಲ್ಲಿದ್ದಾನೆ. ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ಆಕರ್ಷಣೆ ಹೆಚ್ಚಾಗಲಿದೆ. ಸಂಗಾತಿಯೊಂದಿಗೆ ನೇರ ನಡೆ ಹಾಗೂ ಮಾತುಕತೆ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ಅವಿವಾಹಿತರಿಗೆ ಹೊಸ ಪ್ರೇಮ ಪ್ರಸ್ತಾಪಗಳು ಬರಬಹುದು. ಆದರೆ ಅತಿಯಾದ ಆತುರ ಅಥವಾ ಕೋಪದಿಂದ ಭಿನ್ನಾಭಿಪ್ರಾಯ ಬರದಂತೆ ಎಚ್ಚರ ವಹಿಸುವುದು ಉತ್ತಮ.

ವೃಷಭ ರಾಶಿ:

ನಿಮ್ಮ ರಾಶಿಯಲ್ಲಿ ಸೂರ್ಯ ಮತ್ತು ಚಂದ್ರರ ಯುತಿ ಇದೆ. ಪ್ರೇಮ ಸಂಬಂಧಗಳಲ್ಲಿ ಭಾವನಾತ್ಮಕ ಸ್ಥಿರತೆ ಮುಖ್ಯವಾಗುತ್ತದೆ. ಶುಕ್ರನ ಶುಭ ದೃಷ್ಟಿಯಿಂದಾಗಿ ಸಂಗಾತಿಯೊಂದಿಗೆ ಮಧುರ ಕ್ಷಣಗಳನ್ನು ಕಳೆಯುವಿರಿ. ಪ್ರೀತಿಪಾತ್ರರ ಮನಸ್ಸನ್ನು ಸುಲಭವಾಗಿ ಗೆಲ್ಲಬಹುದು. ಪರಸ್ಪರ ಗೌರವ ಹಾಗೂ ನಂಬಿಕೆ ಹೆಚ್ಚಾಗಲಿದ್ದು, ಪ್ರೇಮ ಸಂಬಂಧವು ಮುಂದಿನ ಹಂತಕ್ಕೆ (ವಿವಾಹ) ತಲುಪಲು ಸುಸಮಯ.

ಮಿಥುನ ರಾಶಿ:

ನಿಮ್ಮ ರಾಶಿಯಲ್ಲಿ ಬುಧನಿದ್ದಾನೆ. ಪ್ರೇಮ ಜೀವನದಲ್ಲಿ ಸಂವಹನವು ಪ್ರಮುಖ ಪಾತ್ರ ವಹಿಸಲಿದೆ. ನಿಮ್ಮ ಚತುರ ಮಾತುಗಳಿಂದ ಸಂಗಾತಿಯನ್ನು ಆಕರ್ಷಿಸುವಿರಿ. ಆದರೆ ಅತಿಯಾದ ಆಲೋಚನೆ ಗೊಂದಲ ಮೂಡಿಸಬಹುದು. ಪ್ರೀತಿಯಲ್ಲಿ ಪ್ರಾಮಾಣಿಕತೆ ಇರಲಿ. ಸಂಗಾತಿಯ ಸಣ್ಣಪುಟ್ಟ ತಪ್ಪುಗಳನ್ನು ನಿರ್ಲಕ್ಷಿಸಿ ಮುನ್ನಡೆದರೆ ಪ್ರೇಮ ಸಂಬಂಧವು ಅತ್ಯಂತ ಸುಂದರ ಹಾಗೂ ಸಾಮರಸ್ಯದಿಂದ ಕೂಡಿರಲಿದೆ.

​ಕರ್ಕಾಟಕ ರಾಶಿ:

ನಿಮ್ಮ ರಾಶಿಯಲ್ಲಿ ಶುಕ್ರ ಮತ್ತು ಗುರುಗಳ ಶುಭ ಯುತಿ ಇದೆ. ಪ್ರೇಮ ಜೀವನಕ್ಕೆ ಇದು ಅತ್ಯಂತ ಅದ್ಭುತವಾದ ಸಮಯ. ಸಂಗಾತಿಯ ಕಡೆಯಿಂದ ಅಪಾರ ಪ್ರೀತಿ, ಕಾಳಜಿ ಹಾಗೂ ಬೆಂಬಲ ಸಿಗಲಿದೆ. ಹಳೆಯ ಪ್ರೇಮ ವೈಮನಸ್ಯಗಳು ದೂರಾಗಲಿವೆ. ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವ ಸೂಕ್ತ ಪ್ರೇಮ ಸಂಗಾತಿಯು ಸಿಗುವ ಅತ್ಯಂತ ಬಲವಾದ ಯೋಗ ಹಾಗೂ ಸಾಧ್ಯತೆಗಳು ಈ ಅವಧಿಯಲ್ಲಿವೆ.

​ಸಿಂಹ ರಾಶಿ:

ನಿಮ್ಮ ರಾಶಿಯಲ್ಲಿ ಕೇತು ಇದ್ದು, ಪ್ರೇಮ ಕಾರಕ ಶುಕ್ರ ವ್ಯಯದಲ್ಲಿದ್ದಾನೆ. ಪ್ರೇಮ ಜೀವನದಲ್ಲಿ ಸಣ್ಣಪುಟ್ಟ ತಪ್ಪು ತಿಳುವಳಿಕೆ ಅಥವಾ ನಿರಾಸಕ್ತಿ ಮೂಡಬಹುದು. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡುವುದು ಅತಿ ಮುಖ್ಯ. ಅಹಂಕಾರದ ಮಾತುಗಳನ್ನು ಬಿಟ್ಟು ತಾಳ್ಮೆಯಿಂದ ವರ್ತಿಸಿ. ಪ್ರೀತಿಯಲ್ಲಿ ಪಾರದರ್ಶಕತೆ ಕಾಯ್ದುಕೊಂಡರೆ ಮಾತ್ರ ಸಂಬಂಧವು ಯಾವುದೇ ಬಿರುಕಿಲ್ಲದೆ ಗಟ್ಟಿಯಾಗಿ ಮುಂದುವರಿಯಲು ಸಾಧ್ಯವಾಗುತ್ತದೆ.

​ಕನ್ಯಾ ರಾಶಿ:

ಪ್ರೇಮ ಜೀವನದಲ್ಲಿ ಲಾಭದಾಯಕ ಸನ್ನಿವೇಶಗಳಿವೆ. ಮಿತ್ರರ ಸಹಾಯದಿಂದ ಪ್ರೇಮ ಸಂಬಂಧಗಳು ಸುಧಾರಿಸಲಿವೆ. ಸಂಗಾತಿಯೊಂದಿಗೆ ದೂರದ ಪ್ರಯಾಣ ಅಥವಾ ಸುಂದರ ಒಡನಾಟದ ಯೋಗವಿದೆ. ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಹಿಂಜರಿಯಬೇಡಿ. ಪರಸ್ಪರ ನಂಬಿಕೆ ಹೆಚ್ಚಾಗಲಿದ್ದು, ಸಂಗಾತಿಯು ನಿಮ್ಮ ಪ್ರತಿಯೊಂದು ನಿರ್ಧಾರಕ್ಕೂ ಹೆಗಲಿಗೆ ಹೆಗಲು ಕೊಟ್ಟು ಪ್ರೋತ್ಸಾಹದಾಯಕವಾಗಿ ಜೊತೆಗಿರಲಿದ್ದಾರೆ.

​ತುಲಾ ರಾಶಿ:

ನಿಮ್ಮ ರಾಶ್ಯಾಧಿಪತಿ ಶುಕ್ರನು ಹತ್ತನೇ ಮನೆಯಲ್ಲಿದ್ದಾನೆ. ವೃತ್ತಿಜೀವನದ ಬಿಡುವಿಲ್ಲದ ಕೆಲಸಗಳ ನಡುವೆಯೂ ಪ್ರೇಮ ಜೀವನಕ್ಕೆ ಸಮಯವನ್ನು ಹೊಂದಿಸಬೇಕಾಗುತ್ತದೆ. ಸಂಗಾತಿಯು ನಿಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲಿದ್ದಾರೆ. ಪ್ರೀತಿಯಲ್ಲಿ ಸ್ಥಿರತೆ ಇರಲಿದೆ. ಕಚೇರಿ ಅಥವಾ ಕೆಲಸದ ಜಾಗದಲ್ಲಿ ಹೊಸ ಪ್ರೇಮದ ಚಿಗುರು ಮೂಡುವ ಸಾಧ್ಯತೆಯಿದೆ. ಪರಸ್ಪರ ಗೌರವದಿಂದ ಬಾಂಧವ್ಯ ಸುಂದರವಾಗಿರುತ್ತದೆ.

​ವೃಶ್ಚಿಕ ರಾಶಿ:

ಪ್ರೇಮ ಜೀವನದಲ್ಲಿ ಅದೃಷ್ಟದ ಒಲವು ಕಂಡುಬರಲಿದೆ. ಶುಕ್ರ ಮತ್ತು ಗುರುಗಳ ಶುಭ ಪ್ರಭಾವದಿಂದ ಪ್ರೇಮ ಸಂಬಂಧಗಳು ವಿವಾಹವಾಗಿ ಬದಲಾಗುವ ಸುವರ್ಣ ಅವಕಾಶವಿದೆ. ಸಂಗಾತಿಯೊಂದಿಗೆ ಧಾರ್ಮಿಕ ಅಥವಾ ಸುಂದರ ಪ್ರವಾಸಿ ತಾಣಗಳಿಗೆ ಭೇಟಿ ನೀಡುವಿರಿ. ಪರಸ್ಪರರ ಮೇಲಿನ ಪ್ರೀತಿ ಹಾಗೂ ಆಕರ್ಷಣೆ ಇಮ್ಮಡಿಯಾಗಲಿದ್ದು, ಒಟ್ಟಾರೆ ಪ್ರೇಮ ಜೀವನವು ಅತ್ಯಂತ ತೃಪ್ತಿದಾಯಕವಾಗಿರಲಿದೆ.

ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವಧು-ವರರ ಫೋಟೋ ಹಾಕಬಾರದು ಯಾಕೆ?

ಧನು ರಾಶಿ:

ನಿಮ್ಮ ಲಗ್ನದಲ್ಲೇ ಗುರು ವೀಕ್ಷಣೆ ಇದ್ದರೂ, ಶುಕ್ರ ಎಂಟನೇ ಮನೆಯಲ್ಲಿರುವುದರಿಂದ ಪ್ರೇಮ ಜೀವನದಲ್ಲಿ ಮಿಶ್ರ ಫಲಿತಾಂಶವಿರಲಿದೆ. ಸಂಗಾತಿಯೊಂದಿಗೆ ಅನಗತ್ಯ ವಾದವಿವಾದಗಳು ಅಥವಾ ರಹಸ್ಯಗಳು ಉಂಟಾಗದಂತೆ ಎಚ್ಚರ ವಹಿಸಿ. ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ. ತಾಳ್ಮೆ ಮತ್ತು ಪರಸ್ಪರ ಸಹನೆ ಇದ್ದರೆ ಮಾತ್ರ ಈ ಅವಧಿಯಲ್ಲಿ ಪ್ರೇಮ ಸಂಬಂಧವನ್ನು ಯಶಸ್ವಿಯಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ.

​ಮಕರ ರಾಶಿ:

ಸಪ್ತಮ ಭಾವದಲ್ಲಿ ಶುಕ್ರ ಮತ್ತು ಗುರುಗಳ ಬಲವಿರುವುದರಿಂದ ಪ್ರೇಮ ಜೀವನವು ರೋಮಾಂಚನಕಾರಿಯಾಗಿರಲಿದೆ. ಸಂಗಾತಿಯೊಂದಿಗೆ ಹತ್ತಿರವಾಗಲು ಅತ್ಯುತ್ತಮ ಅವಕಾಶಗಳು ಸಿಗಲಿವೆ. ನಿಮ್ಮಿಬ್ಬರ ನಡುವಿನ ಸಾಮರಸ್ಯ ಎಲ್ಲರ ಗಮನ ಸೆಳೆಯುತ್ತದೆ. ಅವಿವಾಹಿತರಿಗೆ ಪ್ರೇಮ ವಿವಾಹದ ಯೋಗಗಳು ಬಲವಾಗಿವೆ. ಸಂಗಾತಿಯ ಪೂರ್ಣ ಪ್ರೀತಿ ಮತ್ತು ಬೆಂಬಲವು ನಿಮ್ಮ ಜೀವನದ ಉತ್ಸಾಹವನ್ನು ದುಪ್ಪಟ್ಟು ಮಾಡಲಿದೆ.

ಕುಂಭ ರಾಶಿ:

ನಿಮ್ಮ ರಾಶಿಯಲ್ಲಿ ರಾಹು ಇರುವುದರಿಂದ ಪ್ರೇಮ ಜೀವನದಲ್ಲಿ ಭ್ರಮೆ ಅಥವಾ ಅತಿಯಾದ ನಿರೀಕ್ಷೆಗಳು ಬೇಡ. ಶುಕ್ರನ ಸ್ಥಿತಿಯು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ತರಬಹುದು. ಸಂಗಾತಿಯ ಆರೋಗ್ಯದ ಕಡೆ ಗಮನವಿರಲಿ. ಪ್ರೀತಿಯಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬೇಡಿ. ಪರಸ್ಪರ ನಂಬಿಕೆಯನ್ನು ಗಟ್ಟಿಗೊಳಿಸಿಕೊಂಡರೆ ಪ್ರೇಮ ಸಂಬಂಧದಲ್ಲಿ ಯಾವುದೇ ದೊಡ್ಡ ತೊಂದರೆಗಳು ಎದುರಾಗುವುದಿಲ್ಲ.

​ಮೀನ ರಾಶಿ:

ನಿಮ್ಮ ರಾಶಿಯಲ್ಲಿ ಶನಿ ಇದ್ದರೂ, ಪಂಚಮ ಭಾವದಲ್ಲಿ ಶುಕ್ರ-ಗುರುಗಳ ಯುತಿ ಇರುವುದರಿಂದ ಪ್ರೇಮ ಜೀವನದಲ್ಲಿ ಅಪಾರ ಸುಖ-ಸಂತೋಷವಿರಲಿದೆ. ಪ್ರೀತಿಪಾತ್ರರೊಂದಿಗೆ ಭಾವನಾತ್ಮಕ ಒಡನಾಟ ಹೆಚ್ಚಾಗಲಿದೆ. ಹಳೆಯ ಪ್ರೇಮ ಸಂಬಂಧಗಳು ಪುನಃ ಚಿಗುರೊಡೆಯಬಹುದು. ನಿಮ್ಮ ಪ್ರೀತಿಯ ಪ್ರಸ್ತಾವನೆಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಗಲಿದೆ. ಒಟ್ಟಾರೆ ಪ್ರೇಮ ಬಂಧವು ಅತ್ಯಂತ ಮಧುರ ಹಾಗೂ ಗಟ್ಟಿಯಾಗಲಿದೆ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಾಳ್ಮೆ ಕಳೆದುಕೊಂಡಿಲ್ಲ, ಮಾತು ತಪ್ಪಿದ್ದಕ್ಕೆ ಬೇಸರವಷ್ಟೇ: ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ – Kannada News

ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಇಂದು (ಜೂನ್ 6) ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ನಾನು ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾಯಕರ ಮುಂದೆ ಇಟ್ಟಿದ್ದೇನೆ’ ಎಂದು ಅವರು ತಿಳಿಸಿದರು.

ಇದೇ ವೇಳೆ ತಮಗೆ ನೀಡಿರುವ ಖಾತೆ ಬಗ್ಗೆ ಮಾತನಾಡಿದ ಅವರು, ‘ನನಗೆ ನೀರಾವರಿ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ನಾನು ಯಾವತ್ತೂ ಜಲಸಂಪನ್ಮೂಲ ಖಾತೆಯನ್ನು ಕೇಳಿರಲಿಲ್ಲ. ಸಚಿವ ಸ್ಥಾನ ಅಥವಾ ಇಂತಹದ್ದೇ ಖಾತೆ ಬೇಕು ಎಂದು ನಾನು ಎಂದೂ ಹಠ ಹಿಡಿದವನಲ್ಲ. ಆದರೆ 2023ರಲ್ಲಿ ಮನೆಗೆ ಬಂದು ಮಾತು ಕೊಟ್ಟಂತೆ ನಾಯಕರು ನಡೆದುಕೊಳ್ಳಲಿಲ್ಲ ಎಂಬ ಬೇಸರವಷ್ಟೇ ನನಗಿದೆ. ಸುರ್ಜೇವಾಲ ಅವರು ಸಿಎಂ ಜೊತೆ ಚರ್ಚೆ ನಡೆಸುತ್ತಿದ್ದಾರೆ, ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ. ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ ಮತ್ತು ತಾಳ್ಮೆಯನ್ನೂ ಕಳೆದುಕೊಂಡಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್! – Kannada News

ಮುಲ್ಲನ್‌ಪುರ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ದಿನದಾಟದಲ್ಲೇ ಸ್ವಾರಸ್ಯಕರ ಘಟನೆ ನಡೆದಿದೆ. ಅದು ಕೂಡ ಕೆಎಲ್ ರಾಹುಲ್ ಅವರ ನಾಟಕದೊಂದಿಗೆ..! ಹೌದು, ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಿದ್ದರು.

ಈ ಪಂದ್ಯದ 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾವುರ್ ರೆಹಮಾನ್ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಯತ್ನಿಸಿದರು. ಈ ವೇಳೆ ಚೆಂಡು ಬ್ಯಾಟ್‌ಗೆ ತಗುಲಿ ವಿಕೆಟ್ ಕೀಪರ್ ಕೈ ಸೇರಿತು, ಬ್ಯಾಟ್‌ಗೆ ಚೆಂಡು ಸವರಿದ ಸ್ಪಷ್ಟ ಶಬ್ದವೂ ಕೇಳಿಸಿತು. ಹೀಗಾಗಿ ಅಫ್ಘಾನ್ ಆಟಗಾರರು ಔಟ್​ಗಾಗಿ ಅಪೀಲ್ ಮಾಡಿದ್ದರು. ಇದಾಗ್ಯೂ ಫೀಲ್ಡ್ ಅಂಪೈರ್ ಔಟ್ ನೀಡಿರಲಿಲ್ಲ.

ಇದರ ಬೆನ್ನಲ್ಲೇ DRS ರಿವ್ಯೂ ತೆಗೆದುಕೊಳ್ಳುವ ಯೋಚನೆಯಲ್ಲಿದ್ದ ಅಫ್ಘಾನ್ ನಾಯಕ ಹಶ್ಮತುಲ್ಲಾ ಶಾಹಿದಿ ಹಾಗೂ ಕೀಪರ್ ಅಫ್ಸರ್ ಜಜಾಯ್ ಅವರು  ರಾಹುಲ್ ಮುಖ ನೋಡಿದರು. ರಾಹುಲ್ ಅತ್ಯಂತ ಶಾಂತವಾಗಿ, ತಮಗೇನೂ ತಿಳಿಯದಂತೆ ತಲೆ ಅಲ್ಲಾಡಿಸಿ ‘ಬ್ಯಾಟ್‌ಗೆ ಚೆಂಡು ತಗುಲೇ ಇಲ್ಲ’ ಎಂಬಂತೆ ನಟಿಸಿದರು.

ಅಷ್ಟೇ ಅಲ್ಲದೆ ಬ್ಯಾಟ್ ಹ್ಯಾಂಡಲ್​ ಲೂಸ್ ಆಗಿರುವುದರಿಂದ ಶಬ್ದ ಬಂದಿರುವಂತೆ ನಾಟಕವಾಡಿದ ಕೆಎಲ್ ರಾಹುಲ್ ಎಲ್ಲರನ್ನೂ ನಂಬಿಸಿದರು. ಇತ್ತ ಕೆಎಲ್ ರಾಹುಲ್ ಅವರನ್ನು ನಂಬಿಸಿದ ಅಫ್ಘಾನ್ ನಾಯಕ ಡಿಆರ್​ಎಸ್ ರಿವ್ಯೂ ತೆಗೆದುಕೊಳ್ಳಲಿಲ್ಲ.

ಆದರೆ, ಕೆಲವೇ ನಿಮಿಷಗಳಲ್ಲಿ ಬಿಗ್ ಸ್ಕ್ರೀನ್ ಮೇಲೆ  ಅಲ್ಟ್ರಾಎಡ್ಜ್ ತೋರಿಸಿದಾಗ ಬ್ಯಾಟ್‌ಗೆ ಚೆಂಡು ತಗುಲಿರುವುದು ಜಗಜ್ಜಾಹೀರಾಯಿತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಾಹುಲ್ ಅವರ ನಾಟಕ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯು್ತ್ತಿದೆ.

 

Source link

Karnataka CET 2026 Toppers: ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳದ್ದೇ ಮೇಲುಗೈ! – Kannada News

ಕೆಸಿಇಟಿ ಫಲಿತಾಂಶ ಟಾಪರ್‌ಗಳ ಪಟ್ಟಿ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫಲಿತಾಂಶದ ಜೊತೆಯಲ್ಲೇ ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ತನಿಷಾ ಕಾರ್ತಿಕ್ ಸಾಧನೆ:

ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಬೀಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್​.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದಂತೆ ಇದೇ ವಿಭಾಗದಲ್ಲಿ ಸೃಜನ್​ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ವಿಶಿಷ್ಟ ಅವರು ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೆಟರ್ನರಿ ವಿಭಾಗದಲ್ಲಿ ನಯನ ಗೋಪಿಗೆ ಮೊದಲ ರ‍್ಯಾಂಕ್:

ಪಶುಸಂಗೋಪನೆ ಅಂದರೆ ವೆಟರ್ನರಿ ವಿಭಾಗದಲ್ಲೂ ಬೆಂಗಳೂರಿನ ವಿದ್ಯಾರ್ಥಿನಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಬೆಂಗಳೂರಿನ ಶಿವನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ ನಯನ ಗೋಪಿ ಅವರು ವೆಟರ್ನರಿ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ದಾವಣಗೆರೆಯ ಸರ್​​ ಎಂ.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಪಡೆದುಕೊಂಡರೆ, ಆರ್​.ವಿ ಪಿಯು ಕಾಲೇಜಿನ ರಿತಿಕ್ ಕುಮಾರ್ ಅವರು ತೃತೀಯ ರ‍್ಯಾಂಕ್ ಪಡೆದಿದ್ದಾರೆ.

ಇದನ್ನೂ ಓದಿ: ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ..

ರ‍್ಯಾಂಕ್ ಪಟ್ಟಿಯಲ್ಲಿ ಆರ್.ವಿ. ಪಿಯು ಕಾಲೇಜಿನ ದರ್ಬಾರ್:

ಈ ಬಾರಿಯ ಕೆಸಿಇಟಿ ಟಾಪರ್ಸ್ ಲಿಸ್ಟ್‌ನಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಆರ್.ವಿ. ಪಿಯು ಕಾಲೇಜು (RV PU College) ಸಿಂಹಪಾಲು ರ‍್ಯಾಂಕ್‌ಗಳನ್ನು ಬಾಚಿಕೊಳ್ಳುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಇಂಜಿನಿಯರಿಂಗ್ ವಿಭಾಗದ ರಾಜ್ಯದ ಟಾಪರ್ ತನಿಷಾ ಕಾರ್ತಿಕ್ ಹಾಗೂ ವೆಟರ್ನರಿ ವಿಭಾಗದಲ್ಲಿ ಮೂರನೇ ರ‍್ಯಾಂಕ್ ಪಡೆದಿರುವ ರಿತಿಕ್ ಕುಮಾರ್ ಇಬ್ಬರೂ ಒಂದೇ ಕಾಲೇಜಿನವರಾಗಿದ್ದಾರೆ. ಇದರೊಂದಿಗೆ ದಾವಣಗೆರೆಯ ಸರ್ ಎಂ.ವಿ. ಪಿಯು ಕಾಲೇಜು ಕೂಡ ವೆಟರ್ನರಿ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ:

ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ cetonline.karnataka.gov.in/kea/ ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಸ್ಕೋರ್‌ಕಾರ್ಡ್ ಅನ್ನು ಆನ್‌ಲೈನ್ ಮೂಲಕ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version