Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್ ಬಳಕೆ – Kannada News | NEET UG 2026: Re Examination Details, Security Measures, and Student Concerns
ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…