ಪೊಲೀಸ್ ಠಾಣೆಗೆ ಸೋನಿಯಾ ಗಾಂಧಿ ಭೇಟಿ; ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಡುಗಡೆ – Kannada News | Rahul Gandhi and Priyanka Gandhi released after Sonia Gandhi visited Police station

ನವದೆಹಲಿ, ಜುಲೈ 21: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿವಾಸದ ಬಳಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ದೆಹಲಿ ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದಾರೆ. ಇಂದು ಸಂಜೆ ತಮ್ಮ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಬಂಧನವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಖುದ್ದಾಗಿ ಮಂದಿರ ಮಾರ್ಗ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಅದರ ಬೆನ್ನಲ್ಲೇ ಎಲ್ಲ ಕಾಂಗ್ರೆಸ್ ನಾಯಕರನ್ನೂ ಪೊಲೀಸ್ ಠಾಣೆಯಿಂದ ಬಿಡುಗಡೆ ಮಾಡಲಾಗಿದೆ.

ನೀಟ್-ಯುಜಿ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಯನ್ನು ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಇಂದು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಇದನ್ನೂ ಓದಿ: ಪ್ರಧಾನಿ ನಿವಾಸದ ಬಳಿ ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ 

ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನ ಮೋದಿಯವರ ಅಧಿಕೃತ ನಿವಾಸದತ್ತ ಮೆರವಣಿಗೆ ನಡೆಸಿ, ಅಲ್ಲೇ ರಸ್ತೆಯಲ್ಲಿ ಕುಳಿತು ಧರಣಿ ನಡೆಸುತ್ತಿದ್ದಾಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ವಿರೋಧ ಪಕ್ಷದ ನಾಯಕರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಲು ಯತ್ನಿಸಿದ ಪೊಲೀಸರು, ರಾಹುಲ್ ಗಾಂಧಿ ಅವರನ್ನು ಬಲವಂತವಾಗಿ ಎತ್ತಿಕೊಂಡು ಬಸ್‌ಗೆ ಕರೆದೊಯ್ಯುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ವೇಳೆ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು.

ಛತ್ರಸಾಲ್ ಸ್ಟೇಡಿಯಂನಿಂದ ರಾಹುಲ್ ಬಿಡುಗಡೆ:

ಬಂಧನದ ನಂತರದ ಬೆಳವಣಿಗೆಯಲ್ಲಿ, ರಾಹುಲ್ ಗಾಂಧಿ ಅವರನ್ನು ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದಾರೆ. ರಾಹುಲ್ ಗಾಂಧಿಯನ್ನು ಛತ್ರಸಾಲ್ ಸ್ಟೇಡಿಯಂನಲ್ಲಿ ಬಂಧಿಸಿಡಲಾಗಿತ್ತು. ಪ್ರಿಯಾಂಕಾ ಗಾಂಧಿಯನ್ನು ಮಂದಿರ ಮಾರ್ಗ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಸ್ಟಡಿಯಲ್ಲಿದ್ದ ರಾಹುಲ್ ಗಾಂಧಿ ಅವರನ್ನು ಪೊಲೀಸರು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ

ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ:

ದೆಹಲಿಯ ಮಂದಿರ ಮಾರ್ಗ ಪೊಲೀಸ್ ಠಾಣೆಯಲ್ಲಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರನ್ನು ಕಸ್ಟಡಿಯಿಂದ ಮುಕ್ತಗೊಳಿಸಲಾಯಿತು. ಬಂಧನದಿಂದ ಬಿಡುಗಡೆಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, “ವಿರೋಧ ಪಕ್ಷದ ನಾಯಕನಾದರೂ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್​​ನಲ್ಲಿ ಮಾತನಾಡಲು ಅವಕಾಶ ನೀಡುವುದಿಲ್ಲ. ನಾವು ಪ್ರತಿಭಟನೆ ನಡೆಸಲು ಅನುಮತಿ ಕೇಳಿದರೂ ಕೊಡುವುದಿಲ್ಲ. ಹೀಗಾಗಿ, ಅವರು ಎಲ್ಲಿ ನಮ್ಮನ್ನು ನಿರೀಕ್ಷೆ ಮಾಡಿರಲಿಲ್ಲವೋ ಅಲ್ಲೇ ಹೋಗಿ ಧರಣಿ ನಡೆಸಿದೆವು” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ? – Kannada News | Thalapathy Vijay Jana Nayagan title Card changes TVK References Tamil Nadu CM

ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ಕೊನೆಯ ಚಿತ್ರ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸುಮಾರು ಏಳು ತಿಂಗಳ ಸುದೀರ್ಘ ವಿಳಂಬದ ನಂತರ ಜುಲೈ 23ರಂದು ಅದ್ದೂರಿಯಾಗಿ ತೆರೆಕಾಣುತ್ತಿರುವ ಈ ಚಿತ್ರದಲ್ಲಿ ವಿಜಯ್ (Thalapathy Vijay) ಅವರ ರಾಜಕೀಯ ಯಶಸ್ಸು ಹಾಗೂ ಪ್ರಸ್ತುತ ಸಿಎಂ ಹುದ್ದೆಗೆ ತಕ್ಕಂತೆ ಹಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಚಿತ್ರದ ಬಿಡುಗಡೆಗೆ ಸಿಬಿಎಫ್‌ಸಿ ಹಸಿರು ನಿಶಾನೆ ತೋರಿದ್ದು, ಈ 7 ತಿಂಗಳ ವಿಳಂಬದ ಅವಧಿಯಲ್ಲಿ ಚಿತ್ರಕ್ಕೆ ಹೊಸ ದೃಶ್ಯಗಳನ್ನು ಸೇರ್ಪಡೆಗೊಳಿಸಿ ಅಗತ್ಯ ಬದಲಾವಣೆ ಮಾಡಲಾಗಿದೆ.

ಎಚ್. ವಿನೋದ್ ನಿರ್ದೇಶನದ ಈ ರಾಜಕೀಯ ಕಥಾಹಂದರದ ಆ್ಯಕ್ಷನ್ ಸಿನಿಮಾ ಆರಂಭದಲ್ಲಿ ಜನವರಿಯಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಗದ ಕಾರಣ ಚಿತ್ರ ಮುಂದೂಡಲ್ಪಟ್ಟಿತ್ತು. ಈ ಮಧ್ಯೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಭರ್ಜರಿ ಜಯಗಳಿಸಿ, ವಿಜಯ್ ಅವರು ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಕಳೆದ ಒಂದು ದಶಕದಿಂದ ವಿಜಯ್ ಸಿನಿಮಾಗಳಲ್ಲಿ ‘ದಳಪತಿ ವಿಜಯ್’ ಎಂದು ಟೈಟಲ್ ಕಾರ್ಡ್‌ ಹಾಕಲಾಗುತ್ತಿತ್ತು. ಆದರೆ ಈ ಬಾರಿ ಟೈಟಲ್ ಕಾರ್ಡ್‌ನಲ್ಲಿ ‘ಮಾನ್ಯ ತಮಿಳುನಾಡು ಮುಖ್ಯಮಂತ್ರಿ’ ಎಂದು ಸೇರಿಸಲಾಗಿದೆ. ಪಿಟಿಐ ವರದಿಯ ಪ್ರಕಾರ, ವಿಜಯ್ ಅವರು ಸಿಗ್ನೇಚರ್ ಶೈಲಿಯಲ್ಲಿ ಕೈಬೀಸುವ ದೃಶ್ಯವನ್ನು ಚಿತ್ರದ ‘ರಾವಣ ಮಾವಂದಾ’ ಗೀತೆಯಲ್ಲಿ ಸೇರಿಸಲಾಗಿದೆ. ವಿಜಯ್ ಅವರ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ಹಲವು ನೇರ ಉಲ್ಲೇಖಗಳು ಹಾಗೂ ಸೂಚನೆಗಳನ್ನು ಸಿನಿಮಾದ ಅಂತಿಮ ಕಟ್‌ನಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು

ಸಿಬಿಎಫ್‌ಸಿ ಸೂಚನೆಯಂತೆ ಚಿತ್ರದ ಸುಮಾರು 20 ಸೆಕೆಂಡ್‌ಗಳ ದೃಶ್ಯಗಳನ್ನು ಕಟ್ ಮಾಡಲಾಗಿದ್ದು, 10 ಸೆಕೆಂಡ್‌ಗಳ ಬದಲೀ ದೃಶ್ಯಗಳನ್ನು ಸೇರಿಸಲಾಗಿದೆ. ಜೊತೆಗೆ ಧಾರ್ಮಿಕ ಉಲ್ಲೇಖಗಳಿರುವ ಶಬ್ದಗಳನ್ನು ಮ್ಯೂಟ್ ಮಾಡಲಾಗಿದೆ. ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ನರೇನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ, ಸತ್ಯನ್ ಸೂರ್ಯನ್ ಛಾಯಾಗ್ರಹಣ ಹಾಗೂ ಪ್ರದೀಪ್ ಇ. ರಾಘವ್ ಅವರ ಸಂಕಲನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಜೆಪಿ ನಾಯಕರು ಹೇಡಿಗಳು, ನಮಗೆ ಹೆದರುತ್ತಿದ್ದಾರೆ; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ – Kannada News | BJP Leaders are Cowards scared of us Priyanka Gandhi Vadra slams after Congress leaders detained during protest

ನವದೆಹಲಿ, ಜುಲೈ 21: ನೀಟ್-ಯುಜಿ (NEET-UG 2026) ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿಯವರನ್ನು (Rahul Gandhi) ಬಂಧಿಸಲಾಗಿತ್ತು. ತಮ್ಮನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ನಂತರ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವು ಭಯದಿಂದ ಈ ರೀತಿ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹೊಣೆಗಾರಿಕೆ, ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರಾಜಾಜಿ ಮಾರ್ಗದಿಂದ ಲೋಕ್ ಕಲ್ಯಾಣ್ ಮಾರ್ಗದತ್ತ ಮೆರವಣಿಗೆ ನಡೆಸಿದರು. ಪೋಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಅವರು ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಟೀಕಿಸಿದರು.

“ಬಿಜೆಪಿ ನಾಯಕರು ಹೇಡಿಗಳು. ಅವರು ಭಯಪಟ್ಟಿದ್ದಾರೆ. ನಾವು ಅವರಿಗೆ ಹೆದರುವುದಿಲ್ಲ. ಅವರೇ ನಮಗೆ ಹೆದರುತ್ತಿದ್ದಾರೆ. ಈ ಹೋರಾಟದಿಂದ ನಾವು ಹಿಂದೆ ಸರಿಯುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಗುಡುಗಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್ – Kannada News | Actor Kishore as Pampa in Baraguru Ramachandrappa Mahakavi movie

ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರ ‘ಮಹಾಕವಿ’ ಸಿನಿಮಾದಲ್ಲಿ ಖ್ಯಾತ ನಟ ಕಿಶೋರ್ (Kishore) ಅವರು ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಶಮಿತಾ ಮಲ್ನಾಡ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಬರಗೂರು ರಾಮಚಂದ್ರಪ್ಪ ಅವರ 25ನೇ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಕಿಶೋರ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಸಾಹಿತ್ಯದ ವಿದ್ಯಾರ್ಥಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಕ್ಕೆ ನನಗೆ ಬಹಳ ಖುಷಿ ಮತ್ತು ಹೆಮ್ಮೆ ಇದೆ. ಈ ರೀತಿಯ ಅವಕಾಶ ಸಿಗುವುದು ವಿರಳ. ಬರಗೂರು ರಾಮಚಂದ್ರಪ್ಪ ಅವರು ಪಂಪನ ಕುರಿತು ಸಿನಿಮಾ ಮಾಡುತ್ತಾರೆ ಎಂದಾಗ ಅದಕ್ಕೆ ನಿಖರತೆ ಸಿಗುತ್ತದೆ. ಇದು ಪಂಪನ ಜೀವನ ಕಥನ ಅಲ್ಲ. ಅವನ ಆಲೋಚನೆಗಳು, ಕಾವ್ಯ, ಚಿಂತನೆಗಳನ್ನು ಇಟ್ಟುಕೊಂಡು ಮಾಡಿದ ಸಿನಿಮಾ. ಇಂದಿಗೂ ಕೂಡ ಪಂಪ ಹೇಗೆ ಪ್ರಸ್ತುತ ಎಂಬುದು ಈ ಸಿನಿಮಾ ಮೂಲಕ ಗೊತ್ತಾಗುತ್ತದೆ’ ಎಂದು ಕಿಶೋರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಜಿ.ಪಂ ನರೇಗಾ ಇಂಜಿನಿಯರ್ – Kannada News | NREGA Bribe Scandal: Kolar Zilla Panchayat Engineer Caught by Lokayukta Police

ಕೋಲಾರ ಜು. 21: ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೋಲಾರ ಜಿಲ್ಲಾ ಪಂಚಾಯತ್‌ನ ನರೇಗಾ ವಿಭಾಗದ ಜೂನಿಯರ್ ಇಂಜಿನಿಯರ್ ಹಾಗೂ ಆತನ ಸಹಾಯಕ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯತ್ ನರೇಗಾ ಕಾಮಗಾರಿಯ ತಾಂತ್ರಿಕ ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಡಿಯನೂರು ಗ್ರಾಮದ ಗುತ್ತಿಗೆದಾರ ಕೃಷ್ಣಮೂರ್ತಿ ಅವರು ನರೇಗಾ ಯೋಜನೆಯಡಿ ನೆರವೇರಿಸಿದ್ದ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಇಂಜಿನಿಯರ್ ಕೃಷ್ಣಮೂರ್ತಿ ಹಾಗೂ ಸಹಾಯಕ ಹುಸೇನ್ ಅಲಿ ಬರೋಬ್ಬರಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಲಂಚ ನೀಡಲು ಇಷ್ಟವಿಲ್ಲದ ಗುತ್ತಿಗೆದಾರ ಕೃಷ್ಣಮೂರ್ತಿಯವರು ಈ ಕುರಿತು ಕೋಲಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆದಾರನಿಂದ ಮುಂಗಡವಾಗಿ 2 ಲಕ್ಷ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ, ಇಬ್ಬರನ್ನೂ ಹಣದ ಸಮೇತ ರೆಡ್ ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬಡವರ ಹೊಟ್ಟೆಗೆ ಕನ್ನ ಹಾಕಿದ ಮಾಜಿ ಜಿ.ಪಂ ಸದಸ್ಯನ ಮಗ: ಯಾದಗಿರಿಯಲ್ಲಿ ಬಟಾ ಬಯಲಾಯ್ತು ಅಕ್ರಮ ಅಕ್ಕಿ ದಂಧೆ

ಲೋಕಾಯುಕ್ತ ಇನ್ಸ್‌ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ನಡೆಸಲಾದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಭ್ರಷ್ಟ ಅಧಿಕಾರಿ ಕೃಷ್ಣಮೂರ್ತಿ ಹಾಗೂ ಅವರ ಸಹಾಯಕ ಹುಸೇನ್ ಅಲಿ ಅವರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧವೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಉಪವಾಸ ಸತ್ಯಾಗ್ರಹ ನಿರತ ಸೋನಮ್ ವಾಂಗ್ಚುಕ್ ಮೇದಾಂತ ಆಸ್ಪತ್ರೆಗೆ ಶಿಫ್ಟ್ – Kannada News | Sonam Wangchuk shifted to Gurugram Medanta Hospital after Delhi High Court order

ನವದೆಹಲಿ, ಜುಲೈ 21: ದೆಹಲಿ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ, ಕಳೆದ 24 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರನ್ನು ಇಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣವೇ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿತ್ತು.

ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠವು, ಸೋನಮ್ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವುದರಿಂದ ಅವರ ಮೂಲಭೂತ ಹಕ್ಕುಗಳನ್ನು ರಕ್ಷಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಚಿಕಿತ್ಸೆಯ ಸಮಯದಲ್ಲಿ ಅವರ ಆರೋಗ್ಯವನ್ನು ಹತ್ತಿರದಿಂದ ಮೇಲ್ವಿಚಾರಣೆ ಮಾಡಲು ಅರ್ಹ ವೈದ್ಯರ ತಂಡವನ್ನು ರಚಿಸಲು ಸೂಚಿಸಿದೆ.

ಇದನ್ನೂ ಓದಿ: ಸೋನಮ್ ವಾಂಗ್ಚುಕ್ 3 ವಾರಗಳ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಷರತ್ತು ವಿಧಿಸಿದ ಪತ್ನಿ

ವಿಚಾರಣೆಯ ವೇಳೆ, ಸೋನಮ್ ವಾಂಗ್ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ತನಗೆ ಯಾವುದೇ ಅಭ್ಯಂತರವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿತು. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿದ್ದ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವೇಳೆ ಆರೋಗ್ಯ ಕ್ಷೀಣಿಸಿದ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೈಕೋರ್ಟ್ ಆದೇಶದ ನಂತರ, ಅವರ ಚಿಕಿತ್ಸೆಯು ಇನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಮುಂದುವರಿಯಲಿದೆ.

ಇದನ್ನೂ ಓದಿ: ದೆಹಲಿ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ; ಉಪವಾಸ ಸತ್ಯಾಗ್ರಹ ಮುಂದುವರಿಸಲು ಸೋನಮ್ ವಾಂಗ್ಚುಕ್ ನಿರ್ಧಾರ

ಇಂದು ಸೋನಮ್ ವಾಂಗ್ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವು 24ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸುವವರೆಗೆ ತಾವು ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ಸುದೀರ್ಘ ಉಪವಾಸದ ಹೊರತಾಗಿಯೂ, ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

87 ಕೇಸ್ ಭೇದಿಸಿದ ದಾವಣಗೆರೆ ಪೊಲೀಸರು: ಚಿನ್ನ, ಬೆಳ್ಳಿ ಸೇರಿ 3.91 ಕೋಟಿ ರೂ. ಸ್ವತ್ತು ವಾರಸುದಾರರಿಗೆ ಹಸ್ತಾಂತರ – Kannada News | Davangere police cracks 87 cases And assets worth rs 3 crore handed over to owners

ದಾವಣಗೆರೆ, (ಜುಲೈ 21): ದಾವಣಗೆರೆ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 87 ಪ್ರಕರಣಗಳನ್ನು ಭೇದಿಸಿದ್ದು, ಒಂದೂವರೆ ಕೆ.ಜಿ ಚಿನ್ನಾಭರಣ, ಹದಿನೆಂಟು ಕೆ.ಜಿ ಬೆಳ್ಳಿ, ಕಾರು, ಮೊಬೈಲ್‌ ಸೇರಿದಂತೆ ಒಟ್ಟು 3.91 ಕೋಟಿ ರೂಪಾಯಿ ವಸ್ತುಗಳನ್ನ ವಶಕ್ಕೆ ಪಡೆದುಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.‌ ಒಂದು ಅಂದರೆ 2025 ಡಿಸೆಂಬರ್ 20ರಿಂದ 2026 ಜುಲೈ 20ರ ತನಕ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವರದಿಯಾಗಿದ್ದ 87 ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

3.91 ಕೋಟಿ ರೂ ಮೌಲ್ಯದ ವಸ್ತುಗಳನ್ನು ಜಪ್ತಿ

ಇನ್ನು 3.91 ಕೋಟಿ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದು,  ಆ 1.66 ಕೆಜಿ ಚಿನ್ನ, 56.55 ಲಕ್ಷ ಮೌಲ್ಯದ ಮೊಬೈಲ್​ಗಳು, 18.56 ಕೆಜಿ ಬೆಳ್ಳಿ, 4 ಲಕ್ಷ ಮೌಲ್ಯದ ಕೃಷಿ ಸಾಮಗ್ರಿಗಳು 22.94 ಲಕ್ಷ ರೂ. ಮೌಲ್ಯದ 31 ವಾಹನಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 26.6 ಕೋಟಿ ಡ್ರಗ್ಸ್, ನಕಲಿ ನೋಟು ಪ್ರಿಂಟಿಂಗ್ ಜಾಲ ಭೇದಿಸಿದ ಪೊಲೀಸರು

2 ಸಾವಿರ ಹೆಲ್ಮೆಟ್, 85 ಸೈಲೆನ್ಸರ್, ಹಾರ್ನ್ಸ್, ಸ್ಪೀಕರ್ ಡಕ್ ನಾಶ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳಿಗೆ ಅಳವಡಿಸಿದ್ದ ಕಳಪೆ ಗುಣಮಟ್ಟದ ಸುಮಾರು 2,000ಕ್ಕೂ ಹೆಚ್ಚು ಆಫ್ ಹೆಲ್ಮೆಟ್‌ಗಳು, ದ್ವಿಚಕ್ರ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ ಕರ್ಕಶ ಧ್ವನಿ ಮಾಡುವ 85ಕ್ಕೂ ಹೆಚ್ಚು ಡಿಫೆಕ್ಟಿವ್ ಸೈಲೆನ್ಸರ್​​ಗಳು, ಇತರೆ ವಾಹನಗಳಲ್ಲಿ ಆಳವಡಿಸಿಕೊಂಡಿದ್ದ 25 ಹಾರ್ನ್​​ಗಳನ್ನು ಮತ್ತು 10 ಸ್ಪೀಕರ್ ಡಕ್‌ಗಳನ್ನು ಬುಲ್ಡೋಜರ್ ಮೂಲಕ ಎಸ್ಪಿ ಶೇಖರ್ ಹೆಚ್.ಟಿ. ಅವರ ಸಮ್ಮುಖದಲ್ಲಿ ಪೊಲೀಸರು ನಾಶಪಡಿಸಿದರು.

ಎಸ್ಪಿ ಶ್ಲಾಘನೆ

ಇನ್ನು ಈ ಬಗ್ಗೆ ಎಸ್ಪಿ ಶೇಖರ್ ಹೆಚ್.ಟಿ. ಅವರು ಮಾತನಾಡಿ, “ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿದ್ದ ವಸ್ತುಗಳು ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಈ ಪ್ರಾಪರ್ಟಿ ಪರೇಡ್‌ನಲ್ಲಿ ಜಪ್ತಿ ಪಡಿಸಿಕೊಂಡಿದ್ದ ಒಟ್ಟು 87 ಪ್ರಕರಣಗಳಿಗೆ ಸಂಬಂಧಿಸಿದಂತೆ 22.94 ಲಕ್ಷ ಮೌಲ್ಯದ ವಿವಿಧ ಮಾದರಿಯ 31 ವಾಹನಗಳು, 90.67 ಲಕ್ಷ ನಗದು ಹಣ, 2.17 ಕೋಟಿ ಮೌಲ್ಯದ 1668.314 ಗ್ರಾಂ ಬಂಗಾರದ ಆಭರಣಗಳು ಹಾಗು 18.569 ಕೆ.ಜಿ. ಬೆಳ್ಳಿ, ‌ಮೊಬೈಲ್, 56.55 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ 377 ಮೊಬೈಲ್ ಪೋನ್‌ಗಳು, 4,87 ಲಕ್ಷ ಮೌಲ್ಯದ ಕೃಷಿ ಉಪಕರಣಗಳು, ಅಡಿಕೆ, ಬೋರವೆಲ್ ವೈರ್, ಮೋಟರ್ ಮತ್ತು ಇತರೆ ವಸ್ತುಗಳು ಸೇರಿ ಒಟ್ಟು 3,91,69,136 ಮೌಲ್ಯದ ಸ್ವತ್ತು ಕಳವು ಪ್ರಕರಣಗಳಲ್ಲಿನ ವಸ್ತುಗಳನ್ನು ವಶಕ್ಕೆ ಪಡೆದು ವಾರಸುದಾರಿಗೆ ಹಸ್ತಾಂತರ ಮಾಡಿದ್ದೇವೆ ಎಂದು ವಿವರಿಸಿದರು.

ಐಎಸ್ಐ ಮಾರ್ಕ್ ಇಲ್ಲದ ಆಫ್ ಹೆಲ್ಮೆಟ್​​ಗಳು, ಸೈಲೆನ್ಸರ್​​ಗಳು, ಕರ್ಕಶ ಶಬ್ದದ ಹಾರ್ನ್ ಹಾಗು ಡಕ್​​ಗಳನ್ನು ಬುಲ್ಡೋಜರ್ ಸಹಾಯದಿಂದ ನಾಶ ಪಡಿಸಲಾಗಿದೆ. ಎಲ್ಲಾ ಸಿಬ್ಬಂದಿಗೆ ಅಭಿನಂದನೆ‌ಗಳು, ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

National Flag Day 2026: ತ್ರಿವರ್ಣ ಧ್ವಜ ಭಾರತದ ಹೆಮ್ಮೆಯ ಸಂಕೇತ – Kannada News | National Flag Day 2026: What is the purpose of National Flag Day?

ರಾಷ್ಟ್ರೀಯ ಧ್ವಜ ದಿನImage Credit source: Getty Images

ತ್ರಿವರ್ಣ ಧ್ವಜವು (National Flag) ಕೇವಲ ಧ್ವಜವಲ್ಲ, ಅದು ಭಾರತದ ಸ್ವಾತಂತ್ರ್ಯ, ಏಕತೆ, ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಶೌರ್ಯ, ತ್ಯಾಗದ ಅಮರ ಸಂಕೇತವಾಗಿದೆ. ತ್ರಿವರ್ಣ ಧ್ವಜವನ್ನು ನೋಡಿದಾಗ ಪ್ರತಿಯೊಬ್ಬರ ಭಾರತೀಯರಲ್ಲೂ ದೇಶಭಕ್ತಿಯ ಭಾವನೆ ಜಾಗೃತಗೊಳ್ಳುತ್ತದೆ. ಭಾರತ ಮಾತೆಯನ್ನು ಸ್ವತಂತ್ರಗೊಳಿಸಲು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಹೋರಾಟ ಮತ್ತು ಬಲಿದಾನವನ್ನು ಇದು ನೆನಪಿಸುತ್ತದೆ. ತ್ರಿವರ್ಣ ಧ್ವಜವು ಆಕಾಶದೆತ್ತರ ಹಾರಿದಾಗಲೆಲ್ಲಾ, ಇದು ಭಾರತದ ಏಕತೆ, ಸಮಗ್ರತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವುದು ಅತ್ಯುನ್ನತವಾದುದು ಎಂಬ ಸಂದೇಶವನ್ನು ರವಾನಿಸುತ್ತದೆ. ತ್ರಿವರ್ಣ ಧ್ವಜದ ಈ ಮಹತ್ವ ಮತ್ತು ಭಾರತವು ಈ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಂಡ ದಿನವನ್ನು ಗೌರವಿಸುವ ಸಲುವಾಗಿ ಪ್ರತಿವರ್ಷ ಜುಲೈ 22 ರಂದು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಧ್ವಜ ದಿನದ ಇತಿಹಾಸವೇನು?

ಆಗಸ್ಟ್ 15, 1947 ರಂದು ಬ್ರಿಟಿಷ್ ಆಳ್ವಿಕೆಯಿಂದ ದೇಶ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮೊದಲು, ಸಂವಿಧಾನ ಸಭೆಯು ಜುಲೈ 22, 1947 ರಂದು ಅಧೀಕೃತವಾಗಿ ತ್ರಿವರ್ಣ ಧ್ವಜವನ್ನು ಭಾರತದ ರಾಷ್ಟ್ರೀಯ ಧ್ವಜವಾಗಿ ಅಂಗೀಕರಿಸಿತು. ಭಾರತದ ರಾಷ್ಟ್ರೀಯ ಧ್ವಜವನ್ನು ಅಳವಡಿಸಿಕೊಂಡದ್ದನ್ನು ಸ್ಮರಿಸುವ ಸಲುವಾಗಿ ನಮ್ಮ ದೇಶದಲ್ಲಿ ಪ್ರತಿವರ್ಷ ಜುಲೈ  22 ರಂದು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಾಗುತ್ತದೆ. ಮಾಹಿತಿಗಳ ಪ್ರಕಾರ, ಭಾರತದ ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ಸಂಕೇತವನ್ನು ಗೌರವಿಸುವ ಈ ದಿನವು ಹೆಚ್ಚಿನ  ಮಹತ್ವವನ್ನು ಹೊಂದಿದೆ.

ರಾಷ್ಟ್ರೀಯ ಧ್ವಜ ದಿನದ ಮಹತ್ವವೇನು?

  • ರಾಷ್ಟ್ರೀಯ ಧ್ವಜ ದಿನವು ಕೇವಲ ಧ್ವಜವನ್ನು ಗೌರವಿಸುವ ದಿನವಲ್ಲ, ಇದು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಮೌಲ್ಯಗಳು ಮತ್ತು ತ್ಯಾಗಗಳನ್ನು ನಾವೆಲ್ಲರೂ ಸ್ಮರಿಸಲು ಒಂದು ಅವಕಾಶವಾಗಿ ಕಾರ್ಯನಿರ್ವಹಿಸುತ್ತದೆ.
  • ರಾಷ್ಟ್ರೀಯ ಧ್ವಜ ದಿನವು ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ ಹಾಗೂ ನಮ್ಮ ದೇಶ ಪ್ರಗತಿ ಮತ್ತು ಏಕತೆಯ ಕಡೆಗೆ ನಡೆಯುತ್ತಿರುವ ಪ್ರಯಾಣವನ್ನು ಪ್ರತಿನಿಧಿಸುತ್ತದೆ.
  • ರಾಷ್ಟ್ರೀಯ ಧ್ವಜ ದಿನವು ಕೇವಲ ಒಂದು ಐತಿಹಾಸಿಕ ಘಟನೆಯ ಸ್ಮರಣೆಯಲ್ಲ, ಬದಲಾಗಿ ಪ್ರತಿಯೊಬ್ಬ ಭಾರತೀಯನಿಗೂ ನಮ್ಮ ರಾಷ್ಟ್ರೀಯ ಧ್ವಜದ ಮಹತ್ವ ಮತ್ತು ಗೌರವದ ಬಗ್ಗೆ ಅರಿವು ಮೂಡಿಸುವ ಸಂದರ್ಭವಾಗಿದೆ.
  • ಹೊಸ ಪೀಳಿಗೆಗಳಿಗೆ ತ್ರಿವರ್ಣ ಧ್ವಜದ ಇತಿಹಾಸ ಮತ್ತು ಪರಂಪರೆಯನ್ನು ಪರಿಚಯಿಸುವುದು, ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಚೈತನ್ಯವನ್ನು ಬಲಪಡಿಸುವುದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸ್ಮರಿಸುವುದು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗೌರವವನ್ನು ಬೆಳೆಸುವುದು ಮತ್ತು ದೇಶಭಕ್ತಿ ಮತ್ತು ನಾಗರಿಕ ಕರ್ತವ್ಯದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಚೆಸ್ ದಿನದ ಇತಿಹಾಸ, ಮಹತ್ವ ತಿಳಿಯಿರಿ

ತ್ರಿವರ್ಣ ಧ್ವಜದ ವಿನ್ಯಾಸ ಮತ್ತು ಅದರ ಬಣ್ಣಗಳ ಮಹತ್ವ:

” ತಿರಂಗ ” ಎಂದು ಕರೆಯಲ್ಪಡುವ ಭಾರತ ರಾಷ್ಟ್ರ ಧ್ವಜವು ಸಮಾನ ಅಗಲದ ಮೂರು ಅಡ್ಡ ಪಟ್ಟೆಗಳನ್ನು ಹೊಂದಿದೆ. ಬಿಳಿ ಪಟ್ಟಿಯ ಮಧ್ಯದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಕಡು ನೀಲಿ ಅಶೋಕ ಚಕ್ರವಿದೆ. ಮತ್ತು ಈ ತ್ರಿವರ್ಣ ಧ್ವಜವು  2:3 ಅನುಪಾತದಲ್ಲಿವೆ. ಈ ವಿನ್ಯಾಸವು ಆಳವಾದ ಸಂಕೇತಗಳನ್ನು ಹೊಂದಿದ್ದು, ಭಾರತೀಯ ರಾಷ್ಟ್ರದ ಮೌಲ್ಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ತ್ರಿವರ್ಣ ಧ್ವಜದಲ್ಲಿರುವ ಕೇಸರಿ ಬಣ್ಣವು ಧೈರ್ಯ, ತ್ಯಾಗ ಮತ್ತು ರಾಷ್ಟ್ರದ ಮೇಲಿನ ಭಕ್ತಿಯನ್ನು ಸಂಕೇತಿಸುತ್ತದೆ. ಬಿಳಿ ಬಣ್ಣವು  ಶಾಂತಿ, ಸತ್ಯವನ್ನು ಸಂಕೇತಿಸುತ್ತದೆ, ಮತ್ತು ಹಸಿರು ಬಣ್ಣವು ಸಮೃದ್ಧಿ, ಅಭಿವೃದ್ಧಿ ಮತ್ತು ಶುಭದ ಸಂಕೇತವಾಗಿದೆ. ಇನ್ನೂ ತ್ರಿವರ್ಣ ಧ್ವಜದ ಮಧ್ಯದಲ್ಲಿರುವ ಅಶೋಕ ಚಕ್ರವು ಧೈರ್ಯ, ತಾಳ್ಮೆ, ಸ್ವಯಂ ತ್ಯಾಗ, ಸತ್ಯತೆ, ಸದಾಚಾರ, ಪ್ರೀತಿ, ಆಧ್ಯಾತ್ಮಿಕ ಜ್ಞಾನ, ನೈತಿಕತೆ, ಕಲ್ಯಾಣ, ಉದ್ಯಮ, ಸಮೃದ್ಧಿ ಮತ್ತು ನಂಬಿಕೆಯಂತಹ ತತ್ವಗಳನ್ನು ಪ್ರತಿನಿಧಿಸುತ್ತವೆ. ಅಲ್ಲದೆ ಅಶ್ರೋಕ ಚಕ್ರದ ಕಡ್ಡಿಗಳು ದಿನದ ಇಪ್ಪತ್ತನಾಲ್ಕು ಗಂಟೆಗಳನ್ನು ಪ್ರತಿನಿಧಿಸುವುದರಿಂದ ಇದನ್ನು ಸಮಯದ ಚಕ್ರ ಎಂದೂ ಸಹ ಕರೆಯಲಾಗುತ್ತದೆ.

ತ್ರಿವರ್ಣ ಧ್ವಜವನ್ನು ಹಾರಿಸುವಾಗ, ಇಳಿಸುವಾಗ ಪಾಲಿಸಬೇಕಾದ ನಿಯಮಗಳೇನು?

  • ಧ್ವಜವನ್ನು ಯಾವಾಗಲೂ ಗೌರವಯುತವಾಗಿ ಹಾರಿಸಬೇಕು ಮತ್ತು ಘನತೆಯಿಂದ ನಿಧಾನವಾಗಿ ಕೆಳಗಿಳಿಸಬೇಕು. ಕೆಳಗಿಳಿಸಿದ ನಂತರ ಅದನ್ನು ಮಡಚಿ ಸುರಕ್ಷಿತ ಸ್ಥಳದಲ್ಲಿಡಬೇಕು.
  •  ತ್ರಿವರ್ಣ ಧ್ವಜವನ್ನು ಎಂದಿಗೂ ತಲೆ ಕೆಳಗಾಗಿ ಪ್ರದರ್ಶಿಸಬಾರದು. ಮೇಲಿನ ಫಲಕದ ಬಣ್ಣವು ಕೇಸರಿ, ಮಧ್ಯ ಬಿಳಿ ಮತ್ತು ಕೆಳಗಿನ ಫಲಕವು ಹಸಿರು ಬಣ್ಣದ್ದಾಗಿರಬೇಕು.
  • ಹಾನಿಗೊಳಗಾದ ಅಥವಾ ಸ್ವಚ್ಛವಾಗಿರದ ಧ್ವಜವನ್ನು ಎಂದಿಗೂ ಪ್ರದರ್ಶಿಸಬಾರದು. ನೀವು ಹಾರಿಸುವ ರಾಷ್ಟ್ರ ಧ್ವಜ ಪರಿಪೂರ್ಣ ಸ್ಥಿತಿಯಲ್ಲಿ ಇರಬೇಕು.
  • ಧ್ವಜ ಸಂಹಿತೆಯ ಪ್ರಕಾರ, ಕೈಯಿಂದ ನೇಯ್ದ, ಯಂತ್ರದಿಂದ ತಯಾರಿಸಿದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ಅಥವಾ ರೇಷ್ಮೆ ಖಾದಿ ಬಂಟಿಂಗ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳನ್ನು ಹಾರಿಸಬಹುದು.
  • ಧ್ವಜದ ಗಾತ್ರ ಏನೇ ಇರಲಿ ಧ್ವಜ ಸಂಹಿತೆಯ ಪ್ರಕಾರ ತ್ರಿವರ್ಣ ಧ್ವಜ 3:2 ಅನುಪಾತದಲ್ಲಿರಬೇಕು. ಮತ್ತು ಧ್ವಜದ ಮಧ್ಯ ಭಾಗವು 24 ಸಮಾನ ಅಂತರದ ಗೆರೆಗಳೊಂದಿಗೆ ಕಡು ನೀಲಿ ಬಣ್ಣದಲ್ಲಿನ ಅಶೋಕ ಚಕ್ರವನ್ನು ಹೊಂದಿರಬೇಕು.
  • ಒಂದು ವೇಳೆ ತ್ರಿವರ್ಣ ಧ್ವಜ ಹಾನಿಗೊಳಗಾದರೆ ಅದನ್ನು ಕಸದ ಬುಟ್ಟಿ ಅಥವಾ ಇನ್ನಾವುದೇ ಸ್ಥಳದಲ್ಲಿ ಎಸೆಯಬಾರದು ಬದಲಿಗೆ ಗೌರವಯುತವಾಗಿ ಸುಡಬೇಕು ಅಥವಾ ಹೂಳಬೇಕು. ಸುಟ್ಟ ನಂತರ ಆ ಬೂದಿಯನ್ನು ನದಿ ನೀರಿನಲ್ಲಿ ಬಿಡಬೇಕು.
  • ಧ್ವಜವನ್ನು ಸಾರ್ವಜನಿಕವಾಗಿ ಉದ್ದೇಶಪೂರ್ವಕವಾಗಿ ಹರಿದು ಹಾಕಬಾರದು, ಸುಡಬಾರದು ಅಥವಾ ವಿರೂಪಗೊಳಿಸಬಾರದು, ಏಕೆಂದರೆ ಇದು ಅಪರಾಧವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:49 pm, Tue, 21 July 26

Source link

ನೇರಳೆ ಹಣ್ಣು ತಿಂದರೆ ನಿಜವಾಗಿಯೂ ಡಯಾಬಿಟಿಸ್ ನಿಯಂತ್ರಿಸಬಹುದೇ? – Kannada News | Jamun and Diabetes: Benefits, Risks and Scientific Facts

ಬೇಸಿಗೆ ಮತ್ತು ಮಳೆಗಾಲದಲ್ಲಿ ಹೆಚ್ಚು ಲಭ್ಯವಾಗುವ ಜಾಮೂನ್ ಹಣ್ಣು ಅಥವಾ ನೇರಳೆ ಹಣ್ಣು (Jamun/Black Plum) ತನ್ನ ವಿಶಿಷ್ಟ ರುಚಿಯ ಜೊತೆಗೆ ಆರೋಗ್ಯಕ್ಕೂ ಹಲವು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ, ನೇರಳೆ ಹಣ್ಣು ತಿಂದರೆ ಮಧುಮೇಹ (ಡಯಾಬಿಟಿಸ್) ನಿಯಂತ್ರಣಕ್ಕೆ ಬರುತ್ತದೆ ಎಂಬ ನಂಬಿಕೆ ವರ್ಷಗಳಿಂದ ಜನರಲ್ಲಿ ಇದೆ. ಕೆಲವರು ಈ ಹಣ್ಣಿನ ಬೀಜವನ್ನು ಒಣಗಿಸಿ ಪುಡಿ ಮಾಡಿ ನೀರಿನಲ್ಲಿ ಬೆರೆಸಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ನಂಬುತ್ತಾರೆ. ಆದರೆ, ಈ ನಂಬಿಕೆ ಎಷ್ಟರ ಮಟ್ಟಿಗೆ ಸತ್ಯ ಮತ್ತು ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕೈಲಾಶ್ ದೀಪಕ್ ಆಸ್ಪತ್ರೆಯ ಎಂಡೋಕ್ರಿನಾಲಜಿ ತಜ್ಞ ಡಾ. ನಿಶಾಂತ್ ಜೈನ್ ಅವರ ಪ್ರಕಾರ, ನೇರಳೆ ಹಣ್ಣು ಮಧುಮೇಹಿಗಳಿಗೆ ಆರೋಗ್ಯಕರ ಆಹಾರದ ಭಾಗವಾಗಬಹುದು. ಆದರೆ ಇದು ಮಧುಮೇಹಕ್ಕೆ ಔಷಧಿಯಲ್ಲ ಮತ್ತು ವೈದ್ಯರು ಸೂಚಿಸಿದ ಔಷಧಿ ಅಥವಾ ಇನ್ಸುಲಿನ್‌ಗೆ ಪರ್ಯಾಯವೂ ಅಲ್ಲ ಎಂದು ಅವರು ಸ್ಪಷ್ಟಪಡಿಸುತ್ತಾರೆ.

ನೇರಳೆ ಹಣ್ಣಿನಲ್ಲಿರುವ ಪೋಷಕಾಂಶಗಳು

  • ವಿಟಮಿನ್ C
  • ಆಹಾರ ನಾರು (Fiber)
  • ಪೊಟ್ಯಾಸಿಯಮ್
  • ಮೆಗ್ನೀಷಿಯಮ್
  • ಕಬ್ಬಿಣ (Iron)
  • ಆಂಥೋಸಯಾನಿನ್ (Anthocyanins)
  • ಫ್ಲೇವನಾಯ್ಡ್ಸ್ (Flavonoids)
  • ಎಲ್ಯಾಜಿಕ್ ಆಸಿಡ್ (Ellagic Acid)
  • ಜ್ಯಾಂಬೋಲಿನ್ (Jamboline)

ಇವುಗಳು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳಾಗಿ ಕಾರ್ಯನಿರ್ವಹಿಸಿ ದೇಹದ ಕೋಶಗಳನ್ನು ಆಕ್ಸಿಡೇಟಿವ್ ಸ್ಟ್ರೆಸ್‌ನಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಮಧುಮೇಹ ಇರುವವರಲ್ಲಿ ಈ ರೀತಿಯ ಕೋಶ ಹಾನಿ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇದೆ.

ನೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆಯನ್ನು ಹೇಗೆ ನಿಯಂತ್ರಿಸಲು ಸಹಾಯ ಮಾಡಬಹುದು?

ಕೆಲವು ಆರಂಭಿಕ ಅಧ್ಯಯನಗಳ ಪ್ರಕಾರ, ನೇರಳೆ ಹಣ್ಣಿನಲ್ಲಿರುವ ಕೆಲವು ನೈಸರ್ಗಿಕ ಸಂಯುಕ್ತಗಳು ಆಹಾರದಲ್ಲಿನ ಪಿಷ್ಟ (Starch) ಸಕ್ಕರೆಯಾಗಿ ಪರಿವರ್ತನೆಯಾಗುವ ವೇಗವನ್ನು ನಿಧಾನಗೊಳಿಸಬಹುದು. ಜೊತೆಗೆ, ದೇಹದಲ್ಲಿ ಇನ್ಸುಲಿನ್ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಹಾಯ ಮಾಡುವ ಸಾಧ್ಯತೆಯೂ ಇದೆ. ಇದಲ್ಲದೆ, ನೇರಳೆ ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ (GI) ಕಡಿಮೆ ಇರುತ್ತದೆ. ಜೊತೆಗೆ ಇದರಲ್ಲಿ ಫೈಬರ್ ಅಂಶ ಅಧಿಕವಾಗಿ ಇರುವುದರಿಂದ ಊಟದ ನಂತರ ರಕ್ತದಲ್ಲಿನ ಸಕ್ಕರೆ ತಕ್ಷಣ ಏರಿಕೆಯಾಗುವುದಿಲ್ಲ.
ಇದರಿಂದ ಮಧುಮೇಹ ನಿಯಂತ್ರಣಕ್ಕೆ ಸಹಾಯಕವಾಗುವ ಸಾಧ್ಯತೆ ಇದೆ. ಆದರೆ, ಇದನ್ನು ಖಚಿತಪಡಿಸಲು ಇನ್ನೂ ದೊಡ್ಡ ಪ್ರಮಾಣದ ಅಧ್ಯಯನಗಳು ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ನೇರಳೆ ಹಣ್ಣಿನ ಬೀಜದ ಪುಡಿ ನಿಜವಾಗಿಯೂ ಪ್ರಯೋಜನಕಾರಿಯೇ?

ಆಯುರ್ವೇದ ಮತ್ತು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಲ್ಲಿ ನೇರಳೆ ಹಣ್ಣಿನ ಬೀಜದ ಪುಡಿಯನ್ನು ಮಧುಮೇಹ ನಿಯಂತ್ರಣಕ್ಕೆ ಬಳಸಲಾಗುತ್ತದೆ. ಆದರೆ ಇದನ್ನು ಬೆಂಬಲಿಸುವ ಬಲವಾದ ವೈಜ್ಞಾನಿಕ ಸಾಕ್ಷ್ಯಗಳು ಇನ್ನೂ ಸೀಮಿತವಾಗಿವೆ. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಜಾಂಬು ಬೀಜದ ಪುಡಿಯನ್ನು ಔಷಧಿಯಂತೆ ಬಳಸುವುದು ಸೂಕ್ತವಲ್ಲ.

ಇದನ್ನೂ ಓದಿ: ವೀಳ್ಯದೆಲೆಯ ಆರೋಗ್ಯ ರಹಸ್ಯ: ತಲೆನೋವು, ಗ್ಯಾಸ್, ಬಾಯಿ ದುರ್ವಾಸನೆಗೆ ನೈಸರ್ಗಿಕ ಪರಿಹಾರ

ಹೆಚ್ಚು ನೇರಳೆ ಹಣ್ಣು ತಿಂದರೆ ಏನಾಗಬಹುದು?

  • ಮಲಬದ್ಧತೆ
  • ಹೊಟ್ಟೆ ಉಬ್ಬರ
  • ಅಜೀರ್ಣ
  • ಹೊಟ್ಟೆ ನೋವಿನಂತಹ ಸಮಸ್ಯೆಗಳು ಕಾಣಿಸಬಹುದು.

ಮಧುಮೇಹಕ್ಕೆ ಈಗಾಗಲೇ ಔಷಧಿ ಅಥವಾ ಇನ್ಸುಲಿನ್ ತೆಗೆದುಕೊಳ್ಳುತ್ತಿರುವವರು ನೇರಳೆ ಹಣ್ಣನ್ನು ಮಿತವಾಗಿ ಸೇವಿಸಬೇಕು. ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ನೇರಳೆ ಹಣ್ಣು ತಿನ್ನುವಾಗ ಗಮನಿಸಬೇಕಾದ ವಿಷಯಗಳು:

  • ಖಾಲಿ ಹೊಟ್ಟೆಯಲ್ಲಿ ನೇರಳೆ ಹಣ್ಣು ತಿನ್ನಬೇಡಿ.
  • ಹಾಲಿನೊಂದಿಗೆ ಅಥವಾ ಹಾಲು ಕುಡಿಯುವ ಮೊದಲು/ತಕ್ಷಣದ ನಂತರ ನೇರಳೆ ಹಣ್ಣು ಸೇವಿಸಬೇಡಿ.
  • ಒಂದು ಬಾರಿ ಸುಮಾರು 8–10 ನೇರಳೆ ಹಣ್ಣು (ಸುಮಾರು 75–100 ಗ್ರಾಂ) ಸಾಕಾಗಬಹುದು. ನಿಮ್ಮ ಆರೋಗ್ಯ ಸ್ಥಿತಿಗೆ
  • ಅನುಗುಣವಾಗಿ ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆ ಪಡೆಯಿರಿ.
  • ತಾಜಾ ಹಣ್ಣನ್ನೇ ಸೇವಿಸುವುದು ಉತ್ತಮ.

ಈ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು:

  • ಸಮತೋಲನ ಆಹಾರ ಸೇವನೆ
  • ಪ್ರತಿದಿನ ವ್ಯಾಯಾಮ
  • ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಪರೀಕ್ಷೆ
  • ವೈದ್ಯರು ಸೂಚಿಸಿದ ಔಷಧಿಗಳನ್ನು ಸರಿಯಾಗಿ ಸೇವಿಸುವುದು
  • ಆರೋಗ್ಯಕರ ಜೀವನಶೈಲಿ ಅನುಸರಿಸುವುದು

ಸೂಚನೆ: ಈ ಲೇಖನವು ಆರೋಗ್ಯ ಜಾಗೃತಿಗಾಗಿ ಮಾತ್ರ. ಮಧುಮೇಹ ಅಥವಾ ಇತರ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಅರ್ಹ ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ನಟನೆಯ ‘ಬನ’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ – Kannada News | Journalists Jayaprakash Shetty Bana Movie Release Date Announced

ನಿರೀಕ್ಷೆ ಮೂಡಿಸಿರುವ ‘ಬನ’ (Bana) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಸಿನಿಮಾ ತುಳು (Tulu) ಮತ್ತು ಕನ್ನಡ ಭಾಷೆಗಳಲ್ಲಿ ಅಕ್ಟೊಬರ್ 23ರಂದು ಬಿಡುಗಡೆಯಾಗಲಿದೆ. ಬಹಳ ವರ್ಷಗಳ ನಂತರ ನಾಗ ಕಥೆಯ ಚಿತ್ರವೊಂದು ಬರುತ್ತಿದ್ದು ತುಳು ಚಿತ್ರರಂಗದ ಇತಿಹಾಸದಲ್ಲೇ ನಾಗ ಕಥೆಯನ್ನು ಹೊಂದಿರುವ ಮೊದಲ ಚಿತ್ರ ಇದು ಎನ್ನಲಾಗಿದೆ. ಸುದ್ದಿ ನಿರೂಪಕ, ಪತ್ರಕರ್ತ ಜಯಪ್ರಕಾಶ್ ಶೆಟ್ಟಿ (Jayaprakash Shetty) ಅವರು ನಟಿಸಿದ್ದಾರೆ ಎಂಬುದು ಈ ಸಿನಿಮಾದ ವಿಶೇಷ.

‘ಬನ’ ಚಿತ್ರದ ಟ್ರೇಲರ್ ಈ ವರ್ಷ ನಾಗರ ಪಂಚಮಿ ಹಬ್ಬದ ದಿನ ಬಿಡುಗಡೆ ಆಗಲಿದೆ. ತುಳುವಿನ ಈ ಸಿನಿಮಾದಲ್ಲಿ ಹಿರಿಯ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಅವರು ಇದೇ ಮೊದಲ ಬಾರಿಗೆ ಅಭಿನಯಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ರೂಪಾ ವರ್ಕಡಿ ಅವರು ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ. ‘ಈಶಿ ಪ್ರೊಡಕ್ಷನ್’ ಬ್ಯಾನರ್ ಮೂಲಕ ಮನೋಹರ್ ರೈ ವೈಪಾಲ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ‘ಬನ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ತುಳುನಾಡಿನಲ್ಲಿ ನಾಗಾರಾಧನೆ ಹೆಚ್ಚು ಆಚರಣೆಯಲ್ಲಿದೆ. ಈಗ ಅದೇ ವಿಚಾರದ ಕುರಿತು ‘ಬನ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಕಥೆ ಹೇಗಿರಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಜಯಪ್ರಕಾಶ್ ಶೆಟ್ಟಿ ನಟಿಸಿರುವ ಕಾರಣದಿಂದ ಅವರ ಅಭಿಮಾನಿಗಳಿಗೂ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಸಂಭಾವನೆ ಪಡೆಯದೇ ತುಳು ಸಿನಿಮಾದಲ್ಲಿ ನಟಿಸಿದ ಸುನೀಲ್ ಶೆಟ್ಟಿ

ಕನ್ನಡದ ಅನೇಕ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಲ್ಲಿ ಜಯಪ್ರಕಾಶ್ ಶೆಟ್ಟಿ ಅವರು ಕೆಲಸ ಮಾಡಿದ್ದಾರೆ. ಆ ಮೂಲಕ ಅವರು ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ‘ಬನ’ ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ಜನರಿಗೆ ಕೌತುಕ ಮೂಡಿದೆ. ಬಿಡುಗಡೆ ಆಗಿರುವ ಪೋಸ್ಟರ್ ನೋಡಿದರೆ ಕಥೆಯ ಬಗ್ಗೆ ಕುತೂಹಲ ಹೆಚ್ಚುವಂತಿದೆ. ಟ್ರೇಲರ್ ನೋಡಲು ಸಿನಿಪ್ರಿಯರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version