ಬ್ಯಾಂಕ್ ಅಕೌಂಟ್ ಹ್ಯಾಕ್ ಆದ್ರೆ ಮೊದ್ಲು ಈ ಕೆಲಸ ಮಾಡಿ – Kannada News | Bank Account: If your bank account gets hacked, do this first

ಇತ್ತೀಚೆಗಿನ ದಿನಗಳಲ್ಲಿ ಬ್ಯಾಂಕ್‌ಗೆ ತೆರಳಿ ವ್ಯವಹಾರ ಮಾಡುವುದಕ್ಕಿಂತ ಡಿಜಿಟಲ್ ಬ್ಯಾಂಕಿಂಗ್‌ನನ್ನು  (Digital Banking) ಹೆಚ್ಚು ಅವಲಂಬಿಸಿಕೊಂಡಿದ್ದಾರೆ. ಇತ್ತ ಡಿಜಿಟಲ್ ಬ್ಯಾಂಕಿಂಗ್ ಶುರುವಾದ ಬಳಿಕವಂತೂ ಹ್ಯಾಕರ್ಸ್ ಗಳ ಹಾವಳಿ ಹೆಚ್ಚಾಗಿದೆ. ಅಕೌಂಟ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಹಣವನ್ನು ದೋಚುತ್ತಿದ್ದಾರೆ. ಅಕೌಂಟ್ ಹ್ಯಾಕ್ ಆದ್ರೆ ನೀವು ಈ ಕೆಲವು ಸಲಹೆಗಳನ್ನು ಅನುಸರಿಸುವುದು ಸುರಕ್ಷತೆ ದೃಷ್ಟಿಯಿಂದ ಉತ್ತಮ.

ಬ್ಯಾಂಕ್ ಅಕೌಂಟ್‌ ಹ್ಯಾಕ್ ಆದ್ರೆ ನೀವು ಮೊದ್ಲು ಈ ಕೆಲಸ ಮಾಡಿ

ಹಂತ 1: ನಿಮ್ಮ ಬ್ಯಾಂಕಿನ ಅಧಿಕೃತ ಗ್ರಾಹಕ ಸೇವೆಗೆ ಕರೆ ಮಾಡಿ ಹಾಗೂ ನಿಮ್ಮ ಖಾತೆ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ನೀಡಿ.

ಹಂತ 2: ನಿಮ್ಮ ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳು ಹಾಗೂ ನೆಟ್‌ಬ್ಯಾಂಕಿಂಗ್ ನ್ನು ತಕ್ಷಣ ವೇ ಬ್ಲಾಕ್ ಮಾಡಿ.

ಹಂತ 3: ನಿಮ್ಮ ಎಲ್ಲಾ ಆನ್‌ಲೈನ್ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು ಮತ್ತು ಇಮೇಲ್ ಪಾಸ್‌ವರ್ಡ್‌ಗಳನ್ನು ತಕ್ಷಣವೇ ಬದಲಾಯಿಸಿ.

ಹಂತ 4: ನಿಮ್ಮ ಮೊಬೈಲ್ ಗೆ ಬಂದ ವಂಚನೆ ಸಂದೇಶಗಳು, ನಿಮ್ಮ ಖಾತೆಯಿಂದ ಹಣ ಕಡಿತಗೊಂಡ ವಿವರಗಳು ಹಾಗೂ ಹ್ಯಾಕರ್ ಗಳು ಕರೆ ಮಾಡಿದ ಮೊಬೈಲ್ ನಂಬರ್ ಗಳನ್ನು ಇಟ್ಟುಕೊಳ್ಳಿ.

ಹಂತ 5: ನಿಮ್ಮ ಹತ್ತಿರದ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಭೇಟಿ ನೀಡಿ ಲಿಖಿತ ದೂರನ್ನು ದಾಖಲಿಸಿ.

ಇದನ್ನೂ ಓದಿ: UPI without Internet: ಟ್ಯಾಪ್ ಟು ಪೇ, ಹೊಸ ಯುಪಿಐ ಫೀಚರ್; ಇಂಟರ್ನೆಟ್ ಇಲ್ಲದ ಫ್ಲೈಟ್, ಅಂಡರ್​ಗ್ರೌಂಡ್ ಮೆಟ್ರೋಗೂ ಹಣ ಪಾವತಿಸಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಬ್ಯಾಂಕ್ ಖಾತೆ ಹ್ಯಾಕ್ ಆಗದಂತೆ ಎಚ್ಚರ ವಹಿಸುವುದು ಹೇಗೆ?

ಉತ್ತರ: ಬ್ಯಾಂಕ್ ಖಾತೆಗೆ ದೊಡ್ಡಕ್ಷರ, ಸಂಖ್ಯೆಗಳು ಹಾಗೂ ಚಿಹ್ನೆಗಳನ್ನು ಒಳಗೊಂಡ ಬಲವಾದ ಪಾಸ್ ವರ್ಡ್ ಬಳಸಿ

ಪ್ರಶ್ನೆ: ಬ್ಯಾಂಕ್ ಅಕೌಂಟ್ ಹ್ಯಾಕ್ ಆದ್ರೆ ಮೊದ್ಲು ಏನು ಮಾಡ್ಬೇಕು?

ಉತ್ತರ: ನಿಮ್ಮ ಆನ್‌ಲೈನ್ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು ಮತ್ತು ಇಮೇಲ್ ಪಾಸ್‌ವರ್ಡ್‌ಗಳನ್ನು ತಕ್ಷಣವೇ ಬದಲಾಯಿಸಿ.

ಪ್ರಶ್ನೆ: ಬ್ಯಾಂಕ್ ಅಕೌಂಟ್ ಹ್ಯಾಕ್ ಆದಾಗ ಸೈಬರ್ ಕ್ರೈಂಗೆ ದೂರು ಸಲ್ಲಿಸುವುದು ಹೇಗೆ?

ಉತ್ತರ: ಬ್ಯಾಂಕ್ ಅಕೌಂಟ್ ಹ್ಯಾಕ್ ಆದಾಗ ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೀವ್ರ ಸ್ವರೂಪ ಪಡೆದ ಬಲ್ಡೋಟಾ ಹೋರಾಟದ ಕಿಚ್ಚು, ಕಬ್ಬಿಣದ ಬಾಗಿಲು ಮುರಿದು ಕಾರ್ಖಾನೆಗೆ ನುಗ್ಗಿದ ರೈತರು – Kannada News | Farmers Protest Intensifies Against Baldota Steel Factory In Koppal, Door Cut

ಕೊಪ್ಪಳ, (ಜುಲೈ 21): ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ (Baldota Steel Factory )ವಿರುದ್ಧರ ರೈತರ ಪ್ರತಿಭಟನೆ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಹಲವು ದಿನಗಳಿಂದ ಬಲ್ಡೋಟಾ ಕಾರ್ಖಾನೆ ತೆರವುಗೊಳಿಸುವಂತೆ ರೈತರು ಧರಣಿ ನಡೆಸಿದ್ದು, ಇದೀಗ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು.. ಬಲ್ಡೋಟಾ ಕಾರ್ಖಾನೆಯೊಳಗಿರುವ ಕೆರೆಯನ್ನು ಸಾರ್ವಜನಿಕ ಮುಕ್ತ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಕಬ್ಬಿಣದ ಡೋರ್ ಮುರಿದು ರೈತರು ಕಾರ್ಖಾನೆಗೆ ನುಗ್ಗಿದ್ದಾರೆ. ಇನ್ನು ಪ್ರತಿಭಟನೆ ವೇಳೆ ಏಕಾಏಕಿ ರೈತ ಯಮನೂರಪ್ಪ ಕೆರೆಗೆ ಹಾರಿದ್ದು, ಬಳಿಕ ಈಜಿ ದಡ ಸೇರಿದ್ದಾರೆ. ಇನ್ನು ಪ್ರತಿಭಟನೆ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಸ್ಥಳಕ್ಕೆ ಬಳ್ಳಾರಿ ವಲಯ ಐಜಿಪಿ ಹರ್ಷ ದೌಡಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಗಿಣಿ ದ್ವಿವೇದಿ ನಟನೆಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ರಿಲೀಸ್ – Kannada News | Ragini Dwivedi Kumar bangarappa starrer Sarkari Nyayabele Angadi trailer released

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyayabele Angadi) ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರತಂಡ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ನಟಿ ರಾಗಿಣಿ ದ್ವಿವೇದಿ (Ragini Dwivedi), ನಟರಾದ ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ, ರುದ್ರೇಗೌಡ ಮುಂತಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಈಗ ಬಿಡುಗಡೆಯಾಗಿದೆ.

ಹಿರಿಯ ರಾಜಕಾರಣಿ ಎಲ್.ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, ಗಾಯಕಿ ಶಮಿತಾ ಮಲ್ನಾಡ್ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಹಲವರ ಸಮ್ಮುಖದಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲಾಗಿದೆ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ನಂತರ ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿದರು. ‘ಜನ ಸಾಮಾನ್ಯರು, ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ, ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಈಗ ಇದೇ ವಿಷಯವನ್ನು ಸಿನಿಮಾವಾಗಿಸಿ ಪ್ರೇಕ್ಷಕರ ಮುಂದೆ ತರಲಾಗುತ್ತಿದೆ. ಚಿತ್ರತಂಡದ ಇಂಥದ್ದೊಂದು ಪ್ರಯತ್ನ ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ, ಅದು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ. ಈ ಚಿತ್ರ ಜನಜಾಗೃತಿ ಮೂಡಿಸಿ, ಯಶಸ್ವಿಯಾಗಲಿ’ ಎಂದು ಅವರು ಹಾರೈಸಿದರು.

ಪಡಿತರ ವ್ಯವಸ್ಥೆಯ ಕುರಿತ ಮೊದಲ ಸಿನಿಮಾ:

ಸುದ್ದಿಗೋಷ್ಠಿಯಲ್ಲಿ ನಟ ಕುಮಾರ್ ಬಂಗಾರಪ್ಪ ಕೂಡ ಮಾತನಾಡಿದರು. ‘ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದೆ. ಇಡೀ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ಈ ಸಿನಿಮಾ ಸಾಗುತ್ತದೆ. ಮನರಂಜನೆ ಜೊತೆಗೆ ಒಂದು ಒಳ್ಳೆಯ ಸಂದೇಶ ಕೂಡ ಈ ಸಿನಿಮಾದಲ್ಲಿದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ವ್ಯವಹಾರಗಳು, ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ

ರಾಗಿಣಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ:

ನಟಿ ರಾಗಿಣಿ ದ್ವಿವೇದಿ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ ಈ ಸಿನಿಮಾದಲ್ಲಿ ನನಗೆ ಸಿಕ್ಕಿದೆ. ಇಡೀ ಸಿನಿಮಾವನ್ನು ಗ್ರಾಮೀಣ ಭಾಗದಲ್ಲಿ ಚಿತ್ರೀಕರಣ ಮಾಡಿದ್ದು ಮತ್ತೊಂದು ಅನುಭವ. ಈ ಸಿನಿಮಾ ನೋಡುಗರಿಗೆ ಮೆಸೇಜ್ ಜೊತೆಗೆ ಮನರಂಜನೆ ಕೂಡ ನೀಡಲಿದೆ’ ಎಂದು ರಾಗಿಣಿ ಹೇಳಿದರು.

‘ಜಯಶಂಕರ ಟಾಕೀಸ್‌’ ಬ್ಯಾನರಿನಲ್ಲಿ ನಿರ್ಮಾಣ ಆಗಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್‌ ಆರ್ಯನ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ. ರಾಮಮೂರ್ತಿ ಅವರು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಸಾತ್ವಿಕ್‌ ಪವನ್‌ ಕುಮಾರ್‌ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಾಲಾ ಮಕ್ಕಳಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ: ಜಂಕ್​​ ಫುಡ್​​​ ವಿರುದ್ಧ ಸಮರ ಸಾರಿದ ಆಹಾರ ಸುರಕ್ಷಿತ ಇಲಾಖೆ – Kannada News | War on Junk Food: Food Safety Department to Issue Guidelines to Curb Fast Food Sales Around Schools

ಬೆಂಗಳೂರು, ಜುಲೈ 21: ಅತಿಯಾದ ಜಂಕ್​​ ಫುಡ್​​ಗಳ ಸೇವನೆಯಿಂದ ಇತ್ತೀಚೆಗೆ ಮಕ್ಕಳಲ್ಲಿ ಬೊಜ್ಜು, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮತ್ತೆ ಅಲರ್ಟ್​​ ಆಗಿರುವ ಆಹಾರ ಸುರಕ್ಷಿತ ಇಲಾಖೆ ಇಂತಹ ಆಹಾರಗಳ ಮಾರಾಟದ ವಿರುದ್ಧ ಮತ್ತೆ ಸಮರ ಸಾರಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದ್ದು, ತಜ್ಞ ನ್ಯೂಟ್ರಿಷನ್ ವೈದ್ಯರ ಸಲಹೆ ಮೆರೆಗೆ ಶಾಲಾ ವಿದ್ಯಾರ್ಥಿಗಳ ಆಹಾರದ ಬಗ್ಗೆ ಮಾರ್ಗಸೂಚಿ ಪ್ರಕಟಿಸಲು ಸಿದ್ಧತೆ ನಡೆಸಿದೆ.

ಶಾಲೆ, ಕಾಲೇಜು ಹಾಗೂ ವಸತಿ ನಿಯಲಗಳ ಕ್ಯಾಟೀನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಪ್​​ಗಳಿಂದ ಜಂಕ್​​ ಫುಡ್​​ಗಳ ಸ್ಯಾಂಪಲ್​​ ಪಡೆದಿರುವ ಇಲಾಖೆ ಲ್ಯಾಬ್ ವರದಿ ಆಧಿರಿಸಿ ಈ ಬಗ್ಗೆ ಕಡಿವಾಣ ಹಾಕಲು ಮುಂದಾಗಿದೆ. ಆಲೂಗೆಡ್ಡೆ ಚಿಪ್ಸ್, ಫ್ರೆಂಚ್ ಫ್ರೈಸ್, ಬರ್ಗರ್, ಪಿಜ್ಜಾ, ಹಾಟ್‌ಡಾಗ್, ಸೋಡಾ, ಕೋಲ್ಡ್‌ಡ್ರಿಂಕ್ಸ್, ಎನರ್ಜಿ ಡ್ರಿಂಕ್ಸ್, ಚಾಕೊಲೇಟ್, ಡೋನಟ್ಸ್, ಐಸ್‌ಕ್ರೀಮ್, ಕ್ಯಾಂಡಿ, ಪ್ಯಾಕ್ ಮಾಡಿದ ಬಿಸ್ಕತ್ತುಗಳು ಫ್ರೈಡ್ ಸ್ನ್ಯಾಕ್ಸ್, ಫ್ರೈಡ್ ಚಿಕನ್, ಟ್ಯಾಕೋಸ್, ರ‍್ಯಾಪ್ಸ್, ಇನ್‌ಸ್ಟಂಟ್ ನೂಡಲ್ಸ್, ಮ್ಯಾಗಿ ಸೇರಿದ್ದಂತೆ ಜಂಕ್ ಫುಡ್​​ಗಳ ಪಟ್ಟಿಯನ್ನೇ ರೆಡಿ ಮಾಡಿದೆ. ಮಕ್ಕಳಲ್ಲಿನ ಒಬೆಸಿಟಿ, ಫ್ಯಾಟಿ ಲಿವರ್​​ನಂತಹ ಆರೋಗ್ಯ ಸಮಸ್ಯೆಗಳ ಹೆಚ್ಚಳಕ್ಕೆ ಬ್ರೇಕ್​​ ಹಾಕುವನಿಟ್ಟಿನಲ್ಲಿ ಇಂತಹ ಕ್ರಮ ಅನಿವಾರ್ಯ ಎನ್ನಲಾಗಿದೆ.

ಇದನ್ನೂ ಓದಿ:  ಬೆಚ್ಚಗಿನ ನೀರಿಗೆ ಕರಿಮೆಣಸು, ಅರಿಶಿನ ಸೇರಿಸಿ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ!

ಇತ್ತೀಚೆಗೆ ಶಾಲಾ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗಿದ್ದು, 16 ವರ್ಷಕ್ಕಿಂತ ಕಿರಿಯ ಮಕ್ಕಳಲ್ಲಿಯೇ ಅತಿಯಾಗಿ ಕಂಡುಬರುತ್ತಿದೆ. ಬಾಲ್ಯದ ಈ ಬೊಜ್ಜು ಮಕ್ಕಳ ಟೈಪ್-2 ಡಯಾಬಿಟಿಸ್, ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ಅಸ್ಥಿಸಂಧಿವಾತ, ಹೃದಯ ಕಾಯಿಲೆ, ಪಾರ್ಶ್ವವಾಯು, ಪಿತ್ತಕೋಶದ ಕಾಯಿಲೆ, ಉಸಿರಾಟದ ತೊಂದರೆ ಸೇರಿದಂತೆ ಕೆಲವು ಕ್ಯಾನ್ಸರ್‌ಗಳ ಅಪಾಯವನ್ನೂ ಉಂಟುಮಾಡಬಹುದು ಎಂದು ತಜ್ಞರು ಕೂಡ ಎಚ್ಚರಿಸಿದ್ದಾರೆ. ಮಕ್ಕಳಿಗೆ ಕರಿದ, ಸಂಸ್ಕರಿತ ಮತ್ತು ಸಕ್ಕರೆಭರಿತ ಆಹಾರಗಳನ್ನೇ ನೀಡುವ ಬದಲು ಪೌಷ್ಠಿಕ ಆಹಾರ ನೀಡುವತ್ತ ಪೋಷಕರು ಹಚ್ಚು ಗಮನ ಹರಿಸಬೇಕೆಂಬ ಸಲಹೆಗಳೂ ವ್ಯಕ್ತವಾಗಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ – Kannada News | Rahul Gandhi Kharge Priyanka Gandhi continues sit in near PM residence urges Modis Resignation over NEET Scam

ನವದೆಹಲಿ, ಜುಲೈ 21: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET Paper Leak) ಖಂಡಿಸಿ ನಿನ್ನೆ (ಸೋಮವಾರ) ದೆಹಲಿಯಲ್ಲಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 12 ಸಾವಿರಕ್ಕೂ ಹೆಚ್ಚು ಯುವಕ-ಯುವತಿಯರು ಪ್ರತಿಭಟನೆಯಲ್ಲಿ (Delhi Protest) ಭಾಗಿಯಾಗಿ ಸಂಸತ್ ಭವನದವರೆಗೂ ಮೆರವಣಿಗೆ ನಡೆಸಿದ್ದರು. ಆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದರಿಂದ ಹಲವಾರು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದರು. ಪೊಲೀಸರ ಈ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪ್ರಧಾನಮಂತ್ರಿಗಳ ನಿವಾಸದ ಹೊರಗೆ ಧರಣಿ ನಡೆಸಿದೆ. ಈ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಪ್ರಧಾನಿ ನಿವಾಸದ ಸಮೀಪ ಧರಣಿ ಕುಳಿತಿರುವ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ಸಂಧಾನ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕೃತ ನಿವಾಸದಿಂದ ಹೊರಟ ಕಾಂಗ್ರೆಸ್ ನಾಯಕರು ಹಾಗೂ ಲಕ್ಷಾಂತರ ಕಾರ್ಯಕರ್ತರು, ಕೇವಲ 1 ಕಿಲೋಮೀಟರ್ ದೂರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದತ್ತ ಮೆರವಣಿಗೆ ನಡೆಸಿದರು.


ಇದನ್ನೂ ಓದಿ: ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ!

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಸೋಮವಾರ ಯುವಕರ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಪ್ರಧಾನಿಯವರೇ ಉತ್ತರಿಸಬೇಕು. ಪ್ರಧಾನಿ ಮತ್ತು ಗೃಹ ಸಚಿವರು ದೇಶದ ಯುವಕರ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಅವರು ತಕ್ಷಣವೇ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಧರಣಿಗೆ ಕೈಜೋಡಿಸಲು ದೇಶದ ಜನತೆಗೆ ರಾಹುಲ್ ಕರೆ:

“ವಿದ್ಯಾರ್ಥಿಗಳ ಮೇಲಿನ ದಾಳಿಯು ಪ್ರತಿಯೊಂದು ಭಾರತೀಯ ಕುಟುಂಬದ ಮೇಲಿನ ದಾಳಿಯಾಗಿದೆ” ಎಂದು ಹೇಳಿರುವ ರಾಹುಲ್ ಗಾಂಧಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. “ಯಾವುದೇ ಉತ್ತರ ನೀಡದೆ, ಯಾವುದೇ ಪರಿಣಾಮಗಳನ್ನು ಎದುರಿಸದೆ ತಪ್ಪಿಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿ ಭಾವಿಸಿದ್ದಾರೆ. ಆದರೆ ಈ ಬಾರಿ ಅದು ಸಾಧ್ಯವಿಲ್ಲ. ನಮ್ಮ ದೇಶದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದು ಬಯಸುವ ಪ್ರತಿಯೊಬ್ಬ ದೇಶಪ್ರೇಮಿ ಭಾರತೀಯನೂ ಪ್ರಧಾನಿ ನಿವಾಸದ ಮುಂಭಾಗದಲ್ಲಿ ನಡೆಯುತ್ತಿರುವ ಈ ಧರಣಿಯಲ್ಲಿ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆ. ಭಾರತದ ವಿದ್ಯಾರ್ಥಿಗಳ ಧ್ವನಿಯನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ರಾಹುಲ್ ಕರೆ ನೀಡಿದ್ದಾರೆ.

ಇದನ್ನೂ ಓದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ತೀವ್ರ ಪ್ರತಿಭಟನೆ; ಅಮಿತ್ ಶಾ- ಧರ್ಮೇಂದ್ರ ಪ್ರಧಾನ್ ತುರ್ತು ಸಭೆ

ನೀಟ್-ಯುಜಿ (NEET-UG) ಹಗರಣ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸೋಮವಾರ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸತ್ತಿಗೆ ಬೃಹತ್ ಮೆರವಣಿಗೆ ಹಮ್ಮಿಕೊಂಡಿತ್ತು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿ ಚದುರಿಸಿದ್ದರು. ಈ ದೌರ್ಜನ್ಯದಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಇದನ್ನು ಖಂಡಿಸಿ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ನೇರ ಸಮರ ಸಾರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:31 pm, Tue, 21 July 26

Source link

Chanakya Niti for business: ಹೊಸದಾಗಿ ಬಿಸಿನೆಸ್‌ ಆರಂಭಿಸುವ ಪ್ರತಿಯೊಬ್ಬರೂ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಲೇಬೇಕು – Kannada News | Chanakya Niti: startup success secrets by Chanakya

ಇತ್ತೀಚಿನ ದಿನಗಳಲ್ಲಿ ತಮ್ಮದೇ ಆದ ಸ್ವಂತ ಉದ್ಯಮವನ್ನು (business) ಪ್ರಾರಂಭಿಸುವುದು ಪ್ರತಿಯೊಬ್ಬರ  ಕನಸಾಗಿದೆ. ಹೌದು ಎಷ್ಟು ಅಂತ ಇನ್ನೊಬ್ಬರ ಕೈ ಕೆಳಗೆ ಕೆಲಸ ಮಾಡುವುದು ಸ್ವಂತದ್ದಾಗಿ ಏನಾದರೂ ಮಾಡಬೇಕು ಎಂದು ಎಷ್ಟೋ ಜನ ಸೀರೆ ಬಿಸಿನೆಸ್, ನೈಲ್‌, ಬ್ಯೂಟಿ ಸೆಲೂನ್‌, ಚಾಟ್ಸ್‌ ಸೆಂಟರ್‌, ಜ್ಯೂಸ್‌ ಸೆಂಟರ್‌, ಹೋಮ್‌ಮೇಡ್‌ ಮಸಾಲಾ ಐಟಂ ಪ್ರಾಡಕ್ಟ್‌ ಬಿಸಿನೆಸ್‌ ಸೇರಿದಂತೆ ಬೇರೆ ಬೇರೆ ಸ್ವಂತ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಆದರೆ ಹೀಗೆ ಸ್ವಂತ ಉದ್ಯಮವನ್ನು ಆರಂಭಿಸುವುದು ಅದರಲ್ಲಿ ಯಶಸ್ಸನ್ನು ಕಾಣುವುದು ಅಷ್ಟು ಸುಲಭದ ಮಾತಲ್ಲ. ಇದಕ್ಕೆ ಸರಿಯಾದ ಮಾರ್ಗದರ್ಶನದ ಅಗತ್ಯ ಇದೆ. ನಿಮಗೂ ಹೊಸ ಉದ್ಯಮವನ್ನು ಆರಂಭಿಸಿ, ಅದರಲ್ಲಿ ಯಶಸ್ಸನ್ನು ಕಾಣುವ ಆಸೆಯಿದ್ದರೆ, ಆಚಾರ್ಯ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ.

ಹೊಸದಾಗಿ ಉದ್ಯಮವನ್ನು ಆರಂಭಿಸುವವರು ಪಾಲಿಸಬೇಕಾದ ಸಲಹೆಗಳಿವು:

ಯೋಜನೆಗಳನ್ನು ಯಾವಾಗಲೂ ರಹಸ್ಯವಾಗಿಡಬೇಕು: ವ್ಯವಹಾರವನ್ನು ಆರಂಭಿಸುವ ಮೊದಲ ನಿಯಮವೆಂದರೆ ಯೋಜನೆಗಳನ್ನು ಮತ್ತು ಮುಂದಿನ ನಡೆಗಳನ್ನು ರಹಸ್ಯವಾಗಿಡುವುದು. ನೀವು ಹೊಸದಾಗಿ ಉದ್ಯಮ ಅರಂಭಿಸುತ್ತೀರಿ ಎಂದಾದರೆ, ಆ ಯೋಜನೆ ಸಂಪೂರ್ಣವಾಗಿ ಕಾರ್ಯಗತಗೊಳ್ಳುವವರೆಗೆ ಅದನ್ನು ರಹಸ್ಯವಾಗಿಡಿ. ನೀವು ಇತರರ ಬಳಿ ನಿಮ್ಮ ಯೋಜನೆಗಳನ್ನು ಹಂಚಿಕೊಂಡಾಗ ಹೊಟ್ಟೆಕಿಚ್ಚಿನಿಂದ ಅವರು ಅದನ್ನು ಹಾಳು ಮಾಡುವ ಸಾಧ್ಯತೆ ಇರುತ್ತದೆ.  ಆದ್ದರಿಂದ  ಯೋಜನೆ ಪೂರ್ಣಗೊಳ್ಳುವವರೆಗೆ ಮೌನವನ್ನು ಕಾಪಾಡಿಕೊಳ್ಳಿ.

ಬಹುಕಾರ್ಯಗಳ ಜ್ಞಾನ ಬೆಳೆಸಿಕೊಳ್ಳಿ: ಒಬ್ಬ ಉದ್ಯಮಿ ಬಹುಮುಖಿ ಆಟಗಾರನಾಗಿರಬೇಕು ಎನ್ನುತ್ತಾ ಆಚಾರ್ಯ ಚಾಣಕ್ಯ. ನಾಯಕತ್ವ, ಕೆಲಸವನ್ನು ಹಂಚುವುದು, ಮಾರ್ಕೆಟಿಂಗ್‌, ಲಾಭ-ನಷ್ಟ ಸೇರಿದಂತೆ ಪ್ರತಿಯೊಂದು ಅಂಶವನ್ನು ಅಳೆಯಬೇಕು, ಕ್ರಿಯಾಶೀಲವಾಗಿ ಯೋಚಿಸಬೇಕು ಆಗ ಮಾತ್ರ ಯಶಸ್ವಿ ಉದ್ಯಮಿಯಾಗಲು ಸಾಧ್ಯ.

ಪ್ರತಿದಿನ ಹೊಸದನ್ನು ಕಲಿಯಿರಿ:  ಯಶಸ್ವಿ ಉದ್ಯಮಿಯಾಗಲು ಬಯಸಿದರೆ ನೀವು ಪ್ರತಿದಿನ ಹೊಸ ಹೊಸ ವಿಷಯಗಳ ಬಗ್ಗೆ ಕಲಿಯಬೇಕು, ಉದ್ಯಮವನ್ನು ಮೇಲಿನ ಮಟ್ಟಕ್ಕೆ ತೆಗೆದುಕೊಂಡು ಹೋಗುವುದು ಎಂಬ ಬಗ್ಗೆ ಜ್ಞಾನವನ್ನು ಬೆಳೆಸಬೇಕು. ಆಗ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯ. ಯಾವುದೇ ವಿಷಯವನ್ನು ಕಲಿಯದೆ ನಿಂತ ನೀರಿನಂತಿದ್ದರೆ, ನಿಮ್ಮ ಉದ್ಯಮ ಕೂಡ ಪ್ರಗತಿ ಕಾಣದೆ ನಿಂತ ನೀರಿನಂತಿರುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ.

ಇದನ್ನೂ ಓದಿ: ಜೀವನದಲ್ಲಿ ಮುಂದೆ ಬರಬೇಕು ಅಂದ್ರೆ ವಿಷಯಗಳನ್ನು ನಿಯಂತ್ರಿಸಲು ಕಲಿಯಿರಿ

ಪಾರ್ಟ್ನರ್‌ಗಳನ್ನು ಎಚ್ಚರದಿಂದ ಆಯ್ಕೆ ಮಾಡಿ: ಒಬ್ಬರೇ ಉದ್ಯಮವನ್ನು ಆರಂಭಿಸಲು ಸಾಧ್ಯವಿಲ್ಲ, ಅದಕ್ಕೆ ಸೂಕ್ತವಾದ ಬೆಂಬಲ ಬೇಕಾಗುತ್ತದೆ. ಹೀಗಿರುವಾಗ ನೀವು ನಿಮ್ಮ ಪಾರ್ಟ್ನರ್‌ ಆಯ್ಕೆಯಲ್ಲಿ ತುಂಬಾನೇ ಜಾಗರೂಕರಾಗಿರಬೇಕು. ಕುರುಡಾಗಿ ಯಾರನ್ನೂ ನಂಬಲು ಹೋಗಬೇಡಿ. ನಿಷ್ಠಾವಂತ ವ್ಯಕ್ತಿಗಳನ್ನು ಮಾತ್ರವೇ ಆಯ್ಕೆ ಮಾಡಿ. ಹೀಗಿದ್ದರೆ ಮಾತ್ರ‌ ನೀವು ನಿಮ್ಮ ಉದ್ಯಮದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಪಾರ್ಟ್ನರ್‌ನ ತಪ್ಪು ಆಯ್ಕೆಯಿಂದ ನೀವು ನಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದಿದ್ದಾರೆ ಚಾಣಕ್ಯ.

ನಷ್ಟದ ಬಗ್ಗೆ ಭಯಪಡಬಾರದು:  ಉದ್ಯಮ ಅಂದ ಮೇಲೆ ಅಲ್ಲಿ ಲಾಭ ನಷ್ಟ ಇದ್ದೇ ಇರುತ್ತದೆ. ನಷ್ಟ ಅದ್ರೆ ಜೀವನವೇ ಸಂಪೂರ್ಣ ಹಾಳಾದಂತೆ ಎಂಬ ಭಯದಿಂದ ಅನೇಕರು ತಮ್ಮಲ್ಲಿ ಉತ್ತಮ ಸ್ಟಾರ್ಟ್‌ಅಪ್‌ ಯೋಜನಗಳಿದ್ದರೂ ಅದನ್ನು ಕಾರ್ಯಗತಗೊಳಿಸಲು ಹಿಂದೇಟು ಹಾಕುತ್ತಾರೆ. ಹೀಗಿದ್ದರೆ ಯಶಸ್ಸನ್ನು ಸಾಧಿಸಲು ಖಂಡಿತವಾಗಿಯೂ ಸಾಧ್ಯವಿಲ್ಲ. ಜೀವನದಲ್ಲಿ ಏನಾದರೂ ಸಾಧಿಸುವ ಯೋಚನೆಯಲ್ಲಿದ್ದರೆ ನಷ್ಟದ ಭಯವನ್ನು ಬಿಟ್ಟು ಒಂದೊಳ್ಳೆ ಸ್ಟಾರ್ಟ್‌ಅಪ್‌ ಆರಂಭಿಸಿ. ನಷ್ಟ ಹಾಗೂ ಸೋಲುಗಳಿಗೆ ಭಯಪಡಬೇಡಿ, ಅದರಿಂದ ಒಳ್ಳೆಯ ಪಾಠ ಕಲಿತು, ಇನ್ನಷ್ಟು ಬೆಳೆಯಲು ಪ್ರಯತ್ನಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುನಿಸು ಮರೆತು ಚಿಕ್ಕಪ್ಪನ ಬಗ್ಗೆ ಟ್ವೀಟ್ ಮಾಡಿದ ಜೂ ಎನ್​​ಟಿಆರ್ – Kannada News | Jr NTR tweet about Nandamuri Balakrishna’s speedy recovery

ನಂದಮೂರಿ (Nandamuri) ಕುಟುಂಬ ತೆಲುಗು ರಾಜ್ಯಗಳ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಅತ್ಯಂತ ಪ್ರಮುಖ ಕುಟುಂಬ. ಸುಮಾರು 50 ವರ್ಷಗಳಿಂದಲೂ ತೆಲುಗು ರಾಜ್ಯಗಳ ಸಿನಿಮಾ ಮತ್ತು ರಾಜಕೀಯದ ಮೇಲೆ ಹಿಡಿತ ಸಾಧಿಸಿವೆ, ಪ್ರಭಾವ ಬೀರಿವೆ. ಈಗಲೂ ಸಹ ಆಂಧ್ರ ಪ್ರದೇಶದಲ್ಲಿ ನಂದಮೂರಿ ಕುಟುಂಬ ಸ್ಥಾಪಿಸಿದ ಟಿಡಿಪಿ ಪಕ್ಷದಕ್ಕೇ ಸರ್ಕಾರ ಅಧಿಕಾರದಲ್ಲಿದೆ. ತೆಲುಗು ಚಿತ್ರರಂಗದಲ್ಲಿ ನಂದಮೂರಿ ಕುಟುಂಬದ ಹಲವು ನಟರು ಸ್ಟಾರ್​​ಗಳಾಗಿ ಮೆರೆಯುತ್ತಿದ್ದಾರೆ. ಆದರೆ ಈ ಕುಟುಂಬದಲ್ಲಿ ಎಲ್ಲವೂ ಸರಿ ಇಲ್ಲ. ವಿಶೇಷವಾಗಿ ಜೂ ಎನ್​​ಟಿಆರ್ ಮತ್ತು ಚಿಕ್ಕಪ್ಪ ಬಾಲಯ್ಯ ನಡುವೆ ಮುನಿಸು ಮನೆ ಮಾಡಿದೆ. ಆದರೆ ಜೂ ಎನ್​​ಟಿಆರ್ ಆ ಮುನಿಸು ಮರೆತು, ಚಿಕ್ಕಪ್ಪನ ಬಗ್ಗೆ ಟ್ವೀಟ್ ಮಾಡಿದ್ದಾರೆ.

ನಂದಮೂರಿ ಬಾಲಕೃಷ್ಣ ಅವರು ತಮ್ಮ ಸಿನಿಮಾದ ಚಿತ್ರೀಕರಣದ ವೇಳೆ ನಡೆದ ಅವಘಡದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಯ್ಯ ಅವರು ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಆಕ್ಷನ್ ಸೀನ್ ಶೂಟಿಂಗ್ ವೇಳೆ ಅವರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಮೊಣಕಾಲಿನ ಮೂಳೆ ಮತ್ತು ಮಾಂಸಖಂಡ ಹರಿದಿದ್ದು ಗಾಯದ ಸ್ವರೂಪ ತುಸು ಗಂಭೀರವಾಗಿದೆ ಎನ್ನಲಾಗಿದೆ. ಸಣ್ಣ ಶಸ್ತ್ರಚಿಕಿತ್ಸೆಗೆ ಸಹ ಅವರು ಒಳಗಾಗಿದ್ದಾರೆ.

ಇದೀಗ ಜೂ ಎನ್​​ಟಿಆರ್ ಅವರು ಚಿಕ್ಕಪ್ಪನ ಆರೋಗ್ಯದ ಕುರಿತು ಕಾಳಜಿ ವ್ಯಕ್ತಪಡಿಸಿದ್ದು, ಬಾಲಯ್ಯ ಬಗ್ಗೆ ಟ್ವೀಟ್ ಮಾಡಿದ್ದಾರೆ, ‘ಬಾಲಯ್ಯ ಚಿಕ್ಕಪ್ಪ, ಬೇಗ ಗುಣಮುಖರಾಗಿ. ನೀವು ಬೇಗನೆ ಚೇತರಿಸಿಕೊಳ್ಳಲಿ ಮತ್ತು ನಿಮಗೆ ಉತ್ತಮ ಆರೋಗ್ಯವನ್ನು ಬಯಸುತ್ತೇವೆ. ನೀವು ಪೂರ್ಣ ಫಾರ್ಮ್‌ನಲ್ಲಿ ಮತ್ತೆ ಘರ್ಜಿಸುವುದನ್ನು ನೋಡಲು ಎದುರು ನೋಡುತ್ತಿದ್ದೇನೆ’ ಎಂದು ಜೂ ಎನ್​​ಟಿಆರ್ ಹೇಳಿದ್ದಾರೆ.

ಇದನ್ನೂ ಓದಿ:‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?

ಅಸಲಿಗೆ ಜೂ ಎನ್​ಟಿಆರ್ ಹಾಗೂ ಬಾಲಯ್ಯ ನಡುವೆ ಕಳೆದ ಕೆಲ ವರ್ಷಗಳಿಂದಲೂ ಭಿನ್ನಾಭಿಪ್ರಾಯವಿದೆ. ಬಾಲಯ್ಯ ಅಂತೂ ಕೆಲವು ಬಾರಿ ಬಹಿರಂಗವಾಗಿಯೂ ಜೂ ಎನ್​​ಟಿಆರ್ ವಿರುದ್ಧ ಮಾತನಾಡಿದ್ದಿದೆ. ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅನ್ನು ರಾಜಕೀಯವಾಗಿ ಬೆಳೆಸುವ ಉದ್ದೇಶದಿಂದ ಜೂ ಎನ್​​ಟಿಆರ್ ಅವರನ್ನು ಪಕ್ಷದಿಂದ, ಕುಟುಂಬದಿಂದ ದೂರ ಇರಿಸಲಾಗಿದೆ ಎನ್ನಲಾಗುತ್ತಿದೆ. ನಾರಾ ಲೋಕೇಶ್, ಬಾಲಯ್ಯ ಅವರ ಅಳಿಯ ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ – Kannada News | Karnataka Cabinet Expansion: MLC Rajendra Rajanna Meets Leaders in Delhi.

ಬೆಂಗಳೂರು, ಜು.21: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯು ಈ ವಾರದಲ್ಲಿ ನಡೆಯಲಿದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೇಂದ್ರ ರಾಜಣ್ಣ, “ಇವತ್ತು ಅಥವಾ ನಾಳೆ ಸಚಿವ ಸಂಪುಟ ವಿಸ್ತರಣೆಯಾಗುವ ಬಗ್ಗೆ ಮಾಹಿತಿ ಇದೆ. ಈ ವಾರದಲ್ಲಿ ಸಂಪುಟ ವಿಸ್ತರಣೆಯಾಗುವುದು ಖಚಿತ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಜೇಂದ್ರ ರಾಜಣ್ಣ, ತಮ್ಮ ದೆಹಲಿ ಭೇಟಿಯ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ. “ನನ್ನ ತಂದೆಯವರಿಗೆ ಮತ್ತೊಮ್ಮೆ ಅವಕಾಶ ನೀಡುವಂತೆ ನಾನು ಕೋರುತ್ತೇನೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ, ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀ ಪ್ರಸಾದ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಿ, ಈ ಸಂದರ್ಭದಲ್ಲಿ ತನ್ನ ಬೇಡಿಕೆಯನ್ನು ಅವರ ಮುಂದಿಡಲು ಯೋಜಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್ – Kannada News | Bengaluru court Again summons Priyank Kharge, Mohammed Nalapad over defamatory remarks against RSS

ಬೆಂಗಳೂರು, (ಜುಲೈ 21): ಆರ್​​​ಎಸ್​​ಎಸ್​​​ (Rashtriya Swayamsevak Sangh) ನೋಂದಣಿಗೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೋರ್ಟ್ ಮತ್ತೊಮ್ಮೆ ಸಮನ್ಸ್ (Court Summons) ನೀಡಿದೆ. ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇಲೆ ಬೆಂಗಳೂರಿನ (Bengaluru) ಸಿದ್ದಾಪುರದ ತೇಜಸ್ ಗೌಡ (Tejas Gowda) ಎಂಬುವರು ನೀಡಿದ ದೂರಿನ ಮೇರೆಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ (Mohammed Nalapad) ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್​ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ಆಗಸ್ಟ್ 1ರಂದು ಖುದ್ದಾಗಿ ಹಾಜರಾಗುವಂತೆ ಆದೇಶ ಹೊರಡಿಸಿದೆ.

ಆರ್​ಎಸ್​ಎಸ್​​ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ಎ.ತೇಜಸ್ ಎಂಬುವರು ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಈ ಹಿಂದೆಯೂ ಸಹ ಕೋರ್ಟ್​ ಸಮನ್ಸ್ ಜಾರಿ ಮಾಡಿತ್ತು. ಆದ್ರೆ, ಈ ಹಿಂದೆ ನೀಡಿದ್ದ ಸಮನ್ಸ್ ಜಾರಿಗೆ ಪೊಲೀಸರು ವಿಫಲರಾಗಿದ್ದರು. ಹೀಗಾಗಿ ಮತ್ತೊಮ್ಮೆ ಕೋರ್ಟ್, ಸಮನ್ಸ್ ಜಾರಿ ಮಾಡಿದೆ.

ಆಗಸ್ಟ್ 1ರಂದು ಖುದ್ದಾಗಿ ಹಾಜರಾಗಲು ಆದೇಶ

ಬೆಂಗಳೂರಿನ 42ನೇ ಎಸಿಜೆಎಂ (ACJM) ಕೋರ್ಟ್ ಈ ಆದೇಶ ನೀಡಿದ್ದು, ಆಗಸ್ಟ್ 1ರಂದು ಸಚಿವ ಪ್ರಿಯಾಂಕ್ ಖರ್ಗೆ (A1) ಮತ್ತು ಮೊಹಮ್ಮದ್ ನಲಪಾಡ್ (A3) ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ. ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಈ ಸಮನ್ಸ್ ಜಾರಿಗೊಳಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಸಚಿವ ಪ್ರಿಯಾಂಕ್ ಖರ್ಗೆ ಅವರು 2025ರ ಅ.14ರಂದು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎಂಬ ಆರೋಪವಿದೆ. ಇನ್ನು ಮೊಹಮ್ಮದ್ ನಲಪಾಡ್ ಅವರು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸಂಘದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ದೂರಲಾಗಿತ್ತು. ಈ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ಘನತೆಗೆ ಧಕ್ಕೆ ತಂದಿವೆ ಎಂದು ಬೆಂಗಳೂರಿನ ಸಿದ್ದಾಪುರದ ನಿವಾಸಿ ಎ. ತೇಜಸ್ ಗೌಡ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯವು ಈಗ ಖುದ್ದು ವಿಚಾರಣೆಗೆ ಹಾಜರಾಗಲು ಆಗಸ್ಟ್ 1ರಂದು ಗಡುವು ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು? – Kannada News | People opinion about Karavali movie Watch video

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ ಆಗುವ ಮುಂಚೆ ಚಿತ್ರತಂಡವು ಹಲವೆಡೆ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸುತ್ತಿದೆ. ಈಗಾಗಲೇ ಮಂಗಳೂರು ಇನ್ನಿತರೆ ಕಡೆ ಪೇಯ್ಡ್ ಪ್ರೀಮಿಯರ್ ಪ್ರದರ್ಶಿಸಲಾಗಿದ್ದು, ಇತ್ತೀಚೆಗೆ ಶಿವಮೊಗ್ಗದಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ವೇಳೆ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version