ದಿ ಹಂಡ್ರೆಡ್ ಲೀಗ್ನಿಂದ ಜೇಕಬ್ ಬೆಥೆಲ್ ಔಟ್ – Kannada News | Jacob bethell Ruled Out of The Hundred
ಇಂಗ್ಲೆಂಡ್ ತಂಡದ ಉದಯೋನ್ಮುಖ ಆಲ್‌ರೌಂಡರ್ ಜೇಕಬ್ ಬೆಥೆಲ್ ಬಲ ಮೊಣಕಾಲಿನ ಗಾಯದ ಕಾರಣದಿಂದಾಗಿ 2026ರ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಈ ವರ್ಷದ ಟೂರ್ನಿಯಲ್ಲಿ ಬರ್ಮಿಂಗ್ಹ್ಯಾಮ್ ಫೀನಿಕ್ಸ್ ತಂಡವನ್ನು ಮುನ್ನಡೆಸಬೇಕಾಗಿದ್ದ ಬೆಥೆಲ್ ಅವರ ಅನುಪಸ್ಥಿತಿ, ಟೂರ್ನಿ ಆರಂಭಕ್ಕೂ ಮುನ್ನವೇ ಫ್ರಾಂಚೈಸಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಗಾಯದ ಹಿನ್ನಲೆ: ಭಾರತದ ವಿರುದ್ಧ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಕದಿನ ಸರಣಿಯ ವೇಳೆ ಜೇಕಬ್ ಬೆಥೆಲ್ ಗಾಯಗೊಂಡಿದ್ದರು. ಸರಣಿಯ ಅಂತಿಮ ಪಂದ್ಯದಲ್ಲಿ 91 ರನ್ ಬಾರಿಸಿ ಹಾಗೂ 1 ವಿಕೆಟ್ ಪಡೆದು…