ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ
ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress) ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ…