Headlines

ಮುಂಬೈನಲ್ಲಿ ರೆಸಾರ್ಟ್ ರಾಜಕೀಯ ಶುರು; ಶಿಂಧೆ ಬಣದ ಶಿವಸೇನೆ ಕಾರ್ಪೋರೇಟರ್​​ಗಳು ಫೈವ್ ಸ್ಟಾರ್​​ ಹೋಟೆಲ್‌ಗೆ ಶಿಫ್ಟ್ – Kannada News | Resort politics returns to Mumbai as Eknath Shinde Shiv Sena moves corporators to 5 star hotel

ಮುಂಬೈ, ಜನವರಿ 17: ಮಹಾರಾಷ್ಟ್ರದ ಮುಂಬೈ ಮಹಾನಗರ ಪಾಲಿಕೆ ಚುನಾವಣೆ (BMC Election) ನಡೆದು ನಿನ್ನೆ ಮತ ಎಣಿಕೆ ನಡೆದಿದೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಿಜೆಪಿಗೆ ಬಹುಮತ ಸಿಕ್ಕಿಲ್ಲ. ಹೀಗಾಗಿ, ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆಯ (ಶಿಂಧೆ ಬಣ) ಕಾರ್ಪೋರೇಟರ್​​ಗಳ ಬೆಂಬಲ ಬಿಜೆಪಿಗೆ ಅತ್ಯಗತ್ಯ. ಹೀಗಾಗಿ, ಶಿವಸೇನೆಯ ಕಾರ್ಪೋರೇಟರ್​​ಗಳನ್ನು ಬೇರೆ ಪಕ್ಷದವರು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಹುದು ಎಂಬ ಭಯದಿಂದ ಏಕನಾಥ್ ಶಿಂಧೆ ತಮ್ಮ ಪಕ್ಷದ ಕಾರ್ಪೋರೇಟರ್​​ಗಳನ್ನು ಬಾಂದ್ರಾದ ಫೈವ್ ಸ್ಟಾರ್ ಹೋಟೆಲ್​ಗೆ ಶಿಫ್ಟ್ ಮಾಡುವ ಮೂಲಕ ರೆಸಾರ್ಟ್…

Read More

ಚಳಿಗಾಲದಲ್ಲಿ ಈ ಆಹಾರಗಳ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಹುದು ಎಚ್ಚರ! – Kannada News | Bad Cholesterol: Winter Foods That Can Increase LDL

ಚಳಿಗಾಲದಲ್ಲಿ ಆಹಾರ ಪದ್ಧತಿಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ ಜನ ಬೇಸಿಗೆಗಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಅದರಲ್ಲಿಯೂ ಕರಿದ ಆಹಾರ ಮತ್ತು ಸಿಹಿತಿಂಡಿಗಳ ಸೇವನೆ ಹೆಚ್ಚಾಗುತ್ತದೆ. ಆದರೆ ಈ ರೀತಿಯ ಆಹಾರಗಳ ಸೇವನೆ ಕೆಟ್ಟ ಕೊಲೆಸ್ಟ್ರಾಲ್ (Bad Cholesterol) ಅನ್ನು ತ್ವರಿತವಾಗಿ ಹೆಚ್ಚಿಸಬಹುದು ಎಂಬುದನ್ನು ಮರೆಯಬಾರದು. ಅದಕ್ಕೂ ಮೊದಲು ಕೊಲೆಸ್ಟ್ರಾಲ್ ಹೆಚ್ಚಾಗುವುದಕ್ಕೆ ಕಾರಣವೇನು, ಯಾಕೆ ಈ ಸಮಯದಲ್ಲಿ ಜನ ಹೆಚ್ಚು ಹೆಚ್ಚು ಆಹಾರ ಸೇವನೆ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ….

Read More

ಬಾಗಲಕೋಟೆ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ; ಇಬ್ಬರು ಪೊಲೀಸ್ ಆಫೀಸರ್ಸ್ ಎತ್ತಂಗಡಿ

ಬಾಗಲಕೋಟೆ, ಏಪ್ರಿಲ್​ 05: ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ (By-election) ಗೆಲ್ಲೋದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ಪ್ರತಿತಂತ್ರ ಹೂಡುತ್ತಿವೆ. ಈ ಮಧ್ಯೆ ನಿನ್ನೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಘಟಕದಿಂದ ಕರಪತ್ರ ಹಂಚಿಕೆ ಆರೋಪ ಕೇಳಿಬಂದಿತ್ತು. ದೊಡ್ಡ ಹೈಡ್ರಾಮಾವೇ ನಡೆದಿತ್ತು. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ NSUI ಸಂಘಟನೆ ಅಪಪ್ರಚಾರ ಮಾಡಿದ ಆರೋಪ…

Read More

ಹಾರ್ಮುಜ್ ನಂತರ ಮತ್ತೊಂದು ಜಲಸಂಧಿ ಕಂಟಕ; ಜಗತ್ತಿಗೆ ಕಾದಿದೆ ಡಬಲ್ ಶಾಕ್

ನವದೆಹಲಿ, ಮಾರ್ಚ್ 29: ಇರಾನ್ ಯುದ್ಧ ಶುರುವಾದ ಬಳಿಕ ಎಲ್ಲರ ಗಮನ ಹಾರ್ಮುಜ್ ಜಲಸಂಧಿಯತ್ತ (Strait of Hormuz) ನೆಟ್ಟಿದೆ. ಗಲ್ಫ್ ರಾಷ್ಟ್ರಗಳಿಂದ ಬರುವ ತೈಲ ಹಡಗುಗಳಿಗೆ ಇರಾನ್ ತಡೆ ಹಾಕಿದೆ. ಇದರಿಂದ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುವಂತಾಗಿದೆ. ಹಾರ್ಮುಜ್ ಜಲಸಂಧಿ ಮಾರ್ಗವನ್ನು ಮುಕ್ತಗೊಳಿಸಲು ಅಮೆರಿಕ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಪರ್ಷಿಯನ್ ಗಲ್ಫ್ ಮತ್ತು ಅರೇಬಿಯನ್ ಸಮುದ್ರಕ್ಕೆ ಕೊಂಡಿಯಾಗಿರುವ ಈ ಜಲಸಂಧಿ ಮೂಲಕ ವಿಶ್ವದ ಶೇ. 20ರಷ್ಟು ತೈಲವು ಹಡಗುಗಳಿಂದ ಸಾಗಿ ಹೋಗುತ್ತದೆ. ಇದೇ ಹೊತ್ತಲ್ಲಿ ಈಗ…

Read More

ಮಂಡ್ಯ: ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ, ಅಧ್ಯಕ್ಷರ ವಿರುದ್ಧ ಆಕ್ರೋಶ! – Kannada News | Mandya: High Drama at KR Pete Congress Meeting as Workers Demand District President’s Ouster

ಮಂಡ್ಯ, ಜುಲೈ 28: ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ ‘ಸಂಘಟನಾ ಸೃಜನ ಅಭಿಯಾನ’ ಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ತಾಲೂಕಿನಲ್ಲಿ ಸ್ಪಂದಿಸುವ ನಾಯಕರೇ ಇಲ್ಲ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಜೆಡಿಎಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು ನಾಯಕರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು. ಎಐಸಿಸಿ ವೀಕ್ಷಕ ಸೈಮನ್ ಅಲೆಕ್ಸ್ ಹಾಗೂ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಮ್ಮುಖದಲ್ಲೇ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವಂತೆ ಪಟ್ಟು ಹಿಡಿದರು. ಹೊಸ ಅಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹಿಸಲು ಬಂದಿರುವುದಾಗಿ ನಾಯಕರು ಸಮಜಾಯಿಷಿ…

Read More