LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್
ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್ಗಳನ್ನು ಆಡಲಾಗದೆ, ಕೇವಲಮ 141 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…