ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ – Kannada News | Karnataka Weather Today: Light Rain in Some Areas, Rising Temperatures
ಬೆಂಗಳೂರು, ಫೆ.26: ಕರ್ನಾಟಕದಲ್ಲಿ ಇಂದು (ಫೆಬ್ರವರಿ 26, 2026) ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ…