ಹನುಮನ ಭಕ್ತರ ಗಮನಕ್ಕೆ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿಗೆ ಬರುವ ಭಕ್ತರಿಗೆ ಸಮಯ ನಿಗದಿ – Kannada News | New Rules for devotees, timing Set to Koppal anjanadri hanuman darshan Over temperature
ಕೊಪ್ಪಳ, (ಏಪ್ರಿಲ್ 16): ಆಂಜನೇಯನ ಜನ್ಮಸ್ಥಳ ಕೊಪ್ಪಳದ (Koppal) ಅಂಜನಾದ್ರಿಯಲ್ಲಿ (anjanadri Betta) ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಬೆಟ್ಟ ಏರುವ ಭಕ್ತರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗುತ್ತಿದ್ದು, ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೊಪ್ಪಳ ಜಿಲ್ಲಾಡಳಿತ, ಮಧ್ಯಾಹ್ನದ ವೇಳೆ ಬೆಟ್ಟ ಏರುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ಬಳಿಕ ಮಾತ್ರ ಭಕ್ತರಿಗೆ ಬೆಟ್ಟ ಏರಲು ಅವಕಾಶ…