ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ಗೆ ಅಧಿಕೃತ ಪಟ್ಟಾಭಿಷೇಕ – Kannada News | DK Shivakumar Gives Flag to New KPCC President BK Hariprasad
ಬೆಂಗಳೂರು, (ಜೂನ್ 21): ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಇಂದು (ಜೂನ್ 21) ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಕೆಪಿಸಿಸಿ ಪಟ್ಟಾಭಿಷೇಕ ಮಾಡಲಾಯ್ತು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಹಿರಿಯ ಕಾರ್ಯಕರ್ತ ಹರಿಪ್ರಸಾದ್ಗೆ ಅಧಿಕಾರ ಹಸ್ತಾಂತರಿಸಿದ್ದೇನೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ ….