Headlines

ಚುನಾವಣಾ ಆಯುಕ್ತರ ನೇಮಕಾತಿಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ – Kannada News | No reason to doubt Prime Minister Central Government defends Election Commissioner appointment in Supreme Court

ನವದೆಹಲಿ, ಜುಲೈ 31: ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ, ಕೇಂದ್ರ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯ ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿಯವರ ಪಾತ್ರವನ್ನು ಶಂಕಿಸಲು ಯಾವುದೇ ಕಾರಣವಿಲ್ಲ ಎಂದು ಸರ್ಕಾರ ಸುಪ್ರೀಂ ಕೋರ್ಟ್​ಗೆ (Supreme Court) ತಿಳಿಸಿದೆ. “ಪ್ರಧಾನಮಂತ್ರಿಯವರ ಹುದ್ದೆಗೆ ತನ್ನದೇ ಆದ ಸಾಂವಿಧಾನಿಕ ಪವಿತ್ರತೆ ಇದೆ. ಒಂದು ವೇಳೆ ಪ್ರಧಾನಿಯವರ…

Read More

ಕಾರವಾರ: ಭಾರಿ ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ – Kannada News | Coastal Police Heroic Rescue: Youth Saved from Drowning at Karwar Tagore Beach

ಕಾರವಾರ ಜು.17: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳ ಆರ್ಭಟ ತೀವ್ರಗೊಂಡಿದೆ. ಇಂತಹ ಪ್ರಾಣಾಪಾಯದ ಸನ್ನಿವೇಶದಲ್ಲಿ ಕಾರವಾರದ ಪ್ರಸಿದ್ಧ ಟಾಗೋರ್ ಕಡಲತೀರದಲ್ಲಿ (Tagore Beach) ಕಡಲಿಗೆ ಇಳಿದು ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಕರಾವಳಿ ಕಾವಲು ಪಡೆಯ ಪೊಲೀಸರು ಅತ್ಯಂತ ಸಾಹಸಿಕವಾಗಿ ರಕ್ಷಿಸಿದ್ದಾರೆ. ಕಾರವಾರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಸಮುದ್ರ ತೀವ್ರವಾಗಿ ಉಕ್ಕಿ ಹರಿಯುತ್ತಿದ್ದು, ಅಲೆಗಳ ರಭಸ ಹೆಚ್ಚಾಗಿದೆ. ಈ ವೇಳೆ ಟಾಗೋರ್ ಕಡಲತೀರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಯಾರಿಗೂ…

Read More

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. 2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ…

Read More

35 ವರ್ಷದ ನಂತರ ಗರ್ಭಧರಿಸುವುದು ಸುರಕ್ಷಿತವೇ? ತಜ್ಞರು ನೀಡಿರುವ ಮಹತ್ವದ ಸಲಹೆ ನಿಮಗಾಗಿ – Kannada News | Advanced Maternal Age: Gynecologist Explains Safe Pregnancy After 35

ಇತ್ತೀಚಿನ ದಿನಗಳಲ್ಲಿ ಉದ್ಯೋಗ, ಕುಟುಂಬ ಹಾಗೂ ಇತರ ಜವಾಬ್ದಾರಿಗಳ ಕಾರಣದಿಂದ ಮಹಿಳೆಯರಲ್ಲಿ ಅನೇಕರು, 35 ವರ್ಷಗಳ ನಂತರ ಗರ್ಭಧಾರಣೆಗೆ ಯೋಜನೆ ಮಾಡುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಆರೋಗ್ಯಕರ ಗರ್ಭಧಾರಣೆ ಸಾಧ್ಯವಾದರೂ, ಕೆಲವು ಆರೋಗ್ಯದ ಅಪಾಯಗಳಿರುವುದರಿಂದ ವೈದ್ಯರ ಮೇಲ್ವಿಚಾರಣೆ ಅತ್ಯಗತ್ಯ. ಹಾಗಾದರೆ 35 ವರ್ಷದ ನಂತರ ಗರ್ಭಧಾರಣೆ (Pregnancy) ಮಾಡುವುದರಿಂದ ಯಾವ ರೀತಿಯ ಸಮಸ್ಯೆಗಳಾಗಬಹುದು ಮತ್ತು ಈ ಸಮಯದಲ್ಲಿ ಯಾವ ರೀತಿಯ ಅಪಾಯಗಳನ್ನು ತಾಯಿ ಮಗು ಎದುರಿಸಬೇಕಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ತಜ್ಞರ ಪ್ರಕಾರ, 35 ವರ್ಷಗಳ ನಂತರದ…

Read More

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…

Read More

ಅಮೃತಧಾರೆ: ಹೆಣ್ಣಿನ ಕಣ್ಣೀರು ಯುದ್ಧದ ಆರಂಭ; ಜೆಡಿಗೆ ಮಲ್ಲಿಯ ಎಚ್ಚರಿಕೆ

ಜೀ ಕನ್ನಡದ ‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಹೊಸ ಹೊಸ ತಿರುವುಗಳು ಎದುರಾಗುತ್ತಾ ಇವೆ. ಈಗ ಮಲ್ಲಿ ಮದುವೆ ಸಂಭ್ರಮ. ಈ ಮಲ್ಲಿ ಮದುವೆಯಲ್ಲಿ ಹಲವು ಡ್ರಾಮಾಗಳು ನಡೆದಿವೆ ಎಂದರೂ ತಪ್ಪಾಗಲಾರದು. ಏಕೆಂದರೆ ಮಲ್ಲಿ ಮದುವೆ ಮಾಡಲು ಪ್ಲ್ಯಾನ್ ಮಾಡಿದ್ದು ಜೆಡಿ. ತಾನೇ ಛೂ ಬಿಟ್ಟ ವ್ಯಕ್ತಿ ಜೊತೆ ಮದುವೆ ನಡೆಸೋದು ಜೆಡಿ ಪ್ಲ್ಯಾನ್ ಆಗಿತ್ತು. ಕೊನೆ ಕ್ಷಣದಲ್ಲಿ ಮದುವೆಯಿಂದ ಆ ವ್ಯಕ್ತಿಯನ್ನು ಓಡಿಸೋದು ಪ್ಲ್ಯಾನ್ ಆಗಿತ್ತು. ಆದರೆ, ಪ್ಲ್ಯಾನ್ ಉಲ್ಟಾ ಆಗಿದೆ, ಅಷ್ಟೇ ಅಲ್ಲ, ದೊಡ್ಡ ಎಚ್ಚರಿಕೆ…

Read More

ಆಸ್ತಿ ವರ್ಗಾವಣೆಗೆ 9,950 ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ – Kannada News | Hagaraga Gram Panchayat Secretary Vedang Arrested by Lokayukta in Kalaburagi Bribe Case

ಕಲಬುರಗಿ ಆ. 4: ಖಾಲಿ ನಿವೇಶನದ ಆಸ್ತಿ ವರ್ಗಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದಾಗ ಕಲಬುರಗಿ ತಾಲೂಕಿನ ಹಾಗರಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೇದಾಂಗ್ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್‌ ಆಗಿ ಬಿದ್ದಿದ್ದಾರೆ. ಕಿಶನ್ ಪವಾರ್ ಅವರ ಹೆಸರಿನಲ್ಲಿದ್ದ ಖಾಲಿ ನಿವೇಶನವನ್ನು ಅವರ ಮರಣದ ನಂತರ ಕುಟುಂಬದವರ ಹೆಸರಿಗೆ ವರ್ಗಾಯಿಸಲು ಅರ್ಜಿ ಸಲ್ಲಿಸಲಾಗಿತ್ತು. ಮರಣ ಪ್ರಮಾಣಪತ್ರ ಹಾಗೂ ಅಗ್ರಿಕಲ್ಚರಲ್/ಸ್ಟಾಂಪ್ ಪತ್ರಗಳು ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಿದ್ದರೂ, ಕಾರ್ಯದರ್ಶಿ ವೇದಾಂಗ್ ಅವರು ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ…

Read More

ಅನಿವಾರ್ಯವಲ್ಲದಿದ್ದರೆ ಇರಾನ್​​ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸೂಚನೆ – Kannada News | India issued travel advisory to Indian citizens to avoid non essential travel to Iran

ನವದೆಹಲಿ, ಜನವರಿ 5: ಮುಂದಿನ ಸೂಚನೆ ಬರುವವರೆಗೂ ಇರಾನ್‌ಗೆ ಅನಿವಾರ್ಯವಲ್ಲದಿದ್ದರೆ ಪ್ರಯಾಣವನ್ನು ಮಾಡದಂತೆ ಭಾರತದ ವಿದೇಶಾಂಗ ಸಚಿವಾಲಯ ಭಾರತೀಯ ನಾಗರಿಕರಿಗೆ ಸೂಚಿಸಿದೆ. ಇರಾನ್‌ನಲ್ಲಿರುವ (Iran) ಭಾರತೀಯ ನಾಗರಿಕರು ಕೂಡ ಎಚ್ಚರಿಕೆಯಿಂದಿರಬೇಕು, ಪ್ರತಿಭಟನೆಗಳ ಪ್ರದೇಶಗಳಲ್ಲಿ ಓಡಾಡಬಾರದು, ಏನೇ ಸಮಸ್ಯೆಯಾದರೂ ಅಥವಾ ಎಲ್ಲ ರೀತಿಯ ಸೂಚನೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಗಮನಿಸುತ್ತಿರಬೇಕು ಎಂದು ಸರ್ಕಾರ ಹೇಳಿದೆ. ರೆಸಿಡೆಂಟ್ ವೀಸಾಗಳ ಮೇಲೆ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು ಈಗಾಗಲೇ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳದಿದ್ದರೆ…

Read More

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ – Kannada News | High Command Summons: CM Siddaramaiah To Visit Delhi Tonight Amid Cabinet Reshuffle and Leadership Talks

ಬೆಂಗಳೂರು, ಮೇ 25: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಬಿಸಿಬಿಸಿ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯಗೆ (Siddaramaiah) ಹೈಕಮಾಂಡ್​​ನಿಂದ ಬುಲಾವ್​​ ಬಂದಿರೋದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸಂಜೆ 7 ಗಂಟೆಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, HALನಿಂದ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ. ರಾತ್ರಿ 9.30ಕ್ಕೆ ಅವರು ದೆಹಲಿ ತಲುಪಲಿದ್ದು, ನಾಳೆ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ಏನೆಲ್ಲ ಚರ್ಚೆ ಸಾಧ್ಯತೆ? ನಾಳೆ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್‌…

Read More