ರಾಜೀನಾಮೆ ಸುದ್ದಿ ಬೆನ್ನಲ್ಲೇ ತಮ್ಮ ಮಹತ್ವಕಾಂಕ್ಷಿ ಯೋಜನೆ ನೆನೆದ ಸಿದ್ದರಾಮಯ್ಯ, ಇದು ವಿದಾಯದ ಸುಳಿವೇ?
ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳೆವಣಿಗೆಗಳು ಗರಿಗೆದರಿದ್ದು, ನಾಯಕತ್ವ ಬದಲಾವಣೆ ಖಚಿತವಾಗಿದೆ. ನಿನ್ನೆ (ಮೇ 26) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆ ಬಳಿಕ ಸಿದ್ದರಾಮಯ್ಯನವರು (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಇದಕ್ಕೆ ಪೂರಕವೆಂಬಂತೆ ಬೇರೆ ಬೇರೆ ವಿದ್ಯಮಾನಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುದ್ದಿಗಳ ನಡುವೆಯೇ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. 5…