ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…

Read More

ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ – Kannada News | Indian embassy in Iran issues fresh advisory for nationals amid unrest issues helpline numbers

ನವದೆಹಲಿ, ಜನವರಿ 14: ಇರಾನ್‌ನಲ್ಲಿ ಪ್ರತಿಭಟನೆಗಳು (Iran Protests) ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ತಮಗೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಕೂಡಲೇ ಇರಾನ್ ಬಿಟ್ಟು ಹೊರಡುವಂತೆ ಭಾರತೀಯ ರಾಯಭಾರ ಕಚೇರಿಯು ಸೂಚನೆ ನೀಡಿದೆ. ಇರಾನ್​ನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿ ಈ ಸೂಚನೆ ನೀಡಿದೆ. ಇರಾನ್‌ನಲ್ಲಿರುವ ಎಲ್ಲಾ ಭಾರತೀಯ…

Read More

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

‘ಟಾಕ್ಸಿಕ್’ ಸಿನಿಮಾನಲ್ಲಿ ‘ಗನ್ ಎಕ್ಸ್​ಪರ್ಟ್’ ಟಿಟಿಯಾನಾ ಹಾಟ್ ಅವತಾರ – Kannada News | Tetiana Gaidar acting in Toxic movie her poster got viral

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ದಿನಾಂಕ ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಸಿನಿಮಾ ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಯಶ್ ನಾಯಕನಾದರೂ ಈ ಸಿನಿಮಾ ಮಹಿಳಾ ಪ್ರಧಾನ ಸಿನಿಮಾ ಎಂಬ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿವೆ. ಸಿನಿಮಾದ ನಾಯಕಿಯರಾದ ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ನೀಡಿರುವ ಸಂದರ್ಶನಗಳಲ್ಲಿ ಈ ಬಗ್ಗೆ ಸೂಕ್ಷ್ಮವಾಗಿ ಹೇಳಿದ್ದಾರೆ. ಸಿನಿಮಾನಲ್ಲಿ ಐವರು ನಾಯಕಿಯರಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮತ್ತು ಹುಮಾ ಖುರೇಷಿ. ಇವರುಗಳ ಜೊತೆಗೆ ಕೆಲ ವಿದೇಶಿ…

Read More

ಕುದುರೆಯಾ? ಹೆಗ್ಗಣವಾ? ಹೊಸ ಸಿನಿಮಾ ಘೋಷಿಸಿದ ಡಾಲಿ ಧನಂಜಯ್ – Kannada News | Daali Dhananjay announce new movie but as producer

ಮದುವೆ ಆದ ಬಳಿಕ ಡಾಲಿ ಧನಂಜಯ್ (Daali Dhananjay) ಕಾಣೆ ಆಗಿದ್ದಾರೆ ಎಂಬುದು ಅಭಿಮಾನಿಗಳ ದೂರು. ಅಸಲಿಗೆ ಡಾಲಿ ಧನಂಜಯ್ ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಪ್ರಸ್ತುತ ಡಾಲಿ ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಅವುಗಳ ಬಿಡುಗಡೆ ದಿನಾಂಕ ಖಾತ್ರಿ ಆಗಿಲ್ಲ. ಇದೆಲ್ಲದರ ನಡುವೆ ಡಾಲಿ ಧನಂಜಯ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ನಾಯಕನಾಗಿ ಅಲ್ಲ ಬದಲಿಗೆ ನಿರ್ಮಾಪಕನಾಗಿ. ಡಾಲಿ ಧನಂಜಯ್ ಅವರು ‘ಡಾಲಿ ಪಿಕ್ಚರ್ಸ್’…

Read More

Video: ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ ಭಾರತೀಯ ಬೀದಿ ಬದಿ ವ್ಯಾಪಾರಿ – Kannada News | Indian street vendor gifts earrings to a foreign woman.

ಭಾರತೀಯರು (Indian) ವಿಶಾಲ ಹೃದಯದವರು. ಯಾರೇ ಬಂದರೂ ಅವರನ್ನು ಪ್ರೀತಿಯಿಂದ ಮಾತನಾಡಿಸಿ ಸತ್ಕರಿಸುವ ಗುಣ ನಮ್ಮದು. ಹೀಗಾಗಿ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ವಿದೇಶಿಗರು (foreigner) ಸಹಜವಾಗಿ ಮನಸೋಲುವುದಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ದೃಶ್ಯ. ಭಾರತೀಯ ಬೀದಿ ಬದಿ ವ್ಯಾಪಾರಿಯೊಬ್ಬ ವಿದೇಶಿ ಮಹಿಳೆಗೆ ಕಿವಿಯೋಲೆಯನ್ನು ಉಡುಗೊರೆಯಾಗಿ ನೀಡಿದ್ದಾನೆ. ಈ ವ್ಯಾಪಾರಿ ಫ್ರೀಯಾಗಿ ಕಿವಿಯೋಲೆ ಕೊಡುತ್ತಿದ್ದಂತೆ ವಿದೇಶಿ ಮಹಿಳೆಯ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಓಲಾ…

Read More

ಎಲ್​ಪಿಜಿ ಬಿಕ್ಕಟ್ಟು ಎದುರಿಸಲು ಹರ್ದೀಪ್ ಪುರಿ ಮತ್ತು ಜೈಶಂಕರ್ ಜೊತೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 10: ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಸಭೆ ನಡೆಸಿದರು. ಭಾರತದಲ್ಲಿ ಎಲ್​ಪಿಜಿ ಸರಬರಾಜು ಸರಿಯಾದ ರೀತಿಯಲ್ಲಿ ಇರುವುದನ್ನು ಖಾತ್ರಿಪಡಿಸಲು ಸರ್ಕಾರ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು…

Read More