Headlines

ಮತ್ತೆ ಹಾಡಲಿರುವ ಅರಿಜಿತ್ ಸಿಂಗ್, ನಿವೃತ್ತಿ ನಿರ್ಧಾರ ಮುರಿದಿದ್ದೇಕೆ? – Kannada News | Arijit Singh breaks his retirement for Awarapan 2 movie song

ಅರಿಜಿತ್ ಸಿಂಗ್ (Arijit Singh) ಭಾರತದ ಸೂಪರ್ ಸ್ಟಾರ್ ಗಾಯಕ. ಅವರಷ್ಟು ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಗಾಯಕ ಪ್ರಸ್ತುತ ಭಾರತದಲ್ಲಿಲ್ಲ. ಹಲವಾರು ಅದ್ಭುತ ಹಾಡುಗಳಿಗೆ ಧ್ವನಿ ನೀಡಿರುವ ಅರಿಜಿತ್, ಸಾವಿರಾರು ಹಿಟ್​​ ಹಾಡುಗಳನ್ನು ಹಾಡಿದ್ದಾರೆ. ಆದರೆ ಕೆಲ ತಿಂಗಳ ಹಿಂದೆ ಅರಿಜಿತ್ ಸಿಂಗ್ ಅವರು ಅಚಾನಕ್ಕಾಗಿ ಗಾಯನಕ್ಕೆ ನಿವೃತ್ತಿ ಘೋಷಣೆ ಮಾಡಿದರು. ತಾವು ಇನ್ನು ಮುಂದೆ ಸಿನಿಮಾಗಳಲ್ಲಿ ಹಾಡುವುದಿಲ್ಲ ಎಂದಿದ್ದರು. ಸ್ಟಾರ್ ನಟ ಆಮಿರ್ ಖಾನ್ ಸೇರಿ ಇನ್ನೂ ಹಲವರು ಅವರ ಮನವೊಲಿಸಲು ಯತ್ನಿಸಿದರಾದರೂ ಸಫಲರಾಗಿರಲಿಲ್ಲ….

Read More

ಸಿಎಂ ಡಿ.ಕೆ.ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​ – Kannada News | Belagavi DHO Issued Show Cause Notice for Failing to Arrange Advanced Life Support Ambulance During CM’s Visit

ಬೆಳಗಾವಿ ಡಿಹೆಚ್‌ಒಗೆ ಶೋಕಾಸ್​​ ನೋಟಿಸ್​​Image Credit source: Tv9 Kannada ಬೆಂಗಳೂರು, ಜುಲೈ 21: ಸಿಎಂ ಡಿ.ಕೆ. ಶಿವಕುಮಾರ್‌ ಬೆಳಗಾವಿ ಪ್ರವಾಸದ ವೇಳೆ ಡಿಹೆಚ್‌ಒ ಯಡವಟ್ಟು ಮಾಡಿದ್ದು, ಅಡ್ವಾನ್ಸ್ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ಮತ್ತು ತಜ್ಞ ವೈದ್ಯರ ನೇಮಿಸದೇ ಬೇಜವಾಬ್ದಾರಿ ತೋರಿರುವ ಆರೋಪ ಕೇಳಿಬಂದಿದೆ. ಸರ್ಕಾರ ನಿರ್ದೇಶನವಿದ್ದರೂ ಲೈಫ್‌ ಸಪೋರ್ಟ್ ಆ್ಯಂಬುಲೆನ್ಸ್ ನೀಡದೆ ಸಾಮಾನ್ಯ ಆ್ಯಂಬುಲೆನ್ಸ್ ನಿಯೋಜಿಸದ ಜೊತೆಗೆ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂಪರ್ಕ ಸಾಧಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ, ಸಿಎಂ ವಾಸ್ತವ್ಯ ಸ್ಥಳದಲ್ಲಿ ತಜ್ಞ ವೈದ್ಯರ…

Read More

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಆರೋಪ – Kannada News | Shivajinagar Footpath Clearance Turns Tense: BBMP Staff Allege Pepper Spray Attack During Anti Encroachment Drive

ಬೆಂಗಳೂರು, ಜುಲೈ 21: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ…

Read More

ಲಾಕ್ ಡೌನ್ ಲವ್, 5 ವರ್ಷ ಪ್ರಿಯಕರನನ್ನು ಸಾಕಿದ್ದ ಪ್ರಿಯತಮೆ: ಮದುವೆಯಾದ ವರ್ಷದಲ್ಲೇ ಗಂಡ ಪರಸ್ತ್ರೀಯೊಂದಿಗೆ ಪರಾರಿ! – Kannada News | Mangaluru Love Story Turns Bitter: Woman Alleges Husband Eloped with Another Woman Leaving 10 Month Old Baby

ಮಂಗಳೂರು, ಜುಲೈ 21: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪರಿಚಯವಾಗಿ ಅದು ಪ್ರೇಮಕ್ಕೆ ತಿರುಗಿ ಜೋಡಿಯೊಂದು ಮದುವೆಯಾದ ಪ್ರಕರಣವೊಂದು, ಇದೀಗ ಗಂಡ ಪರಸ್ತ್ರೀಯೊಂದಿಗೆ ಪರಾರಿಯಾಗುವುದರೊಂದಿಗೆ ಕಲಹಕ್ಕೆ ಕಾರಣವಾಗಿದೆ. ಈ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಾವೂರು ನಿವಾಸಿ ಲೋಲಾಕ್ಷಿ ಅವರ ಪತಿ ಪ್ರಜ್ವಲ್, 10 ತಿಂಗಳ ಮಗು ಇರುವಾಗಲೇ ಬೇರೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಕೋವಿಡ್ ಅವಧಿಯಲ್ಲಿ ಅಪಘಾತಕ್ಕೀಡಾಗಿದ್ದ ಪ್ರಜ್ವಲ್‌ಗೆ ಲೋಲಾಕ್ಷಿ ಐದು ವರ್ಷಗಳ ಕಾಲ ಚಿಕಿತ್ಸೆ ಕೊಡಿಸಿ, ತಮ್ಮ ಮನೆಯಲ್ಲೇ ಸಾಕಿ ನಂತರ 2025ರಲ್ಲಿ ಮದುವೆಯಾಗಿದ್ದರು. ಆದರೆ, ಮದುವೆಯಾಗಿ…

Read More

ಮದ್ಯದಂಗಡಿಗೆ ನುಗ್ಗಿದ ಚಿರತೆ, ಮೂವರ ಮೇಲೆ ಭೀಕರ ದಾಳಿ, 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ – Kannada News | Leopard attacks 3, enters liquor shop, 5 hour rescue ends terrifying ordeal

ಟೋಂಕ್, ಜುಲೈ 21: ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ಚಿರತೆ(Leopard)ಯೊಂದು ಮೂವರ ಮೇಲೆ ದಾಳಿ ನಡೆಸಿ, ಮದ್ಯದಂಗಡಿಯೊಂದರ ಒಳಗಡೆ ಆಶ್ರಯ ಪಡೆದ ಆತಂಕಕಾರಿ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯ ತೋಡರೈಸಿಂಗ್ ಪಟ್ಟಣದಲ್ಲಿ ನಡೆದಿದೆ. ಸುಮಾರು 5 ಗಂಟೆಗಳ ಕಾಲ ನಡೆದ ಸುದೀರ್ಘ ಕಾರ್ಯಾಚರಣೆಯ ನಂತರ ಅರಣ್ಯಾಧಿಕಾರಿಗಳು ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಸೋಮವಾರ ಬೆಳಗ್ಗೆ 8.45 ರ ಸುಮಾರಿಗೆ ತೋಡರೈಸಿಂಗ್ ಪಟ್ಟಣದ ಸಮೀಪದ ಪೊದೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ವಿಷಯ ತಿಳಿದು ಸ್ಥಳವನ್ನು ಪರಿಶೀಲಿಸಲು ಬಂದ ಅರಣ್ಯ ಇಲಾಖೆಯ ಸ್ವಯಂಸೇವಕ…

Read More

ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಿಸುತ್ತಿದ್ದಂತೆಯೇ ಪ್ರತ್ಯಕ್ಷವಾದ ಗರುಡ! – Kannada News | Garuda Circles Chennamma’s Memorial During Vishnu Sahasranama Chanting, Devotees Call It a Divine Sign

ಹಾಸನ, ಜುಲೈ 21: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಸಂಸ್ಕಾರ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಸೋಮವಾರ ನಡೆದಿದೆ. ಅದಾದ ನಂತರ ಸಮಾಧಿ ಇರುವ ಜಾಗದಲ್ಲಿ ರುದ್ರ, ಚಮಕ, ಗಾಯಿತ್ರಿ ಮಂತ್ರ ಹಾಗೂ ವಿಷ್ಣು ಸಹಸ್ರನಾಮ ಪಠಣ ಮಾಡಲಾಗಿದೆ. ವಿಷ್ಣು ಸಹಸ್ರನಾಮ ಪಠಿಸುತ್ತಿರುವಾಗ ಗರುಡ ಕಾಣಿಸಿದ್ದು, ಸಮಾಧಿ ಮೇಲೆ ಪ್ರದಕ್ಷಿಣೆ ಹಾಕಿ ಹೋಗಿರುವುದು ಅಚ್ಚರಿ ಮೂಡಿಸಿದೆ. ಚೆನ್ನಮ್ಮ ಅಪಾರ ದೈವ ಭಕ್ತೆಯಾಗಿದ್ದರು. ಪ್ರತಿನಿತ್ಯ ದೇವರ ಪೂಜೆ ವೇಳೇ ಶ್ಲೋಕಗಳನ್ನು ಪಠಿಸುತ್ತಿದ್ದರು….

Read More

TTD News: ತಿರುಪತಿಯಲ್ಲಿ ಭಕ್ತರಿಗೆ ಹೈಟೆಕ್ ‘ಕನ್ವೇಯರ್’ ಪ್ರಸಾದ ವಿತರಣೆ; TTDಯಿಂದ ಹೊಸ ಪ್ರಯೋಗ! – Kannada News | TTD’s New Tirumala Food Conveyor System: Faster Prasadam for Devotees

ಹೈಟೆಕ್ ‘ಕನ್ವೇಯರ್’ ಪ್ರಸಾದ ವಿತರಣೆ ತಿರುಮಲ: ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಶೀಘ್ರ ಹಾಗೂ ಸುಲಭವಾಗಿ ಆಹಾರ-ಪಾನೀಯ ತಲುಪಿಸಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಒಂದು ಹೊಸ ತಂತ್ರಜ್ಞಾನಾಧಾರಿತ ಹೆಜ್ಜೆಯನ್ನಿಟ್ಟಿದೆ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವ ಭಕ್ತರಿಗೆ ‘ಆಹಾರ ಪೂರೈಸುವ ಕನ್ವೇಯರ್ ವ್ಯವಸ್ಥೆ’ಯನ್ನು (Food Serving Conveyor System) ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಸಾಮಾನ್ಯ ದಿನಗಳಲ್ಲಿ ಹಾಗೂ ವಿಶೇಷ ಸಂದರ್ಭಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಪ್ರತಿದಿನ ಲಕ್ಷಕ್ಕೂ ಹೆಚ್ಚು ಭಕ್ತರು ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಾರೆ….

Read More

ಟೀಮ್ ಇಂಡಿಯಾಗೆ ವಿವಿಎಸ್​ ಲಕ್ಷ್ಮಣ್ ಹೆಡ್ ಕೋಚ್! – Kannada News | VVS Laxman to coach India on Zimbabwe

ಭಾರತ ಹಾಗೂ ಝಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಜುಲೈ 23, 2026 ರಿಂದ ಹರಾರೆಯಲ್ಲಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಕೋಚ್ ಆಗಿ ಕಾಣಿಸಿಕೊಳ್ಳುತ್ತಿರುವುದು ವಿವಿಎಸ್​ ಲಕ್ಷ್ಮಣ್. ಇಂಗ್ಲೆಂಡ್ ಪ್ರವಾಸದ ಸರಣಿ ಮುಗಿದ ಬೆನ್ನಲ್ಲೇ ಈ ಸರಣಿ ಆರಂಭವಾಗುತ್ತಿರುವುದರಿಂದ, ಬಿಸಿಸಿಐ ವಿಭಜಿತ-ಕೋಚಿಂಗ್ ಮಾದರಿಯನ್ನು ಅಳವಡಿಸಿಕೊಂಡಿದೆ. ಇದರ ಅಡಿಯಲ್ಲಿ ನಿಯಮಿತ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಅವರು ಮತ್ತೊಮ್ಮೆ ಟೀಮ್…

Read More

KIMS Recruitment 2026: ಕಿಮ್ಸ್ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನ – Kannada News | KIMS Bengaluru Recruitment 2026: 27 Technical and Clerk Jobs – Apply Now!

ಕಿಮ್ಸ್ ಆಸ್ಪತ್ರೆಯಲ್ಲಿ ಉದ್ಯೋಗವಕಾಶ ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ‘ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ’ (KIMSH) ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ರಾಜ್ಯ ಒಕ್ಕಲಿಗರ ಸಂಘದ ಆಡಳಿತಕ್ಕೊಳಪಟ್ಟ ಈ ಆಸ್ಪತ್ರೆಯಲ್ಲಿ ಖಾಲಿ ಇರುವ ಒಟ್ಟು 27 ತಾಂತ್ರಿಕ ಹಾಗೂ ಕ್ಲರ್ಕ್ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳು, ಅಗತ್ಯ ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ….

Read More

Karnataka Dam Water Level: ಆಲಮಟ್ಟಿಗೆ ಹರಿದುಬಂತು ಭಾರಿ ನೀರು, ಕಾವೇರಿ-ಕೃಷ್ಣಾ ಕೊಳ್ಳದ ಪ್ರಮುಖ ಡ್ಯಾಂಗಳಲ್ಲಿನ ಸ್ಥಿತಿಗತಿ ಇಲ್ಲಿದೆ! – Kannada News | Karnataka dam water level today almatti inflow surges to 46000 cusecs krs kabini tb hemavathi status

ಬೆಂಗಳೂರು, ಜುಲೈ 21: ರಾಜ್ಯದಾದ್ಯಂತ ಮಳೆಯ ವಾತಾವರಣ ಮುಂದುವರಿದಿದ್ದು, ಪ್ರಮುಖ ಜಲಾಶಯಗಳಿಗೆ ನೀರಿನ ಹರಿವು ಏರಿಕೆಯಾಗುತ್ತಿದೆ. ಕೃಷ್ಣಾ ನದಿ ಕೊಳ್ಳದ ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದರೆ, ಕಾವೇರಿ ಹಾಗೂ ತುಂಗಭದ್ರಾ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ರಮೇಣ ಸ್ಥಿರಗೊಳ್ಳುತ್ತಿದೆ. ಜುಲೈ 21ರ ಬೆಳಗಿನ ಅಂಕಿ-ಅಂಶಗಳ ಪ್ರಕಾರ ರಾಜ್ಯದ ಪ್ರಮುಖ 5 ಜಲಾಶಯಗಳ ನೀರಿನ ಮಟ್ಟ ಮತ್ತು ಸಂಗ್ರಹ ವಿವರ ಹೀಗಿದೆ. 1. ಆಲಮಟ್ಟಿ ಜಲಾಶಯ (ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ) ವಿಜಯಪುರ ಜಿಲ್ಲೆಯ ನಿಡಗುಂದಿ…

Read More