Headlines

ಕಲುಷಿತ ಕಾವೇರಿ ನೀರಿನ ಪೂರೈಕೆ: ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ – Kannada News | Bengaluru Residents Suffer from Contaminated Cauvery Water Supply in Katriguppe

ಬೆಂಗಳೂರು, ಜುಲೈ 21: ನಗರದ ದಕ್ಷಿಣ ನಗರ ಪಾಲಿಕೆಯ ಕತ್ರಿಗುಪ್ಪೆ ವಾರ್ಡ್‌ನಲ್ಲಿ ಕಾವೇರಿ ನೀರು ಕಲುಷಿತಗೊಂಡು ಪೂರೈಕೆಯಾಗುತ್ತಿದ್ದು, ನೂರಕ್ಕೂ ಹೆಚ್ಚು ಮನೆಗಳ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಪದೇ ಪದೇ ಪುನರಾವರ್ತಿತವಾಗುತ್ತಿರುವ ಈ ಸಮಸ್ಯೆಯಿಂದ ಕಾವೇರಿ ನೀರನ್ನು ನಂಬಿಕೊಂಡಿದ್ದ ಜನರಿಗೆ ದೊಡ್ಡ ಆಘಾತ ಉಂಟಾಗಿದೆ. ಕಲುಷಿತ ನೀರು ಮಣ್ಣು ಮಿಶ್ರಿತವಾಗಿದ್ದು, ಕೆಟ್ಟ ವಾಸನೆ ಹಾಗೂ ಕಪ್ಪು ಬಣ್ಣದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕುಡಿಯಲು ಅಥವಾ ಇತರೆ ಗೃಹಬಳಕೆಗೆ ನೀರನ್ನು ಉಪಯೋಗಿಸಲು ಭಯವಾಗುತ್ತಿದೆ…

Read More

Toxic Song: ‘ಟಾಕ್ಸಿಕ್’ ಚಿತ್ರದ ‘ಮನಮೋಹಕ..’ ಸಾಂಗ್ ರಿವೀಲ್; ಯಶ್-ತಾರಾ ಸುತಾರಿಯಾ ಕೆಮಿಸ್ಟ್ರಿಗೆ ಫ್ಯಾನ್ಸ್ ಫಿದಾ – Kannada News | Toxic Second Single Out: Yash and Tara Sutaria’s Striking Chemistry Wins Hearts in Manamohaka

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್​ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಈಗಾಗಲೇ ಬಿಡುಗಡೆಯಾಗಿ ಕೋಟ್ಯಂತರ ವೀಕ್ಷಣೆಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದ ಬೋಲ್ಡ್ ಅಂಡ್ ರೊಮ್ಯಾಂಟಿಕ್ ‘ತಬಾಹಿ’ ಹಾಡಿನ ಬೆನ್ನಲ್ಲೇ, ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಇಂದು (ಜುಲೈ 21) ಬೆಳಿಗ್ಗೆ 11.33ಕ್ಕೆ ರಿಲೀಸ್ ಆಗಿರುವ ‘ಮನಮೋಹಕ..’ ಸಾಂಗ್ ಇಂಟರ್ನೆಟ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದೆ. ಮೆಲೋಡಿ ಪ್ರಿಯರ ಮನಗೆದ್ದ ‘ಮನಮೋಹಕ’ ಮೊದಲ ಹಾಡು ‘ತಬಾಹಿ’ಯಲ್ಲಿ ಯಶ್ ಹಾಗೂ…

Read More

Book Brahma Sahityotsava 2026: ಆ.14ರಿಂದ ಬೆಂಗಳೂರಿನಲ್ಲಿ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ; 10 ದಿನಗಳ ಕಾಲ ಸಾಹಿತ್ಯ-ಸಾಂಸ್ಕೃತಿಕ ಸಂಭ್ರಮ! – Kannada News | BBLF 2026: Bengaluru’s Grand Literary and Cultural Festival – 10 Days of Free Events

ಬೆಂಗಳೂರು: ಸಾಹಿತ್ಯಾಸಕ್ತರು ಕಾತುರದಿಂದ ಕಾಯುತ್ತಿದ್ದ ‘ಬುಕ್ ಬ್ರಹ್ಮ ಸಾಹಿತ್ಯೋತ್ಸವ – 2026’ (BBLF 2026) ರ ಮೂರನೇ ಆವೃತ್ತಿಗೆ ವೇದಿಕೆ ಸಜ್ಜಾಗಿದೆ. ಕೋರಮಂಗಲದ ಪ್ರಸಿದ್ಧ ಸೇಂಟ್ ಜಾನ್ಸ್ ಸಭಾಂಗಣದ ಆವರಣದಲ್ಲಿ ಆಗಸ್ಟ್ 14 ರಿಂದ 23 ರವರೆಗೆ ಒಟ್ಟು 10 ದಿನಗಳ ಕಾಲ ಈ ಬೃಹತ್ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಬಾರಿ ಸಾಹಿತ್ಯ ಗೋಷ್ಠಿಗಳ ಜೊತೆಗೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಮಾರುಕಟ್ಟೆ ಹಾಗೂ ಪುಸ್ತಕ ಲೋಕ ಮುಂತಾದ ಹಲವು ಆಕರ್ಷಣೆಗಳನ್ನು ಹಮ್ಮಿಕೊಳ್ಳಲಾಗಿದೆ….

Read More

Video: ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆದ ವ್ಯಕ್ತಿ, ಕಾರಣ ಇದೇ ನೋಡಿ – Kannada News | A man who had a kurta stitched from a railway bedsheet

ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಇಲ್ಲೊಬ್ಬ ವ್ಯಕ್ತಿಯು ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆಗಿದ್ದಾನೆ. ಈ ಕುರ್ತಾ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ (western railway) ಎಂದು ಬರೆಯಲಾಗಿದೆ. ಹೌದು, ಈ ವ್ಯಕ್ತಿ ರೈಲ್ವೆಯಲ್ಲಿನ ಬೆಡ್ ಶೀಟ್ ನಿಂದಲೇ ಕುರ್ತಾ ಹೊಲಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ರಂಜಿತ್ ಸಿಂಗ್…

Read More

ರಾತ್ರಿ ವೇಳೆಯಲ್ಲಿ ಬಟ್ಟೆ ಒಗೆಯಬಾರದು ಏಕೆ? ಜ್ಯೋತಿಷ್ಯ ಮತ್ತು ಧಾರ್ಮಿಕ ಕಾರಣ ಇಲ್ಲಿದೆ – Kannada News | Why You Shouldn’t Wash and Dry Clothes at Night: Jyotish and Health Reasons

ರಾತ್ರಿ ವೇಳೆಯಲ್ಲಿ ಬಟ್ಟೆ ಒಗೆಯಬಾರದು ಏಕೆ?Image Credit source: Getty Images ಜ್ಯೋತಿಷ್ಯ ಶಾಸ್ತ್ರವು ದೈನಂದಿನ ಜೀವನದ ಪ್ರತಿಯೊಂದು ಸಣ್ಣಪುಟ್ಟ ಕೆಲಸಗಳಿಗೂ ಕೆಲವು ನಿಯಮಗಳನ್ನು ಸೂಚಿಸುತ್ತದೆ. ತಪ್ಪು ಸಮಯದಲ್ಲಿ ಮಾಡುವ ಕೆಲಸಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು (Negative Energy) ಸೃಷ್ಟಿಸುತ್ತವೆ ಮತ್ತು ಜೀವನದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತವೆ ಎಂಬ ನಂಬಿಕೆಯಿದೆ. ಅಂತಹ ನಿಯಮಗಳಲ್ಲಿ ಒಂದಾದ “ರಾತ್ರಿ ವೇಳೆ ಬಟ್ಟೆಗಳನ್ನು ಒಗೆಯಬಾರದು ಮತ್ತು ಒಣಗಿಸಬಾರದು” ಎಂಬುದರ ಹಿಂದಿರುವ ಧಾರ್ಮಿಕ, ಜ್ಯೋತಿಷ್ಯ ಮತ್ತು ವೈಜ್ಞಾನಿಕ ಕಾರಣಗಳ ಬಗ್ಗೆ ಖ್ಯಾತ ಜ್ಯೋತಿಷಿ…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳ; ಬೆಳ್ಳಿ ಬೆಲೆ ಬದಲಾವಣೆ ಇಲ್ಲ – Kannada News | Gold Price Today on 21st July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 21: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ (Gold Price) ಇವತ್ತು 70 ರೂ ಜಂಪ್ ಪಡೆದಿದೆ. ಕಳೆದ ಮೂರ್ನಾಲ್ಕು ದಿನದಲ್ಲಿ ಬಂಗಾರದ ದರ ಒಂದು ಗ್ರಾಮ್​ಗೆ 155 ರೂನಷ್ಟು ಹೆಚ್ಚಳಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ರಾಷ್ಟ್ರೀಯ ಜವಾಬ್ದಾರಿ: ಎನ್​ಡಿಎ ಸಭೆಯಲ್ಲಿ ಮೋದಿ – Kannada News | NEET Paper Leak: PM Modi Demands Harsh Punishments and Flawless Exam System

ನವದೆಹಲಿ, ಜುಲೈ 21: ಆಡಳಿತಾರೂಢ ಎನ್‌ಡಿಎ (NDA) ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ (NEET) ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅತ್ಯಂತ ಗಂಭೀರವಾಗಿ ಮಾತನಾಡಿದ್ದಾರೆ. “ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ಸರ್ಕಾರದ ಕೇವಲ ಕರ್ತವ್ಯವಲ್ಲ, ಅದೊಂದು ‘ರಾಷ್ಟ್ರೀಯ ಜವಾಬ್ದಾರಿ’ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಸಭೆಯ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯವರ ಮಾತುಗಳನ್ನು ಮಾಧ್ಯಮಗಳಿಗೆ ವಿವರಿಸಿದರು. ಆರೋಪಿಗಳಿಗೆ ಅತ್ಯಂತ ಕಠಿಣ…

Read More

‘ಸಲ್ಮಾನ್ ಫಾರ್ಮ್‌ಹೌಸ್‌ಗೆ ಹೋಗೋದು ಸುಲಭ, ಆದ್ರೆ ವಾಪಸ್ ಬರೋದು ಭಾಯ್ ಇಷ್ಟ’ – Kannada News | Salman Khan Panvel Farmhouse Secrets: Aayush Sharma Reveals Entry Rules and Bhai Exit

ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಪನ್ವೇಲ್ ಫಾರ್ಮ್‌ಹೌಸ್ ಸದಾ ಸುದ್ದಿಯಲ್ಲಿರುತ್ತದೆ. ಸಿನಿಮಾ ತಾರೆಯರು ಹಾಗೂ ಆಪ್ತರಿಂದ ತುಂಬಿ ತುಳುಕುವ ಈ ಐಷಾರಾಮಿ ಫಾರ್ಮ್‌ಹೌಸ್ ಪ್ರವೇಶದ ಬಗ್ಗೆ ನಟನ ಸೋದರ ಭಾವ ಆಯುಷ್ ಶರ್ಮಾ ಇತ್ತೀಚಿನ ಸಂದರ್ಶನವೊಂದರಲ್ಲಿ ಅತ್ಯಂತ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಪ್ರವೇಶಕ್ಕೂ ಮುನ್ನ ಸಲ್ಮಾನ್ ಪರ್ಮಿಷನ್ ಕಡ್ಡಾಯ ‘ದಿ ಲಲ್ಲನ್‌ಟಾಪ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆಯುಷ್, ‘ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್‌ಗೆ ಯಾರೂ ಅಷ್ಟು ಸುಲಭವಾಗಿ ಹೋಗಲು ಸಾಧ್ಯವಿಲ್ಲ. ಸ್ವತಃ ಸಲ್ಮಾನ್ ಅವರೇ ಆಹ್ವಾನ ನೀಡಿದವರಿಗೆ…

Read More

ರೋಹಿತ್-ಕೊಹ್ಲಿಯನ್ನು ಕೈಬಿಡುವ ಧೈರ್ಯ ಮಾಡಬೇಡಿ: ಅಶ್ವಿನ್ ಎಚ್ಚರಿಕೆ – Kannada News | Rohit Sharma, Virat Kohli Are Untouchable: R Ashwin Blasts Critics

ಟೀಮ್ ಇಂಡಿಯಾದ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಫಾರ್ಮ್ ಹಾಗೂ ತಂಡದಲ್ಲಿನ ಸ್ಥಾನದ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅಶ್ವಿನ್, ರೋಹಿತ್ ಮತ್ತು ಕೊಹ್ಲಿ ಅವರ ಸ್ಥಾನವನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ ಅವರನ್ನು ತಂಡದಿಂದ ಕೈ ಬಿಡುವ ಧೈರ್ಯ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ. ಅಶ್ವಿನ್ ಪ್ರಕಾರ, ಈ ಇಬ್ಬರು ದಿಗ್ಗಜರನ್ನು ಪ್ರಸ್ತುತ ಸನ್ನಿವೇಶದಲ್ಲಿ…

Read More

ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್ – Kannada News | West Bengal Women Kidnapped and assaulted in T Narasipur Mysuru; Accused Arrested

ಮೈಸೂರು, ಜುಲೈ 21: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಟಿ. ನರಸೀಪುರದಲ್ಲಿ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಟಿ….

Read More