Headlines

ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸಿಎಂ ಕ್ಲಾಸ್: ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸೂಚನೆ – Kannada News | DK Shivakumar Halts Gutka Ban After Opposition; Health Dept Scrutinized

ಬೆಂಗಳೂರು, ಆ.14: ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು….

Read More

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್ ಪಾಟೀಲ್ ಅವಿರೋಧ ಆಯ್ಕೆ – Kannada News | GS Patil Unanimously Elected As Karnataka Assembly Speaker

ಬೆಂಗಳೂರು, ಆಗಸ್ಟ್ 14: ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಅನುಮೋದಿಸಿದ್ದಾರೆ. ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ನಂತರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮತ್ತು ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಜಿ.ಎಸ್. ಪಾಟೀಲ್ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆತಂದರು. ಈ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ…

Read More

Independence Day 2026: ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – Kannada News | President’s Medals 2026: Karnataka Police Honored for Distinguished Service on Aug 15

ಬೆಂಗಳೂರು, ಆ.14: ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್ 15) ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ವಿಶಿಷ್ಟ ಸೇವಾ ಪದಕ ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ…

Read More

Tirumala: ತಿರುಪತಿಯಲ್ಲಿ ಕಾರುಗಳ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ; ಭಕ್ತರಿಗೆ ಎಸ್‌ಪಿ ನೀಡಿರುವ ಸೂಚನೆಗಳಿವು – Kannada News | Tirumala Parking Thefts: Thief Arrested; SP Issues Crucial Safety Tips for Srivari Devotees

ತಿರುಮಲ: ಶ್ರೀವಾರಿ ದರ್ಶನಕ್ಕಾಗಿ ತಿರುಮಲಕ್ಕೆ ದೇಶಾದ್ಯಂತದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರ ಸುರಕ್ಷತೆಯನ್ನು ಕಾಯುವ ಹಿತದೃಷ್ಟಿಯಿಂದ ತಿರುಪತಿ ಜಿಲ್ಲಾ ಎಸ್ಪಿಯವರ ಆದೇಶದ ಮೇರೆಗೆ ಪೊಲೀಸರು ಪಾರ್ಕಿಂಗ್ ಪ್ರದೇಶಗಳಲ್ಲಿ ತೀವ್ರ ಭದ್ರತಾ ತಪಾಸಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ತಿರುಮಲದ ಪಾರ್ಕಿಂಗ್ ಸ್ಥಳಗಳಲ್ಲಿ ಕಾರುಗಳ ಗಾಜು ಒಡೆದು ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅನುಮಾನಾಸ್ಪದ ಸಂಚಾರ; ವಿಚಾರಣೆ ವೇಳೆ ಬಯಲಾಯ್ತು ಸತ್ಯ: ಪೊಲೀಸರು ಪಾರ್ಕಿಂಗ್ ಸ್ಥಳಗಳಲ್ಲಿ ತಪಾಸಣೆ ನಡೆಸುತ್ತಿದ್ದಾಗ, ರಂಬಗೀಚಾ ಕಾರು…

Read More

ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್​ನಲ್ಲಿ ಎರಡು ಅವಾರ್ಡ್ ಗೆದ್ದ ರಿಷಬ್ ಶೆಟ್ಟಿ – Kannada News | Indian Film Festival of Melbourne 2026: Rishab Shetty, Dulquer Salmaan, Rekha Win Top Honours!  

ಆಸ್ಟ್ರೇಲಿಯಾದಲ್ಲಿ ನಡೆದ 17ನೇ ಆವೃತ್ತಿಯ ‘ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್’ (IFFM 2026) ಚಲನಚಿತ್ರೋತ್ಸವದಲ್ಲಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಭಾರತೀಯ ಚಿತ್ರರಂಗದ ವೈವಿಧ್ಯಮಯ ಕಥೆಗಳು, ನಟನೆ ಮತ್ತು ತಾಂತ್ರಿಕ ಶ್ರೇಷ್ಠತೆಯನ್ನು ಗೌರವಿಸುವ ಈ ಸಮಾರಂಭದಲ್ಲಿ ಕನ್ನಡದ ಹೆಮ್ಮೆಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ದಕ್ಷಿಣ ಮತ್ತು ಉತ್ತರ ಭಾರತದ ಹಲವು ದಿಗ್ಗಜ ಕಲಾವಿದರು ಪ್ರಮುಖ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ರಿಷಬ್ ಶೆಟ್ಟಿಗೆ ಗೌರವ: ಕನ್ನಡ ಚಿತ್ರರಂಗದ ‘ಕಾಂತಾರ: ಚಾಪ್ಟರ್ 1’ ಸಿನಿಮಾಗಾಗಿ ರಿಷಬ್ ಶೆಟ್ಟಿ…

Read More

ಸರಕುಗಳ ಮೇಲೆ ಟ್ಯಾರಿಫ್ ತಪ್ಪಿಸಲು ಚೀನಾದ ಕಳ್ಳದಾರಿಗಳಲ್ಲಿ ಭಾರತವೂ ಒಂದು: ಅಮೆರಿಕ ಗಂಭೀರ ಆರೋಪ – Kannada News | US report accuses India and few other nations used by Chinese companies as shadow trans shipment network

ವಾಷಿಂಗ್ಟನ್, ಆಗಸ್ಟ್ 14: ಚೀನಾದಿಂದ ಕಳ್ಳದಾರಿಗಳಲ್ಲಿ ಸರಕುಗಳು ಹರಿದುಬರುತ್ತಿವೆ ಎನ್ನುವ ಆತಂಕ ಅಮೆರಿಕಕ್ಕೆ ಇನ್ನಿಲ್ಲದಂತೆ ಕಾಡುತ್ತಿದೆ. ಅಮೆರಿಕ ಅಧ್ಯಕ್ಷರ ಗೃಹಕಚೇರಿಯಾದ ಶ್ವೇತಭವನ (White House) ಬಿಡುಗಡೆ ಮಾಡಿರುವ ವರದಿಯೊಂದರಲ್ಲಿ, ಚೀನಾದ ಸರಕುಗಳ ಮೇಲಿನ ಹೆಚ್ಚಿನ ಆಮದು ಸುಂಕವನ್ನು (Tariffs) ತಪ್ಪಿಸಲು ಅಕ್ರಮ ಮಾರ್ಗಗಳನ್ನು ಬಳಸಲಾಗುತ್ತಿರುವ 40ಕ್ಕೂ ಹೆಚ್ಚು ದೇಶಗಳ ಪಟ್ಟಿಯಲ್ಲಿ ಭಾರತವನ್ನು ಪ್ರಮುಖ ಸ್ಥಾನದಲ್ಲಿ (Tier-1) ಹೆಸರಿಸಲಾಗಿದೆ. ಕೆನಡಾ, ಯೂರೋಪಿಯನ್ ಯೂನಿಯನ್, ದಕ್ಷಿಣ ಕೊರಿಯಾ ಇತ್ಯಾದಿ ಅಮೆರಿಕದ ಮಿತ್ರ ದೇಶಗಳೂ ಈ ಪ್ರಮುಖ ಪಟ್ಟಿಯಲ್ಲಿರುವುದು ಗಮನಾರ್ಹ. ‘ದಿ…

Read More

‘ಇಂಥಹಾ ವ್ಯಕ್ತಿಯ ನೋಡಿರಲಿಲ್ಲ’ ಯಶ್​​ ಬಗ್ಗೆ ಸ್ಟಾರ್ ಪತ್ರಕರ್ತ ರಜತ್ ಶರ್ಮಾ ಅಚ್ಚರಿ – Kannada News | Rajat Sharma praised Yash, says I never seen such a super star

ರಜತ್ ಶರ್ಮಾ (Rajat Sharma), ಭಾರತೀಯ ಪತ್ರಿಕೋದ್ಯಮದಲ್ಲಿ ಬಲು ದೊಡ್ಡ ಹೆಸರು. ಇಂಡಿಯಾ ಟುಡೆಯ ಎಡಿಟರ್ ಇನ್ ಚೀಫ್ ಆಗಿರುವ ರಜತ್ ಅವರು ಕರೆದರೆ ಇಲ್ಲ ಎನ್ನುವ ರಾಜಕಾರಣಿ, ಸಿನಿಮಾ ಸೆಲೆಬ್ರಿಟಿಗಳಿಲ್ಲ. ಅವರು ನಡೆಸಿಕೊಡುವ ‘ಆಪ್​ ಕಿ ಅದಾಲತ್’ ಕಾರ್ಯಕ್ರಮಕ್ಕೆ ಪ್ರಧಾನಿ, ಮಾಜಿ ಪ್ರಧಾನಿ, ಹಲವಾರು ಸಚಿವರು, ಮುಖ್ಯಮಂತ್ರಿಗಳು, ದೊಡ್ಡ ಕ್ರೀಡಾ ತಾರೆಯರು, ಬಾಲಿವುಡ್​​ನ ಖಾನ್​​ ತ್ರಯರು ಎಲ್ಲರೂ ಬಂದು ಹೋಗಿದ್ದಾರೆ. ಹಾಗೆ ಬಂದವರಿಗೆ ರಜತ್ ಶರ್ಮಾ, ಕೆಂಡದಂಥಹಾ ಪ್ರಶ್ನೆಗಳನ್ನೇ ಕೇಳುತ್ತಾರೆ. ಇದೀಗ ಅವರ ಆಪ್​​ ಕಿ…

Read More

ಪಿಎಸ್‌ಐ ಮೇಲೆ ಪುತ್ರಿ ಕಪಾಳಮೋಕ್ಷ ಪ್ರಕರಣ: ಮಗಳ ಪರವಾಗಿ ಬಹಿರಂಗ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ – Kannada News | Srirangapatna PSI Assault: MLA Suresh Gowda Seeks Justice, End to VIP Culture

ಮಂಡ್ಯ, ಆ.14: ಶ್ರೀರಂಗಪಟ್ಟಣದ ಆರತಿ ಉಕ್ಕಡ ದೇವಸ್ಥಾನದಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಶಾಸಕರ ಪುತ್ರಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರು ತಮ್ಮ ಮಗಳ ಪರವಾಗಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. “ಯಾರೇ ಆಗಿರಲಿ ತಪ್ಪು ಮಾಡಿದ್ದರೆ ಕಾನೂನಿನಂತೆ ಶಿಕ್ಷೆಯಾಗಲಿ, ನಾವು ಸಾರ್ವಜನಿಕ ಜೀವನದಲ್ಲಿರುವಾಗ ತಾಳ್ಮೆ ಕಳೆದುಕೊಳ್ಳಬಾರದು” ಎಂದು ಸುರೇಶ್‌ಗೌಡ ಅವರು ಹೇಳಿದ್ದಾರೆ. “ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಚಿಕ್ಕ ಮಕ್ಕಳನ್ನು ಕರೆದುಕೊಂಡು ಆರತಿ ಉಕ್ಕಡ…

Read More

ಭಾರತದ ಉಜ್ವಲ ಭವಿಷ್ಯಕ್ಕಾಗಿ ಸಾಮೂಹಿಕ ಹೊಣೆಗಾರಿಕೆ: ಸುನಿಲ್ ಅಂಬೇಕರ್ – Kannada News | Sunil Ambekar: RSS Framework for Collective Responsibility and Nation Building

ಬೆಂಗಳೂರು, ಆಗಸ್ಟ್ 14: ಆರ್‌ಎಸ್‌ಎಸ್ (RSS) ಅಖಿಲ ಭಾರತ ಪ್ರಚಾರ ಪ್ರಮುಖ ಸುನಿಲ್ ಅಂಬೇಕರ್, ಭಾರತವು ಕೇವಲ ಆಧುನಿಕ ರಾಷ್ಟ್ರವಲ್ಲ; ಇದು ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆ ಹಾಗೂ ಸಾಮೂಹಿಕ ಕಲ್ಯಾಣದ ತತ್ತ್ವದ ಮೇಲೆ ನಿಂತಿರುವ ಜೀವಂತ ನಾಗರಿಕತೆಯಾಗಿದೆ ಎಂದು ತಮ್ಮ ಲೇಖನವೊಂದರಲ್ಲಿ ಬರೆದುಕೊಂಡಿದ್ದಾರೆ. ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಸಂದರ್ಭದಲ್ಲಿ ಐದು ಪ್ರಮುಖ ತತ್ತ್ವಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಸುನಿಲ್ ಅಂಬೇಕರ್ ಉಲ್ಲೇಖಿಸಿದ್ದಾರೆ. ಸಾಂಸ್ಕೃತಿಕ ಬೇರುಗಳು ಮತ್ತು ಸಾಮೂಹಿಕ ಹೊಣೆಗಾರಿಕೆ ರಾಷ್ಟ್ರದ ಉಜ್ವಲ ಭವಿಷ್ಯ…

Read More

Vidura Niti: ಜೀವನದಲ್ಲಿ ಈ 5 ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ!

ಹಲವು ಬಾರಿ ನಾವು ನಮ್ಮ ವೈಯಕ್ತಿಕ ವಿಷಯಗಳನ್ನು ಇತರರೊಂದಿಗೆ ಹಂಚಿಕೊಂಡು ಬಿಡುತ್ತೇವೆ. ಆದರೆ ನಂತರದ ದಿನಗಳಲ್ಲಿ ಅದರಿಂದಲೇ ದೊಡ್ಡ ಮಟ್ಟದ ನಷ್ಟ ಅಥವಾ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ. ಮಹಾಭಾರತದಲ್ಲಿ ವಿವರಿಸಲಾದ ವಿದುರ ನೀತಿಯು ಮಾನವ ಜೀವನಕ್ಕೆ ಅತ್ಯಂತ ಪ್ರಾಯೋಗಿಕ ಹಾಗೂ ಮೌಲ್ಯಯುತ ಮಾರ್ಗದರ್ಶನ ನೀಡುತ್ತದೆ. ವಿದುರ ನೀತಿಯ ಪ್ರಕಾರ, ಒಬ್ಬ ವ್ಯಕ್ತಿಯು ತಾನು ಸುರಕ್ಷಿತವಾಗಿರಲು ಮತ್ತು ಜೀವನದಲ್ಲಿ ಯಶಸ್ಸು ಕಾಣಲು ಕೆಲವು ವಿಷಯಗಳನ್ನು ಎಂದಿಗೂ ಸಾರ್ವಜನಿಕವಾಗಿ ಹಂಚಿಕೊಳ್ಳಬಾರದು. ಇಂದಿನ ಆಧುನಿಕ ಯುಗದಲ್ಲೂ ಜಾಗರೂಕರಾಗಿರಲು ಮತ್ತು ನಮ್ಮ ಖಾಸಗಿ ಜೀವನವನ್ನು…

Read More