ಆರತಕ್ಷತೆಗೆ ತೆರಳುವಾಗ ಅಡ್ಡಗಟ್ಟಿ ವರನಿಗೆ ಚಾಕು ಇರಿತ ಕೇಸ್ಗೆ ಬಿಗ್ ಟ್ವಿಸ್ಟ್, ಮದ್ವೆಯಾಗಬೇಕಿದ್ದವಳೇ ವಿಲನ್ – Kannada News | Big Twist To Chamarajanagar Groom stabbed Case: Bride And Her Lover arrested Who Attacked On Ravish for Stop marriage
ಚಾಮರಾಜನಗರ, (ಫೆಬ್ರವರಿ 01): ಕೊಳ್ಳೇಗಾಲದಲ್ಲಿ (Kollegala) ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ. ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್ ಎನ್ನುವಾತನನ್ನು ನಯನಾ…