ನೂತನ ಸಚಿವರ ಪಟ್ಟಿಗೆ ಸಿದ್ದರಾಮಯ್ಯ ಅಸಮಾಧಾನ? ಮಾಜಿ ಸಿಎಂ ಬೇಸರಕ್ಕೆ ಕಾರಣವಾದ ಅಂಶಗಳು ಇಲ್ಲಿವೆ – Kannada News | Siddaramaiah Unhappy With Karnataka Cabinet List? 7 Reasons Behind Congress Debate
ಬೆಂಗಳೂರು, ಆಗಸ್ಟ್ 4: ಒಂದೆಡೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕರು ಹಾಗೂ ಅವರ ಬೆಂಬಲಿಗರ ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ, ಮತ್ತೊಂದೆಡೆ ನೂತನ ಸಚಿವರ ಪಟ್ಟಿಯ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಅಸಮಾಧಾನ ಉಂಟಾಗಿದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರವಾಗಿದೆ. ತಮ್ಮ ಶಿಫಾರಸುಗಳಿಗೆ ಹೈಕಮಾಂಡ್ ಸೂಕ್ತ ಮನ್ನಣೆ ನೀಡಿಲ್ಲ ಎಂಬ ಬೇಸರ ಸಿದ್ದರಾಮಯ್ಯ ಅವರಿಗೆ ಇದೆ ಎನ್ನಲಾಗುತ್ತಿದ್ದು, ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಅವರು ಗೈರಾಗಿರುವುದು ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ. ಸಿದ್ದರಾಮಯ್ಯ…