ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ! – Kannada News | Namma Metro Green Line Disrupted: Trains Suspended Between Yeshwanthpur and Madavara
ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ. ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ ವಿದ್ಯುತ್ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ…