ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್! – Kannada News | Bengaluru Drug Bust: Rs 14.75 Crore Worth Hydro Ganja and MDMA Seized; 6 Peddlers Arrested
ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ (Drugs) ವಶಪಡಿಸಿಕೊಳ್ಳಲಾಗಿದೆ. ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ಒಟ್ಟು 13 ಕೆಜಿ 700 ಗ್ರಾಂ ತೂಕದ ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ….