ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು
ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ (Ramayana) ಸಿನಿಮಾದ ಟೀಸರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಆದರೆ, ಟೀಸರ್ (Ramayana Teaser) ಬಿಡುಗಡೆಯಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ರಣಬೀರ್ ಕಪೂರ್ (Ranbir Kapoor) ಅವರ ಶ್ರೀರಾಮನ ಅವತಾರ ನೆಟ್ಟಿಗರ ವಿಮರ್ಶೆಗೆ ಗುರಿಯಾಗಿದೆ. ಅಲ್ಲದೇ, ಈ ಟೀಸರ್ನ ವಿಎಫ್ಎಕ್ಸ್ ದೃಶ್ಯಗಳು ಸಮಾಧಾನಕರವಾಗಿಲ್ಲ ಎಂದು ಜನರು ಅಭಿಪ್ರಾಯ ತಿಳಿಸುತ್ತಿದ್ದಾರೆ. ಅದ್ದೂರಿ ಕಾರ್ಯಕ್ರಮದ…