ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಚಾರ್ ಧಾಮ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ – Kannada News | Char Dham Yatra Suspended Temporarily amid Heavy Rainfall and Landslides In Uttarakhand
ಡೆಹ್ರಾಡೂನ್, ಜುಲೈ 20: ಉತ್ತರಾಖಂಡ (Uttarakhand Rains) ರಾಜ್ಯಾದ್ಯಂತ ಮುಂದುವರಿದಿರುವ ನಿರಂತರ ಮಳೆ, ಭೀಕರ ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದಿನಿಂದ (ಸೋಮವಾರ) ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ‘ಚಾರ್ ಧಾಮ್ ಯಾತ್ರೆ’ಯನ್ನು(Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ, ಯಾತ್ರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿರುವ ಉತ್ತರಾಖಂಡ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ….