ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವ ಇದ್ದರೂ ಅಪಾಯ ಫಿಕ್ಸ್, ಯಾಕೆ ಗೊತ್ತಾ?
ಕೊಡಗು, ಏಪ್ರಿಲ್ 07: ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಬರೋಬ್ಬರಿ 4 ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದರು. ಆ ಬೆನ್ನಲ್ಲೇ ಅರಣ್ಯ ಇಲಾಖೆ ಕೊಡಗಿನ ತಡಿಯಂಡಮೋಳ ಟ್ರೆಕ್ಕಿಂಗ್ ಮಾರ್ಗವನ್ನು ಏಪ್ರಿಲ್ 11ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಈ ಮಾರ್ಗದಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ಯೋಜನೆ ಕೈಗೊಂಡಿರುವ ಹಿನ್ನೆಲೆ ಈ ನಿರ್ದಾರ ಕೈಗೊಂಡಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ ಸೋಲೋ ಟ್ರೆಕ್ಕಿಂಗ್ ಸಾಕಷ್ಟು ಅಪಾಯಕ್ಕೆ ಕಾರಣವಾಗಿರುವ ಕಾರಣ ಒಬ್ಬಂಟಿಯಾಗಿ…