IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ – Kannada News | Rahmanullah Gurbaz Century vs India: Gill’s DRS Blunder Costs Dearly in Dharamshala ODI
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಸ್ಫೋಟಕ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು…